ರಾಜ್ಯಬಾಕಿ ವೇತನ ಪಾವತಿಗೆ ಕೆಎಸ್ಆರ್ಟಿಸಿ ಸಿಬ್ಬಂದಿ ಆಗ್ರಹ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ಕೆಎಸ್ ಆರ್ ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಬಾಕಿ ಉಳಿದಿರುವ ವೇತನವನ್ನು ಪಾವತಿಸುವಂತೆ ಒತ್ತಾಯಿಸಿದೆ. ತಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಡಿಸೆಂಬರ್ 6 ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದಲ್ಲಿ ಪ್ರತಿಭಟನೆ ನಡೆಸಲು ಈ ಸಮಿತಿ ನಿರ್ಧರಿಸಿದೆ.