passes away

ತೆಲಂಗಾಣ: ಹಿರಿಯ ಕಾಂಗ್ರೆಸ್ ನಾಯಕ ಡಿ ಶ್ರೀನಿವಾಸ್ ನಿಧನ
ಅವಿಭಜಿತ ಆಂಧ್ರಪ್ರದೇಶ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಡಿ ಶ್ರೀನಿವಾಸ್ ಶನಿವಾರ ಹೈದರಾಬಾದ್‌ನಲ್ಲಿ ನಿಧನರಾದರು ಎಂದು ಅವರ ಪುತ್ರ ಮತ್ತು ನಿಜಾಮಾಬಾದ್ ಸಂಸದ ಡಿ ಅರವಿಂದ್ ಹೇಳಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ ಮಾಜಿ ಅಳಿಯ ಶಿರೀಶ್ ಭಾರಧ್ವಾಜ್ ಹಠಾತ್ ನಿಧನ
ಮೆಗಾಸ್ಟಾರ್ ಚಿರಂಜೀವಿಯ ಮಾಜಿ ಅಳಿಯ ಶಿರೀಶ್ ಭಾರದ್ವಾಜ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿರೀಶ್, ಮೆಗಾಸ್ಟಾರ್ ಚಿರಂಜೀವಿಯ ಪುತ್ರಿ ಶ್ರೀಜಾ ಕೊನಿಡೆಲಾ ಅವರನ್ನು ವಿವಾಹವಾಗಿದ್ದರು.

ಉತ್ತರ ಕರ್ನಾಟಕದ ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ್ ಮೋಹನ್ ನಿಧನ
ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳ ಕುರಿತು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ರಾಷ್ಟ್ರೀಯ ದಿನಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನ್ ಮೋಹನ್ (83) ಭಾನುವಾರ ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ನಿಧನರಾದರು.

ಭಾರತ ಫುಟ್‌ಬಾಲ್ ತಂಡದ ಮಾಜಿ ಆಟಗಾರ ಟಿ.ಕೆ. ಚತುನ್ನಿ ವಿಧಿವಶ
ಭಾರತ ಫುಟ್‌ಬಾಲ್ ತಂಡದ ಮಾಜಿ ಆಟಗಾರ ಮತ್ತು ತರಬೇತುದಾರ ಟಿ.ಕೆ.ಚತುನ್ನಿ (79) ಅವರು ಬುಧವಾರ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ವಿಶ್ವವಿಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ನಿಧನ
ಜಗತ್ ಪ್ರಸಿದ್ಧ ಸರೋದ್ ವಾದಕ, ಪದ್ಮಶ್ರೀ ಪುರಸ್ಕೃತ ಪಂಡಿತ್ ರಾಜೀವ್ ತಾರಾನಾಥ್ (91) ಇಂದು ಮೈಸೂರಿನಲ್ಲಿ ನಿಧನರಾದರು.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅತ್ಯಾಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ
ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಸಹಾಯಕರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದಾರೆ.

ಎಕ್ಸ್‌ಪ್ರೆಸ್ ಗ್ರೂಪ್ ಸಂಸ್ಥಾಪಕ ರಾಮನಾಥ್ ಗೋಯೆಂಕಾ ಸೊಸೆ ಸರೋಜ್ ಗೋಯೆಂಕಾ ನಿಧನ
ಎಕ್ಸ್‌ಪ್ರೆಸ್ ಗ್ರೂಪ್ ಸಂಸ್ಥಾಪಕ ಮತ್ತು ಖ್ಯಾತ ಭಾರತೀಯ ಪತ್ರಿಕೋದ್ಯಮಿ ರಾಮನಾಥ್ ಗೋಯೆಂಕಾ ಅವರ ಏಕೈಕ ಪುತ್ರ ದಿವಂಗತ ಭಗವಾನ್ ದಾಸ್ ಗೋಯೆಂಕಾ ಅವರ ಪತ್ನಿ ಸರೋಜ್ ಗೋಯೆಂಕಾ ಅವರು ಚೆನ್ನೈನಲ್ಲಿ ನಿಧನ.

ಖರ್ಗೆ ಪರಮಾಪ್ತ, ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ ನಿಧನ: ಹಲವು ಗಣ್ಯರ ಸಂತಾಪ
ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ (80) ಮಂಗಳವಾರ ತಡರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಗುಜರಾತ್ ನ ಮಾಜಿ ಗವರ್ನರ್ ಕಮಲಾ ಬೆನಿವಾಲ್ ನಿಧನ
ಹಿರಿಯ ಕಾಂಗ್ರೆಸ್ ನಾಯಕಿ, ಗುಜರಾತ್ ನ ಮಾಜಿ ರಾಜ್ಯಪಾಲರಾದ ಕಮಲಾ ಬೆನಿವಾಲ್ ಇಂದು ನಿಧನರಾದರು

