PIL

ಆಸ್ತಿ ತೆರಿಗೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
ಕರ್ನಾಟಕ ಪುರಸಭೆಗಳ ಕಾಯ್ದೆ ಮತ್ತು ಕರ್ನಾಟಕ ನಗರ ಪಾಲಿಕೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿರುವ ಆಸ್ತಿ ತೆರಿಗೆ ಹೆಚ್ಚಿಸುವ ನಿಬಂಧನೆಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಶಿರೂರು ಮಠಕ್ಕೆ ಪೀಠಾಧಿಪತಿ ನೇಮಕ ವಿವಾದ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಉಡುಪಿಯ ಶ್ರೀಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶ್ರೀ ಶಿರೂರು ಮಠಕ್ಕೆ 16 ವರ್ಷದ ಅಪ್ರಾಪ್ತರಿಗೆ ಮಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾ ಮಾಡಿ ಆದೇಶಿಸಿದೆ.

ಪ್ರಮಾಣ ವಚನಕ್ಕೆ ಬರಲು ಸಚಿವೆ ಶಶಿಕಲಾ ಜೊಲ್ಲೆ ಕಾರ್ ಗೆ ಝೀರೋ ಟ್ರಾಫಿಕ್: ಹೈಕೋರ್ಟ್‌ಗೆ ಅರ್ಜಿ
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನಕ್ಕೆ ಬರಲು ಶಶಿಕಲಾ ಜೊಲ್ಲೆ ಅವರಿಗೆ ಝೀರೋ ಟ್ರಾಫಿಕ್ (ತಡೆರಹಿತ ಸಂಚಾರ) ಸೌಲಭ್ಯ ಕಲ್ಪಿಸಿದ್ದನ್ನು ಪ್ರಶ್ನಿಸಿ ಪಿಐಎಲ್ ಸಲ್ಲಿಕೆಯಾಗಿದೆ.

ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆ ಮತ್ತು ಆಕೆಯ ಕುಟುಂಬದ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ದೆಹಲಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.

ಮಾಹಿತಿ ಆಯುಕ್ತರ ಪಿಂಚಣಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾ!
ರಾಜ್ಯ ಮಾಹಿತಿ ಆಯುಕ್ತರಿಗೆ ಪಿಂಚಣಿ ನೀಡುವುದನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಸೆರಂ ಇನ್ಸ್ಟಿಟ್ಯೂಟ್, ಭಾರತ್ ಬಯೋಟೆಕ್ ಲಸಿಕೆ ದರ ಪ್ರತಿ ಡೋಸ್ ಗೆ 150 ರೂ. ನಿಗದಿಪಡಿಸಿ: ಮುಂಬೈ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೋವಿಡ್-19 ಲಸಿಕೆಗಳಿಗೆ ವಿವಿಧ ದರ ನಿಗದಿಪಡಿಸಿರುವುದನ್ನು ಪ್ರಶ್ನಿಸಿ ಮುಂಬೈ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ಕೊರೋನಾ ಉಲ್ಬಣ: 18 ವರ್ಷ ಮೇಲ್ಪಟ್ಟ ಎಲ್ಲರಿಗೆ ಲಸಿಕೆ ಒದಗಿಸಿ; ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್
ದೇಶಾದ್ಯಂತ ಕೊರೋನಾವೈರಸ್ ಪ್ರಕರಣಗಳಲ್ಲಿ ಹಠಾತ್ ಏರಿಕೆ ಕಂಡುಬಂದ ಕಾರಣ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್)ಯೊಂದು ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿದೆ.

ಜನಸಂಖ್ಯೆ ನಿಯಂತ್ರಣ ಸಂಬಂಧ ಪಿಐಎಲ್: ಒತ್ತಾಯದ ಕುಟುಂಬ ಯೋಜನೆ ಸಾಧ್ಯವಿಲ್ಲ, 'ಸುಪ್ರೀಂ'ಗೆ ಕೇಂದ್ರ ಮಾಹಿತಿ!
ತನ್ನ ದೇಶದ ಜನರ ಮೇಲೆ ಕುಟುಂಬ ಯೋಜನೆಯನ್ನು ಒತ್ತಾಯಪೂರ್ವಕವಾಗಿ ಹೇರಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಮಹಾರಾಷ್ಟ್ರ ಸರ್ಕಾರ ವಜಾ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಮಹಾರಾಷ್ಟ್ರದ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ವಜಾಗೊಳಿಸಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

