ರಾಜಕೀಯಪರಿಷತ್ ಚುನಾವಣೆ: ಮೈಸೂರು, ಚಾಮರಾಜನಗರ ಕ್ಷೇತ್ರದಲ್ಲಿ ಮತ ಚಲಾಯಿಸಲು ಸಹಾಯಕರನ್ನು ಕೋರಿದ 57 ಜನಪ್ರತಿನಿಧಿಗಳು!
ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಮೈಸೂರು- ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದಲ್ಲಿ 57 ಅನಕ್ಷರಸ್ಥ ಹಾಗೂ ದಿವ್ಯಾಂಗ ಮತದಾರರು ತಮ್ಮ ಮತ ಚಲಾಯಿಸಲು ಸಹಾಯಕರ ನೆರವನ್ನು ಕೋರಿರುವುದಾಗಿ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ತಿಳಿಸಿದ್ದಾರೆ.