Party workers

ಚಿಕ್ಕಮಗಳೂರು: ರಸ್ತೆ ದುರಸ್ತಿ ಮಾಡದ ಜನಪ್ರತಿನಿಧಿಗಳ ವರ್ತನೆಗೆ ಬೇಸತ್ತು ಮೂರೂ ಪಕ್ಷಗಳ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ!
ಮೂಲಭೂತ ಸೌಕರ್ಯ ಒದಗಿಸಿಕೊಟ್ಟಿಲ್ಲ, ಸರಿಯಾಗಿ ರಾಜಕಾರಣಿಗಳು ಕೆಲಸ ಮಾಡುತ್ತಿಲ್ಲ ಎಂದು ಅಲ್ಲಲ್ಲಿ ಗ್ರಾಮಸ್ಥರು, ಜನರು ಮತ ಚಲಾವಣೆ ಮಾಡದಿರುವುದು ಕೇಳಿದ್ದೇವೆ, ನೋಡಿದ್ದೇವೆ. ಇಲ್ಲಿ ಜನರಿಗೆ ಸರಿಯಾಗಿ ಪಕ್ಷಗಳ ರಾಜಕಾರಣಿಗಳು ಸ್ಪಂದಿಸುತ್ತಿಲ್ಲ, ರಸ್ತೆ ಕಾಮಗಾರಿ ಮಾಡಿಕೊಟ್ಟಿಲ್ಲ ಎಂದು ರಾಜ್ಯದ ಮೂರೂ ಪಕ್ಷಗಳ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

ಮಹಾರಾಷ್ಟ್ರ: ಮಧ್ಯಂತರ ಚುನಾವಣೆಗೆ ಸಿದ್ಧರಾಗಿ; ಪಕ್ಷದ ಕಾರ್ಯಕರ್ತರಿಗೆ ಉದ್ಧವ್ ಠಾಕ್ರೆ ಕರೆ
ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಭವಿಷ್ಯ ನುಡಿದಿದ್ದಾರೆ ಮತ್ತು ಈಗಿನಿಂದಲೇ ಸಿದ್ಧತೆಗಳನ್ನು ಪ್ರಾರಂಭಿಸಲು ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ.

ಮೋದಿ ಸ್ವಾಗತಕ್ಕೂ ಮುನ್ನ ಕಟೀಲ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ: ಸಂಸದರ ವಿರುದ್ಧ ಅಸಮಾಧಾನ!
ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇನ್ನೊಂದು ಅವಧಿಗೆ ಸಂಸದರಾಗಿ ಮುಂದುವರಿಯಲು ಅವಕಾಶ ಕಲ್ಪಿಸಬಾರದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ‘ಹಿಂದುತ್ವ’ ಕಾರ್ಯಕರ್ತರು ಅಭಿಯಾನ ನಡೆಸುತ್ತಿದ್ದಾರೆ.

ಪ್ರತಿಭಟನೆಗಳಿಂದ ಪ್ರಯೋಜನವಿಲ್ಲ, ಕಾಂಗ್ರೆಸ್ಸಿಗರು ಪ್ರದರ್ಶಕತೆ ತೊರೆಯಬೇಕು: ವೀರಪ್ಪ ಮೊಯ್ಲಿ
ಪ್ರತಿಭಟನೆಗಳು, ಘೋಷಣೆ ಪಕ್ಷಕ್ಕೆ ಪ್ರಯೋಜನೆ ತರುವುದಿಲ್ಲ, ಪಕ್ಷ ಕಾರ್ಯಕರ್ತರು ಪ್ರದರ್ಶಕತೆಗಳ ಬಿಟ್ಟು ಬೂತ್ ಮಟ್ಟದಲ್ಲಿ ಶ್ರಮಿಸಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ.ವೀರಪ್ಪ ಮೊಯ್ಲಿಯವರು ಹೇಳಿದ್ದಾರೆ.

ಕಾರ್ಯಕರ್ತರಲ್ಲಿ ಕೆಲ ಭಿನ್ನಾಭಿಪ್ರಾಯಗಳಿದ್ದರೂ, ಎಲ್ಲರೂ ಒಗ್ಗಟ್ಟಿನಿಂದ ಇದ್ದಾರೆ; ನಾಯಕತ್ವ ಬದಲಾವಣೆಯಿಲ್ಲ: ಅರುಣ್ ಸಿಂಗ್
ಪಕ್ಷದ ಕಾರ್ಯಕರ್ತರಲ್ಲಿ ಕೆಲವೊಮ್ಮೆ ಭಿನ್ನಾಭಿಪ್ರಾಯ, ಅಸಮಾಧಾನ ಬರುವುದು ಸಾಮಾನ್ಯ, ಆದರೆ ಅವರೆಲ್ಲರೂ ಒಗ್ಗಟ್ಟಾಗಿದ್ದಾರೆ, ಪಕ್ಷದ ವಿಷಯ ಬಂದಾಗ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಇದು ಸಂಭ್ರಮಾಚರಣೆ ಮಾಡುವ ಸಮಯವಲ್ಲ, ಫಲಿತಾಂಶವನ್ನು ಸಮಚಿತ್ತದಿಂದ ಸ್ವೀಕರಿಸೋಣ: ಡಿ ಕೆ ಶಿವಕುಮಾರ್
ಮಸ್ಕಿ ವಿಧಾನಸಭಾ ಕ್ಷೇತ್ರ ಸೇರಿದಂತೆ ಇಂದು ಚುನಾವಣಾ ಫಲಿತಾಂಶ ಪ್ರಕಟವಾಗಿ ಗೆದ್ದ ಅಭ್ಯರ್ಥಿಗಳು ಮತ್ತು ಪಕ್ಷದ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಸಂಭ್ರಮಾಚರಣೆ ಮಾಡಬೇಡಿ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ನಾಯಕರ ಕುರಿತು ಅವಹೇಳನಕಾರಿ ಹೇಳಿಕೆ ಬೇಡ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಮನವಿ
ಸಾಮಾಜಿಕ ಜಾಲತಾಣಗಳಲ್ಲಿ ರಾಜಕೀಯ ನಾಯಕರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಮನವಿ ಮಾಡಿಕೊಂಡಿದ್ದಾರೆ.

ಸಕ್ರಿಯರಾದ ಬಿಜೆಪಿ ಹೊಸ ಸಚಿವರು: ಕಾರ್ಯಕರ್ತರ ಜೊತೆ ಸಮಾಲೋಚನೆ
ತಿಂಗಳ ನಂತರ ಬಿಜೆಪಿ ಪ್ರಧಾನ ಕಚೇರಿ ಚಟುವಟಿಕೆಯ ಆಗರವಾಗಿತ್ತು. ಬಿಜೆಪಿ ಇಬ್ಬರು ನೂತನ ಸಚಿವರಾದ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಭೆ ನಡೆಸಿದರು.

ಕಾರ್ಯಕರ್ತರಿಗೆ ಹಣ ಹಂಚುತ್ತಿರುವ ವಿಡಿಯೊ ವೈರಲ್: ಡಿಸಿಎಂ ಕಾರಜೋಳ ವಿರುದ್ಧ ಕಾಂಗ್ರೆಸ್ ದೂರು ದಾಖಲು
ದಿನದಿಂದ ದಿನಕ್ಕೆ ಉಪ ಚುನಾವಣಾ ಕಣ ರಂಗೇರುತ್ತಿದ್ದು, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರಿಗೆ ಹಣ ಹಂಚುತ್ತಿರುವ ವಿಡಿಯೊ ವೈರಲ್ ಆಗಿದೆ.

