PM Narendra Modi

ಡಾ. ಶಿವಕುಮಾರ ಸ್ವಾಮೀಜಿಗಳ 117ನೇ ಜಯಂತಿ: ಪ್ರಧಾನಿ ಮೋದಿ ಕನ್ನಡದಲ್ಲಿ ನುಡಿ ನಮನ
ಇಂದು ಬೆಳಗ್ಗೆ ಮಠಕ್ಕೆ ಭೇಟಿ ನೀಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್

Katchatheevu island: 'ಶ್ರೀಲಂಕಾಕ್ಕೆ ಕಚ್ಚತೀವು ದ್ವೀಪ ಬಿಟ್ಟುಕೊಟ್ಟ ಕಾಂಗ್ರೆಸ್, ಅದನ್ನು ಎಂದಿಗೂ ನಂಬಲು ಸಾಧ್ಯವಿಲ್ಲ'- ಪ್ರಧಾನಿ ಮೋದಿ
1974ರಲ್ಲಿ ವಿವಾದಿತ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಬಿಟ್ಟುಕೊಟ್ಟ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ನ್ನು ಟೀಕಿಸಿದ್ದಾರೆ.

BJP ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ; ಸದಾನಂದ ಗೌಡ, ಪ್ರತಾಪ್ ಸಿಂಹ ಸೇರಿ ಟಿಕೆಟ್ ವಂಚಿತರಿಗೆ ಸ್ಥಾನ
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಸ್ ಜೈಶಂಕರ್, ಸ್ಮೃತಿ ಇರಾನಿ ಮತ್ತು ನಿತಿನ್ ಗಡ್ಕರಿ ಸೇರಿದಂತೆ 40 ಮಂದಿ ಕರ್ನಾಟಕದ ಲೋಕಸಭೆ ಚುನಾವಣೆಗೆ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಧಾನ ಪಡೆದಿದ್ದಾರೆ.

'ಮೋದಿಯವರು ಕಾಗೆ ಬೆಳ್ಳಗಿದೆ ಎಂದರೆ ಬಿಜೆಪಿಯವರು ಹೌದು ಬೆಳ್ಳಗಿದೆ ಅಂತಾರೆ, ನಾಯಿಗೆ ಬಾಲ ಇಲ್ಲ ಅಂದರೆ ಹೌದು ಇಲ್ಲಾ ಅಂತಾರೆ'
ಸುಳ್ಳು ಹೇಳುವುದು ಬಿಜೆಪಿಯವರ ಚಾಳಿ, ಹೇಗೆ ಎಂದರೆ ಪ್ರಧಾನಿ ನರೇಂದ್ರ ಮೋದಿಯವರು ಕಾಗೆ ಬೆಳ್ಳಗಿದೆ ಎಂದರೆ ಅವರ ಅನುಯಾಯಿಗಳೂ ಹೌದು ಬೆಳ್ಳಗಿದೆ ಅಂತಾರೆ ನಾಯಿಗೆ ಬಾಲ ಇಲ್ಲ ಅಂದರೆ ಹೌದು ಇಲ್ಲಾ ಅಂತ ವಾದ ಮಾಡ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ತಂತ್ರಜ್ಞಾನದ ಪಾತ್ರ ದೊಡ್ಡದು: ಬಿಲ್ ಗೇಟ್ಸ್ ಜೊತೆ ಸಂವಾದದಲ್ಲಿ ಪ್ರಧಾನಿ ಮೋದಿ
ಲೋಕೋಪಕಾರಿ ಮತ್ತು ಮೈಕ್ರೋಸಾಫ್ಟ್ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ಅವರೊಂದಿಗೆ ದೆಹಲಿಯ ತಮ್ಮ ನಿವಾಸದಲ್ಲಿ ನಡೆಸಿದ ಸಂವಾದದಲ್ಲಿ ಅವರು, ಜಗತ್ತಿನಲ್ಲಿ ಡಿಜಿಟಲ್ ವಿಭಜನೆಯ ಬಗ್ಗೆ ಕೇಳುತ್ತಿದ್ದೇನೆ. ಭಾರತದಲ್ಲಿ ಇದು ಸಂಭವಿಸಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ತಮಿಳುನಾಡು: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಡಿಎಂಕೆ ಸಚಿವರ ವಿರುದ್ಧ ಎಫ್‌ಐಆರ್ ದಾಖಲು
ಬಿಜೆಪಿ ದಕ್ಷಿಣ ಜಿಲ್ಲಾಧ್ಯಕ್ಷ ಚಿತ್ರಾಂಗತನ್ ನೀಡಿದ ದೂರಿನ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ತಮಿಳುನಾಡು ಮೀನುಗಾರಿಕೆ, ಮೀನುಗಾರರ ಕಲ್ಯಾಣ ಮತ್ತು ಪಶುಸಂಗೋಪನೆ ಸಚಿವ ಅನಿತಾ ಆರ್ ರಾಧಾಕೃಷ್ಣನ್ ವಿರುದ್ಧ ತೂತುಕುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎರಡು ದಿನಗಳ ಭೂತಾನ್ ಪ್ರವಾಸಕ್ಕೆ ಪ್ರಧಾನಿ ಮೋದಿ ಪ್ರಯಾಣ
ಇಂದು ಮುಂಜಾನೆ ದೆಹಲಿಯಿಂದ ನಿರ್ಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ಮಾದರಿ ನೀತಿ ಸಂಹಿತೆ ಉಲ್ಲಂಘನೆ; ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು
ವಾರಣಾಸಿಯ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕಾಗಿ ಕೇಂದ್ರ ಸರ್ಕಾರದ ಹಣವನ್ನು ಬಳಸಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

2024 ಲೋಕಸಭೆ ಚುನಾವಣೆ: ಪ್ರಧಾನಿ ಮೋದಿ ಭಾಷಣವನ್ನು ಕನ್ನಡದಲ್ಲೇ ಕೇಳಿಸಲು ಎಐ ಮೊರೆ ಹೋದ ಬಿಜೆಪಿ
ಲೋಕಸಭಾ ಚುನಾವಣಾ ಪ್ರಚಾರದಲ್ಲಿ, ಬಿಜೆಪಿಯು ತಮ್ಮ ರಾಷ್ಟ್ರೀಯ ನಾಯಕರು ಸಾಮಾನ್ಯವಾಗಿ ಹಿಂದಿಯಲ್ಲಿ ಮಾಡುವ ಭಾಷಣಗಳನ್ನು ಇತರ ಭಾರತೀಯ ಭಾಷೆಗಳಿಗೆ ಭಾಷಾಂತರಿಸಲು ಎಐ ಆಧರಿತ ತಂತ್ರಜ್ಞಾನವನ್ನು ಬಳಸುತ್ತಿದೆ. ಬಿಜೆಪಿ ಈಗಾಗಲೇ ರೆಕಾರ್ಡ್ ಮಾಡಿದ ಭಾಷಣಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡಲು ಪ್ರಾರಂಭಿಸಿದ್ದು, ಶೀಘ್ರದಲ್ಲೇ ಭಾಷಣ ಮಾಡುವ ಸಮಯದಲ್ಲೇ ಇತರ ಭಾಷೆಗಳಇಗೆ ಅನುವಾದಿಸಲು ಮುಂದಾಗಿದೆ.

