ರಾಜಕೀಯಪ್ರಧಾನಿ ಮೋದಿಯನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಆರೋಪ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.