ರಾಜ್ಯಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಿದ್ದ ಶಿಕ್ಷಕರು ಕೊರೋನಾದಿಂದ ಮೃತ್ಯು: ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೊಟೀಸ್
ಇತ್ತೀಚಿನ ಚುನಾವಣೆ ವೇಳೆ ಕರ್ತವ್ಯದಲ್ಲಿ ನಿರತವಾಗಿ ಕೋವಿಡ್ ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತಂತೆ ಹೈಕೋರ್ಟ್ ಭಾರತ ಚುನಾವಣಾ ಆಯೋಗ, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.