positive

ರಾಜಸ್ಥಾನ ಆರೋಗ್ಯ ಸಚಿವ ರಘು ಶರ್ಮಾಗೆ ಕೊರೋನಾ ದೃಢ
ರಾಜಸ್ಥಾನ ಆರೋಗ್ಯ ಸಚಿವ ರಘು ಶರ್ಮಾ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಸೋಮವಾರ ತಿಳಿದುಬಂದಿದೆ.

ಶಿರಾ ಉಪ ಚುನಾವಣೆ ಸ್ಪರ್ಧಿ, ಮಾಜಿ ಸಚಿವ ಟಿ. ಬಿ. ಜಯಚಂದ್ರ ದಂಪತಿಗೆ ಕೊರೋನಾ ಸೋಂಕು
ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಮತ್ತು ಪತ್ನಿ ಜಿ.ಎಚ್.ನಿರ್ಮಲಾ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಪತ್ನಿ ಮತ್ತು ಮಗಳಿಗೆ ಕೊರೋನಾ ಸೋಂಕು ದೃಢ
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತು ಸಚಿವ ಸುಧಾಕರ್ ಅವರು ಟ್ವಿಟರ್‌ನಲ್ಲಿ ಮಾಹಿತಿ ಖಚಿತಪಡಿಸಿದ್ದಾರೆ

ಇದುವರೆಗೆ ರಾಜ್ಯದ ಶೇ.11 ರಷ್ಟು ಪೊಲೀಸರಿಗೆ ಕೊರೋನಾ, 87 ಸಿಬ್ಬಂದಿ ಸಾವು!
ರಾಜ್ಯದಲ್ಲಿರುವ 80,000 ಮಂದಿ ಪೊಲೀಸರಲ್ಲಿ ಶೇ.11 ರಷ್ಟು ಮಂದಿಗೆ ಕೊರೋನಾ ವೈರಸ್ ಸೋಂಕು ತಗುಲಿದ್ದು, ಇದರಲ್ಲಿ 87 ಮಂದಿ ಪೊಲೀಸರನ್ನು ಮಹಾಮಾರಿ ವೈರಸ್ ಬಲಿಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್'ಗೆ ಕೊರೋನಾ ಪಾಸಿಟಿವ್
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಸೋಮವಾರ ತಿಳಿದುಬಂದಿದೆ.

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೆ ಕೊರೋನಾ
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಐಸೋಲೇಷನ್ ನಲ್ಲಿದ್ದಾರೆ.

ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಗೆ ಕೋವಿಡ್-19 ಪಾಸಿಟಿವ್
ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.ಈ ಕುರಿತು ಟ್ವೀಟರ್ ನಲ್ಲಿ ಸ್ಪಷ್ಪಪಡಿಸಿರುವ ಸುಕುಮಾರನ್, ಮಲಯಾಳಂ ಚಿತ್ರ ಜನ ಗಣ ಮನದ ಚಿತ್ರದ ಸೆಟ್ ನಲ್ಲಿ ಅಕ್ಟೋಬರ್ ನಲ್ಲಿ ತೊಡಗಿಸಿಕೊಂಡಿದ್ದೇ. ಚಿತ್ರೀಕರಣದ ಕೊನೆಯ ದಿನ ನಡೆಸಿದ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ.

ಕೋವಿಡ್-19: ನವೆಂಬರ್ 12ರೊಳಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ತಲುಪುವ ಸಾಧ್ಯತೆ!
ರಾಜ್ಯದಲ್ಲಿ ಕೊರೋನಾ ವೈರಸ್ ಅಬ್ಬರ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಸೋಂಕಿತರ ಸಂಖ್ಯೆ ಇದೇ ರೀತಿ ಮುಂದುವರೆದಿದ್ದೇ ಆದರೆ, ನವೆಂಬರ್ 12ರೊಳಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10 ಲಕ್ಷ ಗಡಿದಾಟಲಿದೆ, ಮೃತರ ಸಂಖ್ಯೆ 12,800ಕ್ಕೆ ತಲುಪಲಿದೆ ಎಂದು ತಜ್ಞರು ನಡೆಸಿದ ಅಧ್ಯಯನದಲ್ಲಿ ಅಂದಾಜು ಮಾಡಲಾಗಿದೆ.

ಚಿತ್ರದುರ್ಗ: 72 ಮಂದಿಗೆ ಕೊರೋನಾ ಪಾಸಿಟಿವ್
ಜಿಲ್ಲೆಯಲ್ಲಿ ಭಾನುವಾರ 72 ಜನರಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,529ಕ್ಕೆ ಏರಿಕೆಯಾಗಿದೆ.

