PFI

ಪಿಎಫ್ಐ ಸಿದ್ದರಾಮಯ್ಯನವರ ಪಾಪದ ಕೂಸು, ಅವರ ಅಪರಾಧಗಳಿಂದ ಇಷ್ಟೆಲ್ಲ ಅನಾಹುತಗಳಾಗಿದೆ: ಬಿ ಎಸ್ ಯಡಿಯೂರಪ್ಪ
ಪಿಎಫ್ಐ ಸಂಘಟನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾಪದ ಕೂಸು. ಪಿಎಫ್ಐ ಸಂಘಟನೆಗೆ ಹೇರಲಾಗಿದ್ದ ನಿಷೇಧವನ್ನು ತೆಗೆದುಹಾಕಿದ್ದು ಅವರು ಮುಖ್ಯಮಂತ್ರಿಯಾಗಿದ್ದಾಗಲೇ. ಇವತ್ತು ಏನೂ ತೋಚದೆ ಸಿದ್ದರಾಮಯ್ಯನವರು ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

ಎನ್ ಐಎ ದಾಳಿ ಬೆನ್ನಲ್ಲೇ ದೇಶಾದ್ಯಂತ ಪಿಎಫ್ ಐ ಸಂಘಟನೆ ಐದು ವರ್ಷ ಬ್ಯಾನ್: ಕೇಂದ್ರ ಸರ್ಕಾರದ ಮಹತ್ವದ ಆದೇಶ
ದೇಶವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ದೇಶದಾದ್ಯಂತ ಐದು ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್’ಐ) ಸಂಘಟನೆಯನ್ನು ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಸೆ.23 ರ ಹರ್ತಾಳ್: ಪಿಎಫ್ಐ ನಿಂದ 5 ಕೋಟಿ ರೂ. ನಷ್ಟ ಪರಿಹಾರ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಕೆಎಸ್ ಆರ್ ಟಿಸಿ!
ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ ಟಿಸಿ) ಸೆ.23 ರಂದು ಪಿಎಫ್ಐ ನಡೆಸಿದ ಹರ್ತಾಳ್ ನಿಂದಾಗಿ 5 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ಆರೋಪಿಸಿ ಕೇರಳ ಹೈಕೋರ್ಟ್ ಮೊರೆ ಹೋಗಿದೆ.

ಪಿಎಫ್ಐ ಮೇಲೆ ದಾಳಿ: ಜನರ ಮುಂದೆ ಸತ್ಯಾಂಶ ಬಹಿರಂಗಪಡಿಸಿ - ಕುಮಾರಸ್ವಾಮಿ ಆಗ್ರಹ
ಪಿಎಫ್ಐ ಸಂಘಟನೆ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿ ಆ ಸಂಘಟನೆಯ ಹಲವರನ್ನು ಬಂಧಿಸಿದ್ದು, ಆ ಬಗ್ಗೆ ರಾಜ್ಯದ ಜನತೆಯ ಮುಂದೆ ವಾಸ್ತವಾಂಶ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...

SDPI, PFI ಗೆ ಮತ್ತೆ ಶಾಕ್: ರಾಜ್ಯಾದ್ಯಂತ ಮುಖಂಡರ ಮನೆ ಮೇಲೆ ದಾಳಿ; 40ಕ್ಕೂ ಹೆಚ್ಚು ಮಂದಿ ವಶಕ್ಕೆ
ರಾಜ್ಯದಲ್ಲಿ SDPI, PFI ಸಂಘಟನೆಗಳ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆಯೇ ದಾಳಿಗಿಳಿದ ಪೊಲೀಸರು ಪಿಎಫ್ಐ ಮತ್ತು ಎಸ್ ಡಿಪಿಐಗೆ ಸೇರಿದ ಸುಮಾರು 40 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

PFI ಮೇಲೆ ದಾಳಿ: ರಾಜ್ಯಾದ್ಯಂತ 70 ಮಂದಿ ವಶಕ್ಕೆ, ಎಲ್ಲೆಲ್ಲಿ.. ಎಷ್ಟೆಷ್ಟು ಮಂದಿ ಪೊಲೀಸ್ ವಶಕ್ಕೆ? ಇಲ್ಲಿದೆ ವಿವರ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ವಿರುದ್ಧದ ಕಾರ್ಯಾಚರಣೆ ಮುಂದುವರೆಸಿರುವ ಕರ್ನಾಟಕ ಪೊಲೀಸರು ಇಂದು ಮುಂಜಾನೆ ತಮ್ಮ 2 ಹಂತದ ದಾಳಿಗಳನ್ನು ನಡೆಸಿದ್ದು, ಈ ವೇಳೆ ರಾಜ್ಯಾದ್ಯಂತ ಸುಮಾರು 70 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ದೇಶದಾದ್ಯಂತ ಪಿಎಫ್‌ಐ ಸಂಘಟನೆ ಮೇಲೆ ಮತ್ತೆ ದಾಳಿ: 100ಕ್ಕೂ ಅಧಿಕ ಮಂದಿ ವಶಕ್ಕೆ
ದೇಶದಾದ್ಯಂತ ಪಿಎಫ್‌ಐ ಸಂಘಟನೆ ಮೇಲೆ ಮತ್ತೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದು, ನೂರಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಸಮಾಜದಲ್ಲಿ ಶಾಂತಿ ಕದಡಲು ಯತ್ನ, ಸರ್ಕಾರ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪ: 14 ಮಂದಿ ಪಿಎಫ್ಐ ಕಾರ್ಯಕರ್ತರ ಬಂಧನ
ರಾಜ್ಯ ಪೊಲೀಸರು ನಿನ್ನೆ ಗುರುವಾರ ಬೃಹತ್ ಮಟ್ಟದಲ್ಲಿ ದಾಳಿ ನಡೆಸಿ 14 ಪಿಎಫ್‌ಐ ಸದಸ್ಯರನ್ನು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 153 ಎ ಮತ್ತು 120 ಬಿ ಅಡಿಯಲ್ಲಿ ಸಮಾಜದಲ್ಲಿ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿದ, ಸರ್ಕಾರ ವಿರುದ್ಧ ಕ್ರಿಮಿನಲ್ ಪಿತೂರಿ ನಡೆಸಿದ ಆರೋಪದಡಿ ಬಂಧಿಸಿದ್ದಾರೆ.

ಟೆರರಿಸ್ಟ್ ಗಳ ಹುಟ್ಟು ಹಾಕಿದ್ದೇ ಕಾಂಗ್ರೆಸ್; PFI, SDPI ನಿಷೇಧಕ್ಕೆ ಪ್ರಕ್ರಿಯೆ ಆರಂಭ: ಆರಗ ಜ್ಞಾನೇಂದ್ರ
ಪಿಎಫ್ ಐ ಹಾಗು ಎಸ್ ಡಿಪಿಐ ಮೇಲೆ ಎನ್‌ಐಎ ಹಾಗೂ ಪೊಲೀಸರು ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ್ದು, ಏಕತೆ, ಸಮಗ್ರತೆ ಹಾಳು ಮಾಡೋ, ಜೀವಹಾನಿ ಮಾಡುವ ಸಂಘಟನೆಗಳು ಹಲವು ಕೃತ್ಯಗಳ ಹಿಂದೆ ಇದ್ದು, ಇದಕ್ಕೆ ಸಂಬಂಧಿಸಿದವರ ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

