PM Narendra Modi

ಕನ್ಯಾಕುಮಾರಿ: 'ಸೂರ್ಯ ಅರ್ಘ್ಯ' ನೀಡುವ ಮೂಲಕ ಎರಡನೇ ದಿನದ ಧ್ಯಾನ ಆರಂಭಿಸಿದ ಪ್ರಧಾನಿ ಮೋದಿ
ಇಲ್ಲಿನ ವಿವೇಕಾನಂದ ಶಿಲಾ ಸ್ಮಾರಕದಲ್ಲಿ ಇಂದು ಶನಿವಾರ ಸೂರ್ಯೋದಯದ ವೇಳೆ ‘ಸೂರ್ಯ ಅರ್ಘ್ಯ’ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಮತ್ತು ಅಂತಿಮ ದಿನದ ಧ್ಯಾನವನ್ನು ಆರಂಭಿಸಿದರು.

ವಿವೇಕಾನಂದ ರಾಕ್ ಸ್ಮಾರಕದಲ್ಲಿ 'ಸೂರ್ಯ ಅರ್ಘ್ಯ' ನೀಡಿ ಪ್ರಧಾನಿ ಮೋದಿ ಪ್ರಾರ್ಥನೆ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಧ್ಯಾನದ ಅಂಗವಾಗಿ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಕಲ್ಲಿನ ಸ್ಮಾರಕದಲ್ಲಿ ಶುಕ್ರವಾರ ಸೂರ್ಯೋದಯದ ಸಮಯದಲ್ಲಿ 'ಸೂರ್ಯ ಅರ್ಘ್ಯ' ನೀಡಿದರು.

ಅನಾರೋಗ್ಯದ ವದಂತಿ ತಳ್ಳಿಹಾಕಿದ ಒಡಿಶಾ ಸಿಎಂ: ಪ್ರಧಾನಿ ಮೋದಿ ಹೇಳಿಕೆಗೆ ಪಟ್ನಾಯಕ್ ಪ್ರತಿಕ್ರಿಯೆ ಹೀಗಿದೆ..
ಒಡಿಶಾ ಸಿಎಂ ನವೀನ್ ಪಟ್ನಾಯಕ್ ತಮ್ಮ ಆರೊಗ್ಯದ ಬಗ್ಗೆ ಕೇಳಿಬರುತ್ತಿರುವ ವದಂತಿಗಳನ್ನು ತಳ್ಳಿಹಾಕಿದ್ದಾರೆ.

ನವೀನ್ ಪಟ್ನಾಯಕ್ ಅನಾರೋಗ್ಯದ ಹಿಂದಿದೆ ಪಿತೂರಿ?: ಪ್ರಧಾನಿ ಮೋದಿ ಸುಳಿವು
ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಸಿಎಂ ನವೀನ್ ಪಟ್ನಾಯಕ್ ಅವರ ಆರೋಗ್ಯದಲ್ಲಿ ದಿಢೀರ್ ಕುಸಿತವಾಗಿರುವುದರ ಹಿಂದಿನ ಕಾರಣ ತಿಳಿಯುವುದಕ್ಕಾಗಿ ತನಿಖೆ ನಡೆಸಲು ಸಮಿತಿ ರಚನೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಜೂನ್ 4ರ ನಂತರ ದೇಶದಲ್ಲಿ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: ಪ್ರಧಾನಿ ನರೇಂದ್ರ ಮೋದಿ
ಬುಡಕಟ್ಟು ಜನಾಂಗದ ಜನಸಂಖ್ಯೆಯು ವೇಗವಾಗಿ ಕಡಿಮೆಯಾಗುತ್ತಿದೆ ಮತ್ತು ನುಸುಳುಕೋರರ ಸಂಖ್ಯೆಯು ಹೆಚ್ಚುತ್ತಿದೆ. ನುಸುಳುಕೋರರಿಂದ ಬುಡಕಟ್ಟು ಹೆಣ್ಣುಮಕ್ಕಳನ್ನು ಗುರಿಯಾಗಿಸಲಾಗುತ್ತಿದೆ. ಅವರನ್ನು ಜೀವಂತವಾಗಿ ಸುಡಲಾಗುತ್ತಿದೆ ಎಂದು ಪ್ರಧಾನಿ ಹೇಳಿದರು.

ಸಂದರ್ಶನ | TMC ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ; ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ: ಪ್ರಧಾನಿ ಮೋದಿ
ಲೋಕಸಭೆ ಚುನಾವಣೆ 2024ರ ಚುನಾವಣಾ ಪ್ರಕ್ರಿಯೆ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅತಿ ಹೆಚ್ಚು ಲಾಭ ಗಳಿಸುವ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

'ದೇವದೂತ ಬಂದ ನಂತರವೇ...': ಪ್ರಧಾನಿ ಮೋದಿ ವಿರುದ್ಧ ಸಚಿವ ಡಾ ಮಹದೇವಪ್ಪ ಟೀಕೆ
ಜನರಿಗೆ ನಿರಂತರವಾಗಿ ಸಹಾಯ ಮಾಡಿ ಅವರಿಂದಲೇ ಭಗವಾನ್ ಎಂದು ಕರೆಸಿಕೊಂಡ ಗೌತಮ ಬುದ್ಧರೇ ತನ್ನನ್ನು ತಾನು ಎಲ್ಲರಂತೆಯೇ ಸಾಮಾನ್ಯ ಎಂದು ಹೇಳಿಕೊಂಡಿರುವಾಗ ಜನರ ಬದುಕಿಗೆ ಎಲ್ಲ ರೀತಿಯಲ್ಲೂ ತೊಂದರೆ ಉಂಟು ಮಾಡಿ, ಅಸಮಾನತೆಯ ಸಮಾಜದ ನಿರ್ಮಾಣದ ದಿಕ್ಕಿನೆಡೆ ಆಡಳಿತ ನಡೆಸಿರುವ ಮೋದಿಯವರು ತಮ್ಮನ್ನು ತಾವೇ ದೇವದೂತ ಎನ್ನುತ್ತಿರುವುದು ಮೂಢನಂಬಿಕೆಯ ಸಮಾಜದ ನಿರ್ಮಾಣದ ಸ್ಪಷ್ಟ ಹೆಜ್ಜೆ ಆಗಿದೆ ಎಂದು ಪ್ರಧಾನಿ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Rajkot Game Zone Fire: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ರಾಜ್‌ಕೋಟ್ ಗೇಮ್ ಝೋನ್ ಅಗ್ನಿ ಅವಘಡದಲ್ಲಿ ಮೃತರಾದ ಸಂತ್ರಸ್ತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ ಎಂದು ಅವರ ಕಚೇರಿ ಭಾನುವಾರ ತಿಳಿಸಿದೆ.

ಪ್ರಧಾನಿ ಮೋದಿ ಈ ಬಾರಿ ಗೆದ್ದರೆ ಪ್ರತಿ ಹಳ್ಳಿಯಲ್ಲೂ ತಮ್ಮ ದೇವಸ್ಥಾನ ನಿರ್ಮಿಸುತ್ತಾರೆ: ಶಿವರಾಜ್ ತಂಗಡಗಿ
ಪ್ರಧಾನಿ ನರೇಂದ್ರ ಮೋದಿಯವರು ತಾವೇ ದೇವರೆಂಬ ಭ್ರಮೆಯಲ್ಲಿದ್ದು, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಗೆದ್ದರೆ ಮೋದಿ ಅವರು ಪ್ರತಿ ಹಳ್ಳಿಯಲ್ಲಿಯೂ ತಾವೇ ತಮ್ಮ ದೇವಸ್ಥಾನಗಳನ್ನು ನಿರ್ಮಿಸಿಕೊಳ್ಳುತ್ತಾರೆ ಎಂದು ಸಚಿವ ಶಿವರಾಜ್ ತಂಗಡಗಿ ಶನಿವಾರ ಹೇಳಿದ್ದಾರೆ.

