patna

ಬಿಹಾರ: ದಾಖಲೆಯ 8ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್, ಡಿಸಿಎಂ ಆಗಿ ತೇಜಸ್ವಿ ಪ್ರಮಾಣ!
ಬಿಜೆಪಿ ಸಖ್ಯ ಕಡಿದುಕೊಂಡು ಮೈತ್ರಿಸರ್ಕಾರದಿಂದ ಹೊರ ಬಂದ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಆರ್ ಜೆಡಿ ಮೈತ್ರಿಯೊಂದಿಗೆ ದಾಖಲೆಯ 8ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬಿಹಾರ: ಮಹಾಘಟಬಂಧನ್ ಸರ್ಕಾರ, ಬುಧವಾರ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಪ್ರಮಾಣ ವಚನ ಸ್ವೀಕಾರ
ಬಿಹಾರದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿಯನ್ನು ಮುರಿದುಕೊಂಡಿರುವ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಆರ್ ಜೆಡಿ, ಕಾಂಗ್ರೆಸ್, ಎಡಪಕ್ಷಗಳ ಬೆಂಬಲದೊಂದಿಗೆ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಆರ್ ಜೆಡಿ ಪಕ್ಷದ ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬಿಹಾರದಲ್ಲಿ ಮಹಾ ವಿಕಾಸ್ ಆಘಾಡಿ ಮಾದರಿ ಸರ್ಕಾರ? ಆರ್ ಜೆಡಿ, ಕಾಂಗ್ರೆಸ್, ಎಡಪಕ್ಷಗಳ ಬೆಂಬಲ; ನಿತೀಶ್ ಬಿಜೆಪಿ ಸಖ್ಯ ತೊರೆಯುವ ಸಾಧ್ಯತೆ
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಬಿಜೆಪಿಯೊಂದಿಗಿನ ಮೈತ್ರಿಯನ್ನು ಮುರಿದುಕೊಳ್ಳುವ ಸಾಧ್ಯತೆ ಹೆಚ್ಚಾಗಿದ್ದು, ಬಿಹಾರದಲ್ಲಿ ಎಲ್ಲಾ ಎನ್‌ಡಿಎಯೇತರ ಪಕ್ಷಗಳನ್ನು ಒಳಗೊಂಡಿರುವ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮಾದರಿಯ ಸಮ್ಮಿಶ್ರ ಸರ್ಕಾರ ರಚನೆಗೆ ಬೇಕಾದ ಎಲ್ಲಾ ರೀತಿಯ ಸಿದ್ಧತೆ ಮಾಡಲಾಗುತ್ತಿದೆ.

ಬಿಹಾರ: ಬಿಜೆಪಿ ಸಖ್ಯ ತೊರೆದು ನಿತೀಶ್ ಕುಮಾರ್ ಆರ್‌ಜೆಡಿಯೊಂದಿಗೆ ಮೈತ್ರಿ? ಮಂಗಳವಾರ ನಿರ್ಧಾರ ಪ್ರಕಟ
ಬಿಹಾರದಲ್ಲಿ ಜೆಡಿಯು ಬಿಜೆಪಿ ಜೊತೆಗಿನ ಸಖ್ಯ ತೊರೆಯುವ ಕುರಿತು ಚರ್ಚೆಗಳು ಹೆಚ್ಚುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಜೆಡಿಯು ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

ವಾಟ್ಸಾಪ್ ನಲ್ಲಿ ನೂಪುರ್ ಶರ್ಮಾ ಬೆಂಬಲಿಸಿ ಸ್ಟೇಟಸ್ ಹಾಕಿಕೊಂಡಿದ್ದಕ್ಕೆ ಚಾಕು ಇರಿತ: ಯುವಕ ಆರೋಪ
ಬಿಜೆಪಿಯಿಂದ ಅಮಾನತುಗೊಂಡಿರುವ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ವಿಡಿಯೋವೊಂದನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಶೇರ್ ಮಾಡಿದ್ದಕ್ಕೆ ತನಗೆ ಚಾಕುವಿನಿಂದ ಇರಿಯಲಾಗಿದೆ ಎಂದು ಬಿಹಾರದ ಸೀತಾಮರ್ಹಿಯ ಯುವಕನೊಬ್ಬ ಆರೋಪಿಸಿದ್ದಾನೆ.

ಅಗ್ನಿಪಥ್ ಯೋಜನೆ: ಜಾತಿ ಪ್ರಮಾಣ ಪತ್ರ ಅಗತ್ಯ ಕುರಿತು ಕೇಂದ್ರದ ವಿರುದ್ಧ ತೇಜಸ್ವಿ ವಾಗ್ದಾಳಿ; ರಾಜನಾಥ್ ಸಿಂಗ್ ತಿರುಗೇಟು
ರಕ್ಷಣಾ ಪಡೆಗಳಲ್ಲಿ ಅಗ್ನಿವೀರ್‌ಗಳ ನೇಮಕಾತಿಯಲ್ಲಿ ಜಾತಿ ಪ್ರಮಾಣ ಪತ್ರ ಕೇಳಿರುವುದಕ್ಕಾಗಿ ನರೇಂದ್ರ ಮೋದಿ ಸರ್ಕಾರವನ್ನು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಪಾಟ್ನಾ: ಕೋರ್ಟ್ ಆವರಣದಲ್ಲಿ ಕಚ್ಚಾ ಬಾಂಬ್ ಸ್ಫೋಟ, ಪೊಲೀಸ್ ಅಧಿಕಾರಿ ಗಾಯ
ಪಾಟ್ನಾದ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಕಚ್ಚಾ ಬಾಂಬ್ ಸ್ಫೋಟವಾಗಿದ್ದು, ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.

ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ 2025 ರವರೆಗೂ ಮುಂದುವರಿಕೆ: ಧರ್ಮೇಂದ್ರ ಪ್ರಧಾನ್
ಬಿಹಾರದ ಎನ್ ಡಿಎ ಮೈತ್ರಿಕೂಟದಲ್ಲಿ ಎಲ್ಲವೂ ಚೆನ್ನಾಗಿದೆ. ಬಿಜೆಪಿ ಮತ್ತು ಜೆಡಿಯು ನಡುವಿನ ಭಿನ್ನಾಭಿಪ್ರಾಯಗಳ ಹೊರತಾಗಿಯೂ, ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ತಮ್ಮ ಪ್ರಸ್ತುತ ಅವಧಿಯನ್ನು ಪೂರ್ಣಗೊಳಿಸುತ್ತಾರೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪ್ರತಿಪಾದಿಸಿದರು.

ಪಾಟ್ನಾದಿಂದ ದೆಹಲಿಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಬೆಂಕಿ, ತುರ್ತು ಭೂಸ್ಪರ್ಶ: ಎಲ್ಲಾ ಪ್ರಯಾಣಿಕರು ಸುರಕ್ಷಿತ
ದೆಹಲಿಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವು ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ದೋಷದಿಂದ ವಿಮಾನದೊಳಗೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿ ಇಳಿದಿದ್ದಾರೆ.

