PM Narendra Modi

ಬೆಂಗಳೂರು: ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ, ಅದ್ಭುತ ಅನುಭವ ಎಂದ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ಗೆ(HAL) ಭೇಟಿ ನೀಡಿದ ಸಂದರ್ಭದಲ್ಲಿ ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.

ಡ್ರೆಸ್ಸಿಂಗ್ ರೂಮ್ ಗೆ ಪ್ರಧಾನಿ ಭೇಟಿ: ಮೋದಿ ನಡೆಯನ್ನು ಕೊಂಡಾಡಿದ ಟೀಂ ಇಂಡಿಯಾ ಮಾಜಿ ಕೋಚ್!
ವಿಶ್ವಕಪ್ 2023ರ ಫೈನಲ್ ಸೋಲಿನ ನಂತರ ಪ್ರಧಾನಿ ನರೇಂದ್ರ ಮೋದಿ ಡ್ರೆಸ್ಸಿಂಗ್ ರೂಮಿಗೆ ಭೇಟಿ ನೀಡಿ, ಟೀಂ ಇಂಡಿಯಾದ ಆಟಗಾರರನ್ನು ಸಂತೈಸಿದ ಪರಿಗೆ ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಮಾರುಹೋಗಿದ್ದಾರೆ.

ಉತ್ತರಾಖಂಡ ಸಿಎಂಗೆ ಕರೆ ಮಾಡಿದ ಪ್ರಧಾನಿ ಮೋದಿ; ಉತ್ತರಕಾಶಿ ಸುರಂಗದೊಳಗೆ ಸಿಕ್ಕಿಬಿದ್ದ ಕಾರ್ಮಿಕರ ಸ್ಥಿತಿ ಬಗ್ಗೆ ವಿಚಾರಣೆ
ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ನವೆಂಬರ್ 12 ರಿಂದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಪಡೆದರು.

ಕ್ರಿಕೆಟ್ ಪಂದ್ಯ ವೀಕ್ಷಿಸಲು ತೆರಳುವ ಪ್ರಧಾನಿ ಮೋದಿ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿಲ್ಲ; ಪ್ರಿಯಾಂಕಾ ಗಾಂಧಿ
ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ಭಾರತ ಗೆದ್ದರೆ ಸ್ವಲ್ಪಮಟ್ಟಿನ ಶ್ರೇಯಸ್ಸು ಪಡೆಯುವ ನಿರೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಕೆಟ್ ಪಂದ್ಯ ವೀಕ್ಷಿಸಲು ಅಹಮದಾಬಾದ್ಗೆ ತೆರಳಿದ್ದರು. ಆದರೆ, ಬಿಕ್ಕಟ್ಟಿನ ಕಾರಣ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಮಾತ್ರ ಭೇಟಿ ನೀಡಲಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಹೇಳಿದ್ದಾರೆ.

ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಹತ್ಯೆಗೆ ದಾವೂದ್ ಗ್ಯಾಂಗ್ ಗುತ್ತಿಗೆ ನೀಡಿದೆ ಎಂದು ಬೆದರಿಕೆ ಕರೆ; ವ್ಯಕ್ತಿ ಬಂಧನ
ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡಲು ಪಾತಕಿ ದಾವೂದ್ ಇಬ್ರಾಹಿಂ ತಂಡದ ಸದಸ್ಯರು ತನಗೆ ಗುತ್ತಿಗೆ ನೀಡಿದ್ದಾರೆ ಎಂದು ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ರಾಜಸ್ಥಾನ ಕಾಂಗ್ರೆಸ್ ಕ್ರಿಕೆಟ್ ತಂಡದಂತಿದ್ದು, ಒಬ್ಬರನ್ನೊಬ್ಬರು ರನ್ ಔಟ್ ಮಾಡಲು ಯತ್ನಿಸುತ್ತಿರುತ್ತಾರೆ: ಪ್ರಧಾನಿ ಮೋದಿ
ರಾಜಸ್ಥಾನ ಕಾಂಗ್ರೆಸ್ ಕ್ರಿಕೆಟ್ ತಂಡದಂತಿದ್ದು, ಅವರ ಬ್ಯಾಟ್ಸ್ಮನ್ಗಳು ಐದು ವರ್ಷಗಳ ಕಾಲ ಪರಸ್ಪರ ರನ್ ಔಟ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

ವಿಜಯೇಂದ್ರ ನೇಮಕ ಬಗ್ಗೆ ನನಗೆ ಗೊತ್ತೇ ಇರಲಿಲ್ಲ, ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟಿರಲಿಲ್ಲ: ಬಿ ಎಸ್ ಯಡಿಯೂರಪ್ಪ
ಬಹಳ ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಬಿಜೆಪಿಗೆ ಸಂಬಂಧಪಟ್ಟಂತೆ ಬಹಳ ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯಾಧ್ಯಕ್ಷರ ನೇಮಕ ಮಾಡಿದ್ದಾರೆ. ವಿಜಯೇಂದ್ರ ನೇಮಕ ನಿರೀಕ್ಷೆಯಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

'ಧನ್ತೇರಸ್' ಹಬ್ಬ: ದೇಶವಾಸಿಗಳಿಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಶುಭಾಶಯ
ಐದು ದಿನಗಳ ಆಚರಣೆಯ ಹಿಂದೂ ಧರ್ಮೀಯರ ಪವಿತ್ರ ಬೆಳಕಿನ ಹಬ್ಬ ದೀಪಾವಳಿಗೆ ಶುಕ್ರವಾರ ಮುನ್ನುಡಿ ಸಿಕ್ಕಿದೆ. ಇಂದು ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯ ಹಬ್ಬ' ಧನ್ತೇರಸ್ ಆಚರಿಸಲಾಗುತ್ತಿದ್ದು, ಉತ್ತರ ಭಾರತೀಯರಲ್ಲಿ ಇದು ಹೆಚ್ಚಾಗಿ ಆಚರಣೆಯಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ರಾಜಕೀಯ ಇತಿಹಾಸವನ್ನು ಓದಲಿ: ಸಚಿವ ಪ್ರಿಯಾಂಕ್ ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ರಾಜಕೀಯ ಇತಿಹಾಸವನ್ನು ಓದಬೇಕು ಎಂದು ಸಲಹೆ ನೀಡಿದ್ದಾರೆ.

