ದೇಶದೆಹಲಿ: ಲೆಫ್ಟಿನೆಂಟ್ ಗವರ್ನರ್ ಸೋಗಿನಲ್ಲಿ ಶಿಕ್ಷಕಿ ಹುದ್ದೆಗೆ ಸಹೋದರಿ ಹೆಸರು ಶಿಫಾರಸು, ಸಹಾಯಕ ಪ್ರಾಧ್ಯಾಪಕನ ವಿರುದ್ಧ ದೂರು ದಾಖಲು
ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಎಂದು ಬಿಂಬಿಸಿಕೊಳ್ಳುವ ಮೂಲಕ ತನ್ನ ಸಹೋದರಿಯ ಹೆಸರನ್ನು ಶಿಕ್ಷಕಿ ಹುದ್ದೆಗೆ ಶಿಫಾರಸು ಮಾಡಿದ ಆರೋಪದಲ್ಲಿ ದೆಹಲಿ ಪೊಲೀಸರು ಇಲ್ಲಿನ ಗುರು ಗೋಬಿಂದ್ ಸಿಂಗ್ ಇಂದ್ರಪ್ರಸ್ಥ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಎಲ್ಜಿ ಸಚಿವಾಲಯ ಶುಕ್ರವಾರ ತಿಳಿಸಿದೆ.