passed away

ಜಿಮ್ ನಲ್ಲಿ ವ್ಯಾಯಾಮ ಮಾಡುವ ವೇಳೆ ಹೃದಯಾಘಾತ: ಸಲ್ಮಾನ್ ಖಾನ್ 'ಡ್ಯೂಪ್' ಸಾಗರ್ ಪಾಂಡೆ ನಿಧನ
ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಅವರ ಸಾಕಷ್ಟು ಸಿನಿಮಾಗಳಲ್ಲಿ ಡ್ಯೂಪ್ ಆಗಿ ಕಾಣಿಸಿಕೊಳ್ಳುತ್ತಿದ್ದ ಸಾಗರ್ ಪಾಂಡೆ ನಿಧನರಾಗಿದ್ದಾರೆ. ಜಿಮ್ ನಲ್ಲಿ ವ್ಯಾಯಾಮ ಮಾಡುವ ವೇಳೆ ಹೃದಯಾಘಾತವಾಗಿ ಇಹಲೋಕ ತ್ಯಜಿಸಿದ್ದಾರೆ.

'ಸೂಪರ್ ಸ್ಟಾರ್' ಕುಟುಂಬಕ್ಕೆ ಮತ್ತೊಂದು ಆಘಾತ: ಪ್ರಿನ್ಸ್ ಮಹೇಶ್ ಬಾಬು ತಾಯಿ ಇಂದಿರಾ ದೇವಿ ವಿಧಿವಶ
ತೆಲುಗು ನಟ 'ಪ್ರಿನ್ಸ್' ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಇಂದು (ಸೆ.28) ಮುಂಜಾನೆ ವಿಧಿವಶರಾಗಿದ್ದಾರೆ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಇಂದಿರಾ ದೇವಿ ಅವರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಕೆಲ ವಾರಗಳ ಹಿಂದೆ ದಾಖಲು ಮಾಡಲಾಗಿತ್ತು.

ಪಾಕಿಸ್ತಾನದ ಮಾಜಿ ಅಂಪೈರ್ ಅಸದ್ ರೌಫ್ ಹೃದಯಾಘಾತದಿಂದ ನಿಧನ
ಪಾಕಿಸ್ತಾನದ ಅಂಪೈರ್ ಅಸದ್ ರೌಫ್ (66) ಹಠಾತ್ ಹೃದಯಾಘಾತದಿಂದ ಬುಧವಾರ ಲಾಹೋರ್‌ನಲ್ಲಿ ನಿಧನರಾಗಿದ್ದಾರೆ. ನಿಧನದ ಸುದ್ದಿಯನ್ನು ಅವರ ಸಹೋದರ ತಾಹಿರ್ ಖಚಿತಪಡಿಸಿದ್ದು, ಹೃದಯ ಸ್ತಂಭನದಿಂದ ಸಹೋದರ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮಗಳು ಜಾನಕಿ ಖ್ಯಾತಿಯ ಚಂದು ಭಾರ್ಗಿ ವಿಧಿವಶ: ರವಿ ಪ್ರಸಾದ್ ನಿಧನಕ್ಕೆ ಟಿ.ಎನ್ ಸೀತಾರಾಮ್ ಸಂತಾಪ
ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿ ಪಾತ್ರದಲ್ಲಿ ಪ್ರೇಕ್ಷಕರ ಹೃದಯ ಗೆದ್ದಿದ್ದ ನಟ ಮಂಡ್ಯ ರವಿ ನಿಧನರಾಗಿದ್ದಾರೆ. ಈ ಬಗ್ಗೆ ಬಿಜಿಎಸ್ ಆಸ್ಪತ್ರೆ ವೈದ್ಯರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಬಿಜೆಪಿ ನಾಯಕಿ, ಟಿಕ್ಟಾಕ್ ಸ್ಟಾರ್ ಸೋನಾಲಿ ಫೋಗಟ್ ಗೋವಾದಲ್ಲಿ ನಿಧನ!
ಬಿಜೆಪಿ ನಾಯಕಿ, ಟಿಕ್ ಟಾಕ್ ಸ್ಟಾರ್, ನಟಿ ಸೋನಾಲಿ ಫೋಗಟ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆಗಸ್ಟ್ 22ರಂದು ಸೋಮವಾರ ರಾತ್ರಿ ನಟಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ

ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನರಾಗಿದ್ದಾರೆ.ಅವರಿಗೆ 45 ವರ್ಷ ವಯಸ್ಸಾಗಿತ್ತು.

ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಶಾಸಕ ಸುಭಾಶ್ ಸಿಂಗ್ ಇನ್ನಿಲ್ಲ
ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಶಾಸಕ ಮತ್ತು ಬಿಹಾರದ ಮಾಜಿ ಸಚಿವ ಸುಭಾಶ್ ಸಿಂಗ್ ಮಂಗಳವಾರ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಿಂದಿ ಸಿನಿಮಾ ನಟ, ರಂಗಭೂಮಿ ಕಲಾವಿದ ಮಿಥಿಲೇಶ್ ಚತುರ್ವೇದಿ ನಿಧನ
ಬಾಲಿವುಡ್ ನಟ, ರಂಗಭೂಮಿ ಕಲಾವಿದ, ಹೃತಿಕ್ ರೋಶನ್ ಅವರ 'ಕೋಯಿ ಮಿಲ್ ಗಯಾ' ಸೇರಿದಂತೆ ಹಲವು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದ ನಟ ಮಿಥಿಲೇಶ್ ಚತುರ್ವೇದಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅರ್ಜುನ್ ಸರ್ಜಾಗೆ ಮತ್ತೊಂದು ಆಘಾತ: ತಾಯಿ ಲಕ್ಷ್ಮೀದೇವಿ ವಿಧಿವಶ
ಖ್ಯಾತ ನಟ ಅರ್ಜುನ್ ಸರ್ಜಾ ತಾಯಿ ಧ್ರುವ ಸರ್ಜಾ ಅಜ್ಜಿ, ಹಿರಿಯ ನಟ ಶಕ್ತಿ ಪ್ರಸಾದ್ ಪತ್ನಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ

