ರಾಜ್ಯದೂರವಾಣಿ ಕರೆ ಮಾರ್ಪಾಡು ಪ್ರಕರಣ; ಮತ್ತೆ 5 ಆರೋಪಿಗಳ ಬಂಧನ
ಅಂತರರಾಷ್ಟ್ರೀಯ ದೂರವಾಣಿ ಕರೆಗಳನ್ನು (ಐಎಸ್ಡಿ) ಸ್ಥಳೀಯ ಕರೆಗಳನ್ನಾಗಿ ಮಾರ್ಪಾಡಿಸಿ ದೇಶದ ಭದ್ರತೆಗೆ ಧಕ್ಕೆಯುಂಟು ಮಾಡುವುದರ ಜೊತೆಗೆ ಕೇಂದ್ರ ಸರ್ಕಾರಕ್ಕೆ ನಷ್ಟ ಉಂಟು ಮಾಡುತ್ತಿದ್ದ ಪ್ರಕರಣದ ತನಿಖೆ ಯನ್ನು ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಮತ್ತೆ ಐವರು ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ.