Parliament

'ಮೇಕ್ ಇನ್ ಇಂಡಿಯಾ', 'ಆತ್ಮನಿರ್ಭರ್ ಭಾರತ್' ನಮ್ಮ ಶಕ್ತಿ, ರಾಮಮಂದಿರ ನಿರ್ಮಾಣ ಕನಸು ಇಂದು ನನಸು: ರಾಷ್ಟ್ರಪತಿ ದ್ರೌಪದಿ ಮುರ್ಮು
ಅಭಿವೃದ್ಧಿ ಹೊಂದಿದ ಭಾರತದ ಭವ್ಯ ಸೌಧವು ಯುವ ಶಕ್ತಿ, ಮಹಿಳಾ ಶಕ್ತಿ, ರೈತರು ಮತ್ತು ಬಡವರು ಎಂಬ ನಾಲ್ಕು ಬಲವಾದ ಸ್ತಂಭಗಳ ಮೇಲೆ ನಿಂತಿದೆ ಎಂದು ನನ್ನ ಸರ್ಕಾರ ನಂಬುತ್ತದೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದ್ದಾರೆ.

‘ಗರೀಬಿ ಹಠಾವೋ’ ಘೋಷಣೆಯನ್ನು ನಾವು ಕೇಳಿದ್ದೆವು, ಇಂದು ಅದನ್ನು ನೋಡುತ್ತಿದ್ದೇವೆ: ರಾಷ್ಟ್ರಪತಿ ದ್ರೌಪದಿ ಮುರ್ಮು
ಸಂಸತ್ತಿನ ಬಜೆಟ್ ಅಧಿವೇಶನ ಇಂದು ಬುಧವಾರ ಆರಂಭವಾಗಿದ್ದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಬಜೆಟ್ ಅಧಿವೇಶನ ಆರಂಭದಲ್ಲಿ ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ಭಾಷಣ ಮಾಡಿದರು.

ಜನವರಿ 31 ರಿಂದ ಫೆಬ್ರವರಿ 9ರ ವರೆಗೆ ಸಂಸತ್ ಬಜೆಟ್ ಅಧಿವೇಶನ ನಡೆಯುವ ಸಾಧ್ಯತೆ
ಸಂಸತ್ ಬಜೆಟ್ ಅಧಿವೇಶನವು ಜನವರಿ 31 ರಿಂದ ಫೆಬ್ರವರಿ 9 ರ ವರೆಗೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಮಹುವಾ ಮೊಯಿತ್ರಾ ಉಚ್ಚಾಟನೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ, ಮಾರ್ಚ್‌ನಲ್ಲಿ ಮುಂದಿನ ವಿಚಾರಣೆ
ಕಳೆದ ತಿಂಗಳು ಸಂಸದ ಸ್ಥಾನದಿಂದ ತಮ್ಮನ್ನು ಉಚ್ಚಾಟಿಸಿರುವುದನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಲೋಕಸಭೆ ಪ್ರಧಾನ ಕಾರ್ಯದರ್ಶಿಗೆ ಬುಧವಾರ ನೋಟಿಸ್ ಜಾರಿ ಮಾಡಿದೆ.

ಸಂಸತ್ತಿನ ಭದ್ರತಾ ಲೋಪ ಪ್ರಕರಣ: ಪೊಲೀಸ್ ಕಸ್ಟಡಿ ವಿರುದ್ಧ ಸಲ್ಲಿಸಿದ್ದ ನೀಲಂ ಆಜಾದ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಸಂಸತ್ತಿನ ಭದ್ರತಾ ಲೋಪ ಪ್ರಕರಣದಲ್ಲಿ ಡಿಸೆಂಬರ್ 13 ರಂದು ಬಂಧಿತರಾಗಿರುವ ಆರೋಪಿ ನೀಲಂ ಆಜಾದ್ ತನ್ನ ಪೊಲೀಸ್ ಕಸ್ಟಡಿ ಕಾನೂನುಬಾಹಿರ ಎಂಬ ಕಾರಣಕ್ಕಾಗಿ ತನ್ನನ್ನು ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.

ರಾಜ್ಯಸಭೆಯಲ್ಲೂ ಟೆಲಿಕಾಂ ಮಸೂದೆ ಅಂಗೀಕಾರ
ದೂರಸಂಪರ್ಕ ವಲಯವನ್ನು ನಿಯಂತ್ರಿಸುವ 138 ವರ್ಷಗಳಷ್ಟು ಹಳೆಯದಾದ ಭಾರತೀಯ ಟೆಲಿಗ್ರಾಫ್ ಕಾಯಿದೆಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ಮಂಡಿಸಿದ್ದ ದೂರಸಂಪರ್ಕ ಮಸೂದೆ 2023 ಅನ್ನು ಗುರುವಾರ ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ.

ಸಿಐಎಸ್‌ಎಫ್‌ಗೆ ಸಂಸತ್ ಕಟ್ಟಡ ಭದ್ರತೆ ಹಸ್ತಾಂತರಿಸಿದ ಸರ್ಕಾರ!
ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. ಇತ್ತೀಚಿಗೆ ನಡೆದ ಭದ್ರತಾ ಲೋಪ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ಇಂದು ಡಿಕೆ ಸುರೇಶ್ ಸೇರಿ ಮೂವರು ಸಂಸದರ ಅಮಾನತು: ಸಸ್ಪೆಂಡ್ ಆದವರ ಸಂಖ್ಯೆ 146ಕ್ಕೆ ಏರಿಕೆ
ಸಂಸತ್ ಭದ್ರತಾ ಲೋಪ ಖಂಡಿಸಿ ಕಲಾಪಕ್ಕೆ ಅಡ್ಡಿಪಡಿಸಿದ ಮೂವರು ಕಾಂಗ್ರೆಸ್ ಸಂಸದರನ್ನು ಗುರುವಾರ ಚಳಿಗಾಲದ ಅಧಿವೇಶನದ ಉಳಿದ ಭಾಗಕ್ಕೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದ್ದು, ಇದರೊಂದಿಗೆ ಅಮಾನತುಗೊಂಡ ಸಂಸದರ ಸಂಖ್ಯೆ 146ಕ್ಕೆ ಏರಿಸಲಾಗಿದೆ.

ಲೋಕಸಭೆಯಲ್ಲಿ ಪ್ರತಿಪಕ್ಷದ ಒಟ್ಟು 138 ಸಂಸದರ ಪೈಕಿ ಸಂಸತ್ತಿನಲ್ಲಿ ಉಳಿದಿರುವುದು 43 ಮಾತ್ರ!
ಲೋಕಸಭೆಯಲ್ಲಿ ಸಂಸದರ ಅಮಾನತು ಸರಣಿ ಇಂದು ಸಹ ಮುಂದುವರೆದಿದ್ದು, ಚಳಿಗಾಲದ ಅಧಿವೇಶನದ ಅವಧಿಗೆ INDIA ಕೂಟದ ತನ್ನ ಮೂರನೇ ಎರಡರಷ್ಟು ಬಲವನ್ನು ಕಳೆದುಕೊಂಡಿದೆ.

