ರಾಜ್ಯಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ: SIT ತನಿಖೆ ದಾರಿ ತಪ್ಪಿದೆ; ರಾಜ್ಯಪಾಲರಿಗೆ ಜೆಡಿಎಸ್ ದೂರು
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ದಾರಿ ತಪ್ಪುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಗುರುವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿತು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ.ಕುಮಾರಸ್ವಾಮಿ ನೇತೃತ್ವದಲ್ಲಿನ ನಿಯೋಗ ರಾಜಭವನದಲ್ಲಿಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.