ರಾಜ್ಯವಿದ್ಯುತ್ ಖರೀದಿಯಲ್ಲಿ ಭ್ರಷ್ಟಾಚಾರ; ಎಚ್ಡಿ ಕುಮಾರಸ್ವಾಮಿ ಆರೋಪ ಆಧಾರರಹಿತ: ಇಂಧನ ಸಚಿವ ಕೆಜೆ ಜಾರ್ಜ್
ಸಿದ್ದರಾಮಯ್ಯ ಸರ್ಕಾರದ ಮೇಲೆ ಎಚ್ಡಿ ಕುಮಾರಸ್ವಾಮಿ ಮಾಡಿರುವ ಭ್ರಷ್ಟಾಚಾರದ ಆರೋಪವನ್ನು ಇಂಧನ ಸಚಿವ ಕೆಜೆ ಜಾರ್ಜ್ ತಳ್ಳಿಹಾಕಿದ್ದಾರೆ. ರಾಜ್ಯದ ಇಂಧನ ಅಗತ್ಯಗಳನ್ನು ಪೂರೈಸಲು ವಿದ್ಯುತ್ ಖರೀದಿ ಮತ್ತು ಕಲ್ಲಿದ್ದಲು ಆಮದು ಮಾಡಿಕೊಳ್ಳುವಲ್ಲಿ ಅವ್ಯವಹಾರ ನಡೆದಿದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದರು.