ರಾಜ್ಯಬಜೆಟ್ನಲ್ಲಿ ದರ ಪರಿಷ್ಕರಣೆ: ಇಂದಿನಿಂದ ಮದ್ಯದ ಬೆಲೆ ಶೇ.20ರಷ್ಟು ಏರಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ನಲ್ಲಿ ಘೋಷಿಸಿದ ಪ್ರಕಾರ, ಮದ್ಯದ ಬೆಲೆ ಇಂದಿನಿಂದ (ಜುಲೈ 20) ಅನ್ವಯವಾಗುವಂತೆ ಹೆಚ್ಚಳವಾಗಿದೆ. ಇದರೊಂದಿಗೆ ಗರಿಷ್ಠ ಶೇ.20ರಷ್ಟು ಹೆಚ್ಚಿನ ದರದೊಂದಿಗೆ ಹೊಸ ಬೆಲೆಯಲ್ಲಿ ಶುಕ್ರವಾರದಿಂದ ಮದ್ಯ ಮಾರಾಟವಾಗಲಿದೆ.