Piyush Goyal

ಮಾನ್ಯತೆ ಪಡೆದ ಸ್ಟಾರ್ಟ್‌ಅಪ್‌ಗಳಿಂದ 16 ಲಕ್ಷಕ್ಕೂ ಹೆಚ್ಚು ನೇರ ಉದ್ಯೋಗ ಸೃಷ್ಟಿ: ಕೇಂದ್ರ
ಐಟಿ ಸೇವೆಗಳು ಅತಿ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಿವೆ. ನಂತರದ ಸ್ಥಾನದಲ್ಲಿ ಆರೋಗ್ಯ ಮತ್ತು ಜೀವ ವಿಜ್ಞಾನ 1.47 ಲಕ್ಷ ನೇರ ಉದ್ಯೋಗಗಳನ್ನು ಹೊಂದಿವೆ. ಶಿಕ್ಷಣ ಕ್ಷೇತ್ರದ ಸ್ಟಾರ್ಟ್‌ಅಪ್‌ಗಳಿಂದ 90,414 ನೇರ ಉದ್ಯೋಗಗಳು ಸೃಷ್ಟಿಯಾಗಿವೆ.

ಬಿಜೆಪಿ 2ನೇ ಪಟ್ಟಿಯಲ್ಲಿ ಗಡ್ಕರಿ, ಪಿಯೂಷ್ ಗೋಯಲ್ ಸೇರಿದಂತೆ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್
ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ 72 ಅಭ್ಯರ್ಥಿಗಳ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ಪಿಯೂಷ್ ಗೋಯಲ್ ಮತ್ತು ಅನುರಾಗ್ ಸಿಂಗ್ ಠಾಕೂರ್ ಮತ್ತು ಹರಿಯಾಣದ ಮನೋಹರ್ ಲಾಲ್ ಖಟ್ಟರ್ ಸೇರಿದಂತೆ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್ ನೀಡಲಾಗಿದೆ.

'ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿ ಬೆಳೆಗೆ 5 ವರ್ಷ ಕನಿಷ್ಠ ಬೆಂಬಲ ಬೆಲೆ': ತಡರಾತ್ರಿ ಸಂಧಾನದ ಬಳಿಕ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿಕೆ!
ರೈತಪರ ಸಂಘಟನೆಗಳೊಂದಿಗಿನ ತಡರಾತ್ರಿ ಸಂಧಾನ ಬಹುತೇಕ ಯಶ ಕಂಡಿದೆಎಂದು ಹೇಳಲಾಗಿದ್ದು, 'ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿ ಬೆಳೆಗಳನ್ನು 5 ವರ್ಷ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸುವ ಕುರಿತು ಪ್ರಸ್ತಾಪ ಮುಂದಿಡಲಾಗಿದೆ ಎಂದು ಸಂಧಾನ ಮಾತುಕತೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

ಬಜೆಟ್ ಅಧಿವೇಶನ: ಸಂಸತ್ತಿನಲ್ಲಿ ಸದ್ದು ಮಾಡಿದ ಡಿಕೆ ಸುರೇಶ್ 'ಪ್ರತ್ಯೇಕ ರಾಷ್ಟ್ರ' ಹೇಳಿಕೆ, ಕಾಂಗ್ರೆಸ್ ಕ್ಷಮೆಯಾಚನೆಗೆ ಆಗ್ರಹ
ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಶುಕ್ರವಾರ ಆರಂಭವಾಗಿದ್ದು, ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರ ʼಪ್ರತ್ಯೇಕ ರಾಷ್ಟ್ರ ಹೇಳಿಕೆʼಯು ತೀವ್ರ ಗದ್ದಲವೆಬ್ಬಿಸಿದೆ. ನಾಯಕನ ಹೇಳಿಕೆ ಸಂಬಂಧ ಕಾಂಗ್ರೆಸ್ ಕ್ಷಮೆಯಾಚನೆ ಮಾಡಬೇಕೆಂದು ಆಡಳಿರೂಢ ಪಕ್ಷದ ನಾಯಕರು ಆಗ್ರಹಿಸುತ್ತಿದ್ದಾರೆ.

ಲೋಕಸಭೆಯಲ್ಲಿ 'ಉತ್ತರ-ದಕ್ಷಿಣ ವಿಭಜನೆ' ಹೇಳಿಕೆ: ಡಿಎಂಕೆ ಸಂಸದ ಸೆಂಥಿಲ್ ಕುಮಾರ್ ಕ್ಷಮೆಯಾಚನೆ
ತಮ್ಮ 'ಉತ್ತರ-ದಕ್ಷಿಣ ವಿಭಜನೆ' ಹೇಳಿಕೆಗೆ ಡಿಎಂಕೆ ಸಂಸದ ಡಿ ಎನ್ ವಿ ಸೆಂಥಿಲ್ ಕುಮಾರ್ ಲೋಕಸಭೆಯಲ್ಲಿ ಬುಧವಾರ ವಿಷಾದ ವ್ಯಕ್ತಪಡಿಸಿದ್ದಾರೆ.

'ಅನ್ನ ಭಾಗ್ಯ'ಕ್ಕೆ ಕೇಂದ್ರದಿಂದ ಸಿಗದ ಸ್ಪಂದನೆ: ಪರ್ಯಾಯ ಮಾರ್ಗಕ್ಕೆ ರಾಜ್ಯ ಸರ್ಕಾರ ಮುಂದು, ಏನದು?
ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆ ಭಾರೀ ಸದ್ದು ಮಾಡುತ್ತಿದೆ. ಸಾರ್ವಜನಿಕರಿಗೆ 10 ಕೆ ಜಿ ಅಕ್ಕಿ ವಿತರಿಸುವುದಾಗಿ ಅಧಿಕಾರಕ್ಕೆ ಬರುವ ಮೊದಲು ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಈಗ ಅಧಿಕಾರಕ್ಕೆ ಬಂದ ಮೇಲೆ 10 ಕೆಜಿ ವಿತರಿಸಲು ಎಲ್ಲಿಂದ ತರುವುದು ಎನ್ನುವುದೇ ಸಮಸ್ಯೆಯಾಗಿದೆ.

ಅಕ್ಕಿ ದಾಸ್ತಾನು ಇರಿಸಿಕೊಳ್ಳಲು, ಬೆಲೆ ಏರಿಕೆ ತಡೆಯಲು ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ನಿರಾಕರಿಸಿದೆ: ಪಿಯೂಷ್ ಗೋಯಲ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ನಿರಾಕರಿಸಿದ ಕೇಂದ್ರದ ಕ್ರಮವನ್ನು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ ಅವರು ಮಂಗಳವಾರ ಸಮರ್ಥಿಸಿಕೊಂಡಿದ್ದಾರೆ.

ಅಕ್ಕಿ ಪೂರೈಕೆ ವಿಚಾರವಾಗಿ ನಾಳೆ ಸಿಎಂ ಸಿದ್ದರಾಮಯ್ಯರಿಂದ ಅಮಿತ್ ಶಾ, ಪಿಯೂಷ್ ಗೋಯಲ್ ಭೇಟಿ
ದೆಹಲಿಯಲ್ಲಿ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಿಳಿಸಿದ್ದಾರೆ.

2018ರಲ್ಲಿ ಮಾಡಿದ ತಪ್ಪನ್ನು ಮತ್ತೆ ಮಾಡದಿರಿ, ಡಬಲ್ ಇಂಜಿನ್ ಬಿಜೆಪಿ ಸರ್ಕಾರಕ್ಕೆ ಬಹುಮತ ನೀಡಿ: ಮತದಾರರಿಗೆ ಪಿಯೂಷ್ ಗೋಯಲ್ ಮನವಿ
2018ರ ಚುನಾವಣೆಯಲ್ಲಿ ಮಾಡಿದ್ದ ತಪ್ಪನ್ನು ಪುನರಾವರ್ತಿಸದಿರಿ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಡಬಲ್ ಇಂಜಿನ್ ಬಿಜೆಪಿ ಸರ್ಕಾರಕ್ಕೆ ಸಂಪೂರ್ಣ ಬಹುಮತ ನೀಡಿ ಎಂದು ಮತದಾರರಿಗೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ.

