PIL

ಟಾಕ್ಸಿಕ್ ಚಿತ್ರಕ್ಕೆ ಸಂಕಷ್ಟ: ಯಶ್ ನಟನೆಯ ಚಿತ್ರದ ವಿರುದ್ಧ ದೂರು!
ಕೆಜಿಎಫ್ ಚಿತ್ರ ಖ್ಯಾತಿಯ ಯಶ್ ಇದೀಗ ಟಾಕ್ಸಿಕ್ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದಾರೆ. ಅಲ್ಲದೆ ಇತ್ತೀಚೆಗಷ್ಟೇ ಅವರ ಹೊಸ ಹೇರ್ ಸ್ಟೈಲ್ ಅಭಿಮಾನಿಗಳ ನಿದ್ದೆಗೆಡಿಸಿದ್ದು ಹೊಸ ಟ್ರೆಂಡ್ ಸೃಷ್ಟಿ ಮಾಡಿದ್ದರು.

Hathras stampede: ಘಟನೆಯ ತನಿಖೆ ಮತ್ತು ಸಂತ್ರಸ್ತರಿಗೆ ಪರಿಹಾರಕ್ಕಾಗಿ ಸಮಿತಿಯನ್ನು ನೇಮಿಸಲು ಸುಪ್ರೀಂ ಕೋರ್ಟ್ ನಲ್ಲಿ PIL
ಸಾರ್ವಜನಿಕ ಸಭೆಗಳಲ್ಲಿ ಇಂತಹ ಘಟನೆಗಳನ್ನು ತಪ್ಪಿಸಲು ಮಾರ್ಗಸೂಚಿಗಳು ಮತ್ತು ಸುರಕ್ಷತಾ ಕ್ರಮಗಳನ್ನು ಸೂಚಿಸಲು ಮತ್ತು ರೂಪಿಸಲು ಸಮಿತಿಗೆ ನಿರ್ದೇಶನ ನೀಡುವಂತೆ ವಕೀಲರು ಅರ್ಜಿಯಲ್ಲಿ ಕೋರಿದ್ದಾರೆ.

ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ- ಎಂಬಿ ಪಾಟೀಲ್ ಎಚ್ಚರಿಕೆ
ರಾಜ್ಯವು 2.5 ಲಕ್ಷ ಕೋಟಿಯಷ್ಟು ಗಮನಾರ್ಹ ವಾರ್ಷಿಕ ಸೆಸ್ ಸಂಗ್ರಹಿಸುತ್ತಿದ್ದರೂ, ಕರ್ನಾಟಕದಂತಹ ಪ್ರಗತಿಪರ ರಾಜ್ಯಗಳಿಗೆ ಹಣ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಪಾಟೀಲ್ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

ಆನೆಗಳ ಅಸಹಜ ಸಾವು: ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್
ರಾಜ್ಯದಲ್ಲಿ ಇತ್ತೀಚಿಗೆ ದಸರಾ ಆನೆ ಅಶ್ವತ್ಥಾಮ ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿರುವುದು ಸೇರಿದಂತೆ ವನ್ಯಜೀವಿಗಳ ಅಸಹಜ ಸಾವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ದಾಖಲಿಸಿಕೊಂಡಿದೆ.

ಜೈಲಿನಿಂದ ಸರ್ಕಾರ ನಡೆಸಲು ಕೇಜ್ರಿವಾಲ್‌ಗೆ ಸೌಲಭ್ಯ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ; ದಂಡ ವಿಧಿಸಿದ ಹೈಕೋರ್ಟ್
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೈಲಿನಿಂದಲೇ ಸರ್ಕಾರ ನಡೆಸಲು ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಕೋರಿ ವಕೀಲರೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ ವಜಾಗೊಳಿಸಿದ್ದು, ₹ 1 ಲಕ್ಷ ದಂಡ ವಿಧಿಸಿದೆ.

ಕಾನೂನು ಪದವಿಯನ್ನು 5 ವರ್ಷದಿಂದ 3 ವರ್ಷಕ್ಕೆ ಪರಿವರ್ತಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಐದು ವರ್ಷಗಳ ಕಾನೂನು ಪದವಿಯನ್ನು ಮೂರು ವರ್ಷಗಳಿಗೆ ಪರಿವರ್ತಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಪಿಐಎಲ್ ತಿರಸ್ಕೃತ, ಅರ್ಜಿದಾರನಿಗೆ 75,000 ರೂ. ದಂಡ!
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನುನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ನ್ನು ದೆಹಲಿ ಹೈಕೋರ್ಟ್ ಸೋಮವಾರ ತಿರಸ್ಕರಿಸಿದ್ದು, ಅರ್ಜಿದಾರನಿಗೆ 75,000 ರೂಪಾಯಿ ದಂಡ ವಿಧಿಸಿದೆ.

ಅರವಿಂದ್ ಕೇಜ್ರಿವಾಲ್‌ರನ್ನು ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ಪಿಐಎಲ್; ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವ ಹಿನ್ನೆಲೆಯಲ್ಲಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.

ಬಂಧನ ನಂತರ ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸಲು ಪಿಐಎಲ್, ವಜಾಗೊಳಿಸಿದ ಹೈಕೋರ್ಟ್
ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನದ ನಂತರ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

