ರಾಜ್ಯಬೆಂಗಳೂರಿನಲ್ಲಿ ದೀಪಾವಳಿ ಸಮಯದಲ್ಲಿ ದಿನಕ್ಕೆ 2 ತಾಸು ಮಾತ್ರ ಪಟಾಕಿ ಹಚ್ಚಲು ಅವಕಾಶ: ಸುತ್ತೋಲೆ
ಭಾನುವಾರದಿಂದ ದೀಪಾವಳಿ ಹಬ್ಬದ ಸಂಭ್ರಮ. ದೀಪಾವಳಿ ಹಾಗೆಂದು ಬೆಂಗಳೂರು ನಗರ ಪ್ರದೇಶದಲ್ಲಿ ರಾತ್ರಿಯಿಡೀ ಬೇಕಾಬಿಟ್ಟಿ ಪಟಾಕಿಗಳನ್ನು ಸಿಡಿಸುವಂತಿಲ್ಲ, ದೀಪಾವಳಿ ಸಂದರ್ಭದಲ್ಲಿ ಪ್ರತಿದಿನ ರಾತ್ರಿ 8 ರಿಂದ 10 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಸುತ್ತೋಲೆ ಹೊರಡಿಸಿದೆ.