ರಾಜಕೀಯವಕೀಲರು, ಕಾನೂನು ತಜ್ಞರು ಮತ್ತು ನನ್ನ ತಾತ ಜೆಡಿಎಸ್ ವರಿಷ್ಠ ದೇವೇಗೌಡರೊಂದಿಗೆ ಚರ್ಚಿಸಿ ಮುಂದಿನ ಕ್ರಮ: ಪ್ರಜ್ವಲ್ ರೇವಣ್ಣ
2019ರ ಲೋಕಸಭೆ ಚುನಾವಣೆಯಲ್ಲಿ ಜಯ ಸಾಧಿಸಿದ್ದ ಜೆಡಿಎಸ್ ನ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಆಸ್ತಿ ವಿವರ ಸಲ್ಲಿಸುವಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಪ್ರಕರಣದಲ್ಲಿ ಹೈಕೋರ್ಟ್ ನ್ಯಾ. ಕೆ. ನಟರಾಜನ್ ಪೀಠ ಸಂಸತ್ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಆದೇಶ ಪ್ರಕಟಿಸಿದೆ.