Poonch

ಕಾಶ್ಮೀರ: ಕಮರಿಗೆ ಉರುಳಿದ ಸೇನಾ ವಾಹನ; ಭೀಕರ ಅಪಘಾತದಲ್ಲಿ ಐವರು ಯೋಧರು ಸಾವು
ವೈಟ್ ನೈಟ್ ಕಾರ್ಪ್ಸ್ ತನ್ನ X ಖಾತೆಯ ಮೂಲಕ ಸಾವುನೋವುಗಳನ್ನು ಖಚಿತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಜಮ್ಮು-ಕಾಶ್ಮೀರ: ಉಗ್ರರ ಒಳನುಸುಳುವಿಕೆ ಯತ್ನ ವಿಫಲ, ಓರ್ವ ಸೈನಿಕ ಹುತಾತ್ಮ
ಕೃಷ್ಣಗತಿ ಬೆಲ್ಟ್‌ನ ಬತ್ತಲ್ ಫಾರ್ವರ್ಡ್ ಪ್ರದೇಶದಲ್ಲಿ ಉಗ್ರರನ್ನು ಪರಿಣಾಮಕಾರಿಯಾಗಿ ಹಿಮ್ಮಟ್ಟಿಸಲಾಗಿದೆ. ಈ ವೇಳೆ ತೀವ್ರವಾದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಲ್ಯಾನ್ಸ್ ನಾಯಕ್ ಸುಭಾಷ್ ಕುಮಾರ್ ಸಾವನ್ನಪ್ಪಿದ್ದಾರೆ. ಉಗ್ರರ ಕಡೆಯೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಸೇನೆ ಕಾರ್ಯಾಚರಣೆ; ಪೂಂಚ್ ನಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲ
ಗಡಿಯಾಚೆಗಿನ ಉಗ್ರಗಾಮಿಗಳ ಒಳನುಸುಳುವಿಕೆ ಪ್ರಯತ್ನಗಳನ್ನು ವಿಫಲಗೊಳಿಸಲು ಜಮ್ಮು-ಕಾಶ್ಮೀರದಲ್ಲಿನ ಎಲ್‌ಒಸಿ ಮತ್ತು ಗಡಿಗಳಲ್ಲಿ ನಿಯೋಜಿಸಲಾದ ಸೇನಾ ಸಿಬ್ಬಂದಿ ಉನ್ನತ ಮಟ್ಟದ ಎಚ್ಚರಿಕೆಯಲ್ಲಿದ್ದಾರೆ ಎಂದು ಸೇನಾ ಅಧಿಕಾರಿ ಹೇಳಿದರು.

ಜಮ್ಮು-ಕಾಶ್ಮೀರ: ಪೂಂಚ್‌ನಲ್ಲಿ ಮೂವರು ಉಗ್ರರ ಸಹಚರರ ಬಂಧನ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾನುವಾರ ಉಗ್ರರ ಸಹಚರರು ಎನ್ನಲಾದ ಮೂವರನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿಸಲಾಗಿದೆ. ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಅಗತ್ಯವಾದ ಕ್ರಮವಾಗಿ ಮೂವರು ಪುರುಷರು ರಾಜ್ಯದ ಸುರಕ್ಷತೆ ಮತ್ತು ಭದ್ರತೆಗೆ ಗಮನಾರ್ಹ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ನಿರ್ಣಯಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

IAF ಬೆಂಗಾವಲು ವಾಹನಗಳ ಮೇಲೆ ದಾಳಿ: ಶಂಕಿತ ಉಗ್ರರ 'ರೇಖಾಚಿತ್ರ' ಬಿಡುಗಡೆ
ಜಮ್ಮು- ಕಾಶ್ಮೀರದ ಪೊಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆ (ಐಎಎಫ್) ವಾಹನಗಳ ಮೇಲೆ ದಾಳಿ ನಡೆಸಿದ ಇಬ್ಬರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಭದ್ರತಾ ಪಡೆ ಸೋಮವಾರ ಬಿಡುಗಡೆ ಮಾಡಿದೆ.

ಜಮ್ಮು-ಕಾಶ್ಮೀರ: ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಕಾರ್ಯಾಚರಣೆ, ರಜೌರಿ, ಪೂಂಚ್'ನಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಕಾರ್ಯಾಚರಣೆ ಮುಂದುವರೆದಿದ್ದು, ಈ ಹಿನ್ನೆಲೆಯಲ್ಲಿ ರಜೌರಿ ಹಾಗೂ ಪೂಂಚ್ ನಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯ ಎಲ್‌ಒಸಿ ಬಳಿ ತನ್ನದೇ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಯೋಧ ಸಾವು!
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಸೇನಾ ಸಿಬ್ಬಂದಿಯೊಬ್ಬರು ತನ್ನದೇ ಆದ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಪೂಂಚ್: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ವಿಭಾಗೀಯ ಕಮಾಂಡರ್ ಹತ್ಯೆ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ದೆಗ್ವಾರ್ ವಲಯದ ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ವಿಭಾಗೀಯ ಕಮಾಂಡರ್ ಒಬ್ಬನನ್ನು ಭದ್ರತಾಪಡೆಗಳು ಸೋಮವಾರ ಹೊಡೆದುರಳಿಸಿವೆ.

ಜಮ್ಮು ಮತ್ತು ಕಾಶ್ಮೀರ: ದಿಢೀರ್ ಪ್ರವಾಹದಿಂದ ನದಿಯಲ್ಲಿ ಕೊಚ್ಚಿಹೋಗಿದ್ದ ಇಬ್ಬರು ಸೈನಿಕರ ಮೃತದೇಹಗಳು ಪತ್ತೆ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಹಠಾತ್ ಪ್ರವಾಹದಿಂದ ಕೊಚ್ಚಿ ಹೋಗಿದ್ದ ಇಬ್ಬರು ಯೋಧರ ಮೃತದೇಹಗಳನ್ನು ಭಾನುವಾರ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

