ದೇಶ'ಮಣಿಪುರ ನಮ್ಮ ಹೃದಯದ ಭಾಗ, ಅಲ್ಲಿ ಶಾಂತಿ ಮರುಸ್ಥಾಪಿಸುವ ಪ್ರಯತ್ನ ಬಿಡುವುದಿಲ್ಲ': ಪ್ರಧಾನಿ ನರೇಂದ್ರ ಮೋದಿ
ಭಾರತದ ಈಶಾನ್ಯ ರಾಜ್ಯ ಮಣಿಪುರ "ನಮ್ಮ ಹೃದಯದ ಭಾಗ" ಎಂದು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವ ಪ್ರಯತ್ನಗಳನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ, ಈಶಾನ್ಯ ರಾಜ್ಯ ಶೀಘ್ರದಲ್ಲೇ ಮತ್ತೊಮ್ಮೆ ಪ್ರಗತಿಯ ಹಾದಿಯಲ್ಲಿ ಸಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.