PFI ban

PFI ಗೆ ಮತ್ತೊಂದು ಶಾಕ್: ಸಂಘಟನೆ ನಿಷೇಧ ಬೆನ್ನಲ್ಲೇ ವೆಬ್‌ಸೈಟ್, ಸಾಮಾಜಿಕ ಮಾಧ್ಯಮಗಳ ಖಾತೆ ನಿರ್ಬಂಧಕ್ಕೆ ಕೇಂದ್ರ ಆದೇಶ
ದೇಶಾದ್ಯಂತ ಎನ್‌ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ಅವುಗಳ ಅಂಗಸಂಸ್ಥೆಗಳ ವೆಬ್‌ಸೈಟ್, ಸಾಮಾಜಿಕ ಮಾಧ್ಯಮ ಖಾತೆಗಳನ್ನ ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

PFI ಮಾತ್ರವಲ್ಲ, ಸಮಾಜ ಹಾಳು ಮಾಡುತ್ತಿರುವ RSS ಅನ್ನು ಕೂಡ ನಿಷೇಧಿಸಲಿ: ಸಿದ್ದರಾಮಯ್ಯ ಕಿಡಿ
PFI ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ RSS ಅನ್ನು ಕೂಡ ನಿಷೇಧಿಸಲಿ ಎಂದು ಹೇಳಿದ್ದಾರೆ.

ಪಿಎಫ್ಐ ಸಂಘಟನೆ ನಿಷೇಧ; ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ, ಕಾನೂನು ಬಾಹಿರ ಚಟುವಟಿಕೆ ನಡೆಸುವವರ ವಿರುದ್ಧ ಕ್ರಮ: ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್
ಭಾರತ ಸರ್ಕಾರವು ಪಿಎಫ್ಐ (PFI) ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಕಾನೂನು ಬಾಹಿರ ಕಾಯ್ದೆಯಡಿ ಐದು ವರ್ಷಗಳ ಅವಧಿಗೆ ನಿಷೇಧಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸ್ ಇಲಾಖೆಯ ಮುಖ್ಯಸ್ಥರಾದ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಪೊಲೀಸರಿಗೆ ಸೂಚಿಸಿದ್ದಾರೆ.

ಭಯೋತ್ಪಾದಕ ಸಂಘಟನೆಗಳ ವಿರುದ್ಧ ಐತಿಹಾಸಿಕ ಕ್ರಮ: ಪಿಎಫ್ ಐ ನಿಷೇಧದ ಬಗ್ಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ
ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪಿಎಫ್ಐ ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಲ್ಹಾದ್ ಜೋಶಿ
ರಾಜ್ಯದಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಯಿಂದಾಗಿ ಜಾನಾಕ್ರೋಶ ಉಂಟಾಗಿದೆ. ಹೀಗಾಗಿ ಪಿಎಫ್ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ.

ಸಂಪುಟ ಸಭೆ ಇಂದು: ಪಿಎಫ್ಐ ನಿಷೇಧ ಕುರಿತು ಮಹತ್ವದ ನಿರ್ಣಯ ಸಾಧ್ಯತೆ
ನಗರದ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಪಿಎಫ್ಐ ನಿಷೇಧ ಕುರಿತು ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

