plasma therapy

ರಾಜ್ಯದಲ್ಲೇ ಪ್ರಥಮ! ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಪ್ಲಾಸ್ಮಾ ಚಿಕಿತ್ಸೆ ಯಶಸ್ವಿ
ರಾಜ್ಯದದಲ್ಲಿ ಪ್ರಥಮ ಬಾರಿಗೆ ಕೊರೋನಾವರಸ್ ಸೋಂಕಿಗಾಗಿ ನಡೆಸಲಾದ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನ ಯಶಸ್ವಿಯಾಗಿದ್ದು 64 ವರ್ಷದ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖನಾಗಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಈ ಸಾಧನೆ ಮಾಡಿದ್ದಾರೆ.

ಕೋವಿಡ್-19: ದೆಹಲಿಯಲ್ಲಿ ಪ್ಲಾಸ್ಮಾ ಥೆರಪಿ ಮುಂದುವರೆಯಲಿದೆ- ಸಿಎಂ ಕೇಜ್ರಿವಾಲ್
ಕೊರೋನಾ ಸೋಂಕಿತರಿಗೆ ನೀಡಲಾಗುತ್ತಿರುವ ಪ್ಲಾಸ್ಮಾ ಥೆರಪಿಯನ್ನು ಮುಂದುವರೆಸಲಾಗುತ್ತದೆ ಹಾಗೂ ಐಐಟಿ ತರಬೇತಿಗೆಂದು ತೆರಳಿ ರಾಜಸ್ತಾನದ ಕೋಟಾದಲ್ಲಿಸಿಲುಕಿರುವ ವಿದ್ಯಾರ್ಥಿಗಳನ್ನು ಶೀಘ್ರದಲ್ಲಿಯೇ ನಗರಕ್ಕೆ ಕರೆತರಲಾಗುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರ ಹೇಳಿದ್ದಾರೆ.

ಹುಸಿಯಾದ ಭರವಸೆ?: ಮಹಾರಾಷ್ಟ್ರದಲ್ಲಿ ಪ್ಲಾಸ್ಮಾ ಚಿಕಿತ್ಸೆ ಪಡೆದ ಸೋಂಕಿತ ವ್ಯಕ್ತಿ ಸಾವು!
ಕೊರೋನಾ ಚಿಕಿತ್ಸೆಗೆ ರಾಮಬಾಣವೆಂದೇ ಹೇಳಲಾಗುತ್ತಿದ್ದ ಪ್ಲಾಸ್ಮಾ ಥೆರಪಿ ಇದೀಗ ಭರವಸೆಯನ್ನು ಹುಸಿಯಾಗಿಸುತ್ತಿದೆಯೇ ಎಂಬ ಅನುಮಾನಗಳನ್ನು ಮೂಡಿಸುತ್ತಿದೆ. ಕೊರೋನಾ ಸೋಂಕಿತರ ಜೀವ ಉಳಿಸಲು ಹಲವು ರಾಜ್ಯಗಳು ಪ್ಲಾಸ್ಮಾ ಥೆರಪಿ ಮಾಡಲು ತುದಿಗಾಲಿನಲ್ಲಿ ನಿಂತಿರುವಾಗಲೇ ಮಹಾರಾಷ್ಟ್ರದಲ್ಲಿ ಪ್ಲಾಸ್ಮಾ ಚಿಕಿತ್ಸೆ ಪಡೆದ ಮೊದಲ ವ್ಯಕ್ತಿ ಮೃತಪಟ್ಟಿದ್ದಾರೆ.

ಎಲ್ಲಾ ಕೊರೋನಾ ರೋಗಿಗಳಿಗೂ ಪ್ಲಾಸ್ಮಾ ಥೆರೆಪಿ ಪ್ರಯೋಗದ ವಿರುದ್ಧ ಕೇಂದ್ರದ ಎಚ್ಚರಿಕೆ!
ದೆಹಲಿಯಲ್ಲಿ ಕೊರೋನಾ ರೋಗಿಗೆ ಪ್ಲಾಸ್ಮಾ ಥೆರೆಪಿ ಪ್ರಯೋಗ ಮಾಡಿ ಯಶಸ್ವಿಯಾದ ಬೆನ್ನಲ್ಲೇ ಈ ಚಿಕಿತ್ಸಾ ವಿಧಾನವನ್ನು ಎಲ್ಲಾ ಕೊರೋನಾ ರೋಗಿಗಳಿಗೂ ಪ್ರಯೋಗಿಸುವುದರ ವಿರುದ್ಧ ಕೇಂದ್ರ ಸರ್ಕಾರ ಎಚ್ಚರಿಕೆ ಸಂದೇಶ ರವಾನೆ ಮಾಡಿದೆ.

ಪ್ಲಾಸ್ಮಾ ಥೆರೆಪಿ ಇನ್ನೂ ಪ್ರಾಯೋಗಿಕ ಹಂತದಲ್ಲಿದೆ: ಕೇಂದ್ರ ಆರೋಗ್ಯ ಸಚಿವಾಲಯ
24 ಗಂಟೆಗಳ ಅವಧಿಯಲ್ಲಿ 1,594 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಕೊರೋನ ಸಂಬಂಧಿತ 51 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 29,974ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್ ಚಿಕಿತ್ಸೆಯಲ್ಲಿ ಪ್ರಮುಖವಾಗಿರುವ 'ಪ್ಲಾಸ್ಮಾ ಥೆರಪಿ' ಎಂದರೇನು?
ಭಾರತದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ಸೋಂಕಿಗೆ ಲಸಿಕೆ ಇಲ್ಲದಿರುವುದು ಮತ್ತಷ್ಟು ಸಂಕಷ್ಟಕ್ಕೆ ಕಾರಣವಾಗಿದೆ. ಈ ಬೆಳವಣಿಗೆಗಳ ಮಧ್ಯೆ ಪ್ಲಾಸ್ಮಾ ಥೆರಪಿ ಎನ್ನುವ ಚಿಕಿತ್ಸೆ ಕೊರೊನಾ ವಿರುದ್ಧದ ಹೋರಾಟಕ್ಕೆ ಸಂಜೀವಿನಿ ರೂಪದಲ್ಲಿ ಕಾಣುತ್ತಿದೆ.

ಕೋವಿಡ್-19: ಬಿಎಂಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪ್ಲಾಸ್ಮಾ ಥೆರಪಿ ಪ್ರಯೋಗಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ಚಾಲನೆ
ಕೊರೋನಾ ವೈರಸ್ ನಿಂದ ಬಳಲುತ್ತಿರುವ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡುವ ಪ್ರಯೋಗಕ್ಕೆ ರಾಜ್ಯ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ಶನಿವಾರ ಚಾಲನೆ ನೀಡಿದ್ದಾರೆ.

ಕೊರೋನಾ ವೈರಸ್ ನಿಂದ ಗುಣಮುಖರಾದವರು ರಕ್ತ (ಪ್ಲಾಸ್ಮಾ) ದಾನ ಮಾಡಿ: ದೆಹಲಿ ಸಿಎಂ ಕೇಜ್ರಿವಾಲ್ ಮನವಿ
ಕೊರೋನಾ ವೈರಸ್ ಸೋಂಕಿನಿಂದ ಚೇತರಿಸಿಕೊಂಡಿರುವ ಎಲ್ಲರೂ ಮುಂದೆ ಬಂದು ರಕ್ತದಾನ ಮಾಡಿ, ಆ ಮೂಲಕ ಇತರೆ ಸೋಂಕಿತರನ್ನು ರಕ್ಷಿಸಲು ನೆರವಾಗಬೇಕು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾನವಿ ಮಾಡಿದ್ದಾರೆ.

ದೆಹಲಿಯಲ್ಲಿ ಪ್ಲಾಸ್ಮಾ ಥೆರಪಿ ಪ್ರಯೋಗಗಳು ಭರವಸೆಯ ಫಲಿತಾಂಶಗಳನ್ನು ನೀಡಿವೆ: ಸಿಎಂ ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ಲಾಸ್ಮಾ ಥೆರಪಿ ಪ್ರಯೋಗಗಳು ಭರವಸೆಯ ಫಲಿತಾಂಶಗಳನ್ನು ನೀಡಿವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರ ಹೇಳಿದ್ದಾರೆ.

