passed away

ಮಲಯಾಳಂ ಸಿನಿಮಾ ರಂಗದ ಖ್ಯಾತ ನಟಿ ಸುಬಿ ಸುರೇಶ್ ನಿಧನ: 41ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ನಿರೂಪಕಿ
ಅನಾರೋಗ್ಯದಿಂದ ಬಳಲುತ್ತಿದ್ದ ಮಲಯಾಳಂ ಕಿರುತೆರೆ ನಟಿ ಹಾಗೂ ನಿರೂಪಕಿ ಸುಬಿ ಸುರೇಶ್ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ಅವರಿಗೆ 41 ವರ್ಷ ವಯಸ್ಸಾಗಿತ್ತು.

ಯಕ್ಷಗಾನ ಕಲಾವಿದ, ಖ್ಯಾತ ಸಾಹಿತಿ, ಹರಿದಾಸ ಅಂಬಾತನಯ ಮುದ್ರಾಡಿ ವಿಧಿವಶ
ಸಾಹಿತಿ, ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂಬಾತನಯ ಮುದ್ರಾಡಿ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಬೆಂಗಳೂರು: ತೆಲುಗು ನಟ ನಂದಮೂರಿ ತಾರಕರತ್ನ ವಿಧಿವಶ
ತೀವ್ರ ಹೃದಯಾಘಾತಕ್ಕೀಡಾಗಿದ್ದ ತಾರಕರತ್ನ ಅವರಿಗೆ ನಾರಾಯಣ ಹೃದಯಾಲಯದಲ್ಲಿ ಕಳೆದ 23 ದಿನಗಳಿಂದ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಎಸ್.ಎಂ.ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದ ಹಿರಿಯ ರಾಜಕಾರಣಿ ಟಿ. ಜಾನ್ ವಿಧಿವಶ
ಹಿರಿಯ ರಾಜಕಾರಣಿ, ಕೊಡುಗೈ ದಾನಿ ಎಂದೇ ಖ್ಯಾತರಾಗಿದ್ದ ಟಿ. ಜಾನ್ ಬೆಂಗಳೂರಿನ ಸ್ವನಿವಾಸದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಪಾಕಿಸ್ತಾನದ ಮಾಜಿ ಅಧ್ಯಕ್ಷ 79 ವರ್ಷದ ಪರ್ವೇಜ್ ಮುಷರಫ್ ನಿಧನ
ಪಾಕಿಸ್ತಾನದ ಮಾಜಿ ಅಧ್ಯಕ್ಷ ಹಾಗೂ ಮಾಜಿ ಸೇನಾ ಮುಖ್ಯಸ್ಥ ಜನರಲ್ ಪರ್ವೇಜ್ ಮುಷರಫ್ ಅವರು ಭಾನುವಾರ ದುಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಕನ್ನಡದ ಖ್ಯಾತ ಖಳನಟ ಲಕ್ಷ್ಮಣ್ ವಿಧಿವಶ
ಹಿರಿಯ ನಟ ಲಕ್ಷ್ಮಣ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಲಕ್ಷ್ಮಣ್ ಅವರಿಗೆ 74 ವರ್ಷವಾಗಿತ್ತು. ಲಕ್ಷ್ಮಣ್ ಅವರು ಅಂಬರೀಶ್, ವಿಷ್ಣುವರ್ಧನ್ ಅವರ ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದರು.

ರಾಹುಲ್ ಗಾಂಧಿ ಜೊತೆ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ವೇಳೆ ಸಂಸದ ಸಂತೋಖ್ ಸಿಂಗ್ ಹೃದಯಾಘಾತದಿಂದ ಸಾವು!
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಜಲಂಧರ್ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್(77) ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾಗ ಹೃದಯಾಘಾತವಾಗಿ ಸಂತೋಖ್ ಸಿಂಗ್ ಅಸ್ವಸ್ಥರಾಗಿದ್ದರು.

ಮಂಗಳೂರು: ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ನಿಧನ
ಕನ್ನಡ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ನಿಧನರಾಗಿದ್ದಾರೆ. ವಯೋಸಹಜ ಕಾರಣಗಳಿಂದ ನಿಧನ ಹೊಂದಿದ್ದಾರೆ. ಅವರು ಮಂಗಳೂರಿನ ಹ್ಯಾಟ್ ಹಿಲ್ ಬಳಿ ನೆಲೆಸಿದ್ದು, ನಾಲ್ವರು ಪುತ್ರರು ಅಪಾರ ಬಂಧುಗಳನ್ನು ಅಗಲಿದ್ದಾರೆ.

ರತನ್ ಟಾಟಾ ಆಪ್ತ, ಟಾಟಾ ಸನ್ಸ್‌ನ ಮಾಜಿ ನಿರ್ದೇಶಕ ಆರ್.ಕೃಷ್ಣಕುಮಾರ್ ವಿಧಿವಶ
ಟಾಟಾ ಗ್ರೂಪ್ ನಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದ ಹಾಗೂ ರತನ್ ಟಾಟಾ ಅವರಿಗೆ ಆತ್ಮೀಯರಾಗಿದ್ದ ಆರ್.ಕೆ.ಕೃಷ್ಣಕುಮಾರ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

