ರಾಜಕೀಯಶೀಘ್ರದಲ್ಲೇ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು; ಸದನದಲ್ಲಿ ಬೊಮ್ಮಾಯಿ ಪ್ರಶ್ನೆಗಳಿಗೆ ಉತ್ತರಿಸಿದ ಸಿದ್ದರಾಮಯ್ಯ
8 ಮಂದಿ ಸಚಿವರಾಗಿ ಮೇ 20 ರಂದು ಪ್ರಮಾಣ ವಚನ ಸ್ವೀಕರಿಸಿದ್ದು, ಈವರೆಗೂ ಖಾತೆ ಹಂಚಿಕೆಯಾಗಿಲ್ಲ. ಈ ಕುರಿತು ಪ್ರತಿಪಕ್ಷ ಬಿಜೆಪಿ ರಾಜ್ಯ ವಿಧಾನಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದಲ್ಲಿರುವ ಸಚಿವರಿಗೆ ಶೀಘ್ರದಲ್ಲೇ ಖಾತೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಬುಧವಾರ ಹೇಳಿದ್ದಾರೆ.