Prajwal Revanna

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಕೆಲವು ಪ್ರಕ್ರಿಯೆ ಅಗತ್ಯ: ಪ್ರಲ್ಹಾದ ಜೋಶಿ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಲು ಕೆಲವು ವಿಧಾನಗಳನ್ನು ಅನುಸರಿಸಬೇಕಾಗಿದೆ ಮತ್ತು ಅವರನ್ನು ದೇಶಕ್ಕೆ ಕರೆತರುವಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಸಹಕರಿಸಲು ಕೇಂದ್ರವು ಸಿದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗುರುವಾರ ಹೇಳಿದರು.

ಪ್ರಜ್ವಲ್ ರೇವಣ್ಣ ಪ್ರಕರಣ: ಆಡಿಯೋ ಟೇಪ್‌ನಲ್ಲಿರುವ ನನ್ನ ಧ್ವನಿಯನ್ನು ತಿರುಚಲಾಗಿದೆ- ಎಲ್ಆರ್ ಶಿವರಾಮೇಗೌಡ
ಸಾಮಾಜಿಕ ಜಾಲತಾಣದಲ್ಲಿ ಶಿವರಾಮೇಗೌಡ ಸ್ಪಷ್ಟನೆ ನೀಡಿದ್ದು, ಕೆಲ ಅಪರಿಚಿತ ದುಷ್ಕರ್ಮಿಗಳು ತಮ್ಮ ಧ್ವನಿಯನ್ನು ಮಾರ್ಫಿಂಗ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಪ್ರಕ್ರಿಯೆ ಆರಂಭ: ವಿದೇಶಾಂಗ ಸಚಿವಾಲಯ
ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಪ್ರಕ್ರಿಯೆ ಚಾಲನೆ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಮೂಲಗಳಿಂದ ತಿಳಿದುಬಂದಿದೆ.

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದತಿ ಕೋರಿ ಮತ್ತೊಮ್ಮೆ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ
ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಬೇಕು. ಈ ವಿಚಾರದಲ್ಲಿ ವಿದೇಶಾಂಗ ಸಚಿವಾಲಯ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಪ್ರಜ್ವಲ್ ಎಲ್ಲಿದ್ದಾನೋ ಗೊತ್ತಿಲ್ಲ, ಪ್ರಕರಣ ಸಂಬಂಧ ಏನನ್ನೂ ಕೇಳದಿರಿ: ಮಾಧ್ಯಮಗಳಿಗೆ ರೇವಣ್ಣ ಮನವಿ
ಪ್ರಜ್ವಲ್ ಎಲ್ಲಿದ್ದಾನೋ ಗೊತ್ತಿಲ್ಲ. ಲೈಂಗಿಕ ದೌರ್ಜನ್ಯ ಪ್ರಕರಣ ಪ್ರಸ್ತುತ ನ್ಯಾಯಾಲಯದ ಅಂಗಳದಲ್ಲಿದ್ದು, ಪ್ರಕರಣ ಸಂಬಂಧ ನನ್ನನ್ನೂ ಏನನ್ನೂ ಕೇಳದಿರಿ ಎಂದು ಮಾಧ್ಯಮಗಳಿಗೆ ಹೆಚ್'ಡಿ.ರೇವಣ್ಣ ಅವರು ಮನವಿ ಮಾಡಿಕೊಂಡಿದ್ದಾರೆ.

ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಫೋನ್ ಕದ್ದಾಲಿಕೆಗೆ ಆದೇಶ ನೀಡಿಲ್ಲ: HDK ಆರೋಪಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ಕಿರುಕುಳ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ನನ್ನ ಮತ್ತು ತಮ್ಮ ಕುಟುಂಬ ಸದಸ್ಯರ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ಸಿಎಂ ಪ್ರತಿಕ್ರಿಯಿಸಿದರು.

ದೇಶಕ್ಕೆ ವಾಪಸ್ ಬಂದು, ತನಿಖೆ ಎದುರಿಸುವಂತೆ ಪ್ರಜ್ವಲ್‌ಗೆ ಚಿಕ್ಕಪ್ಪ HDK ಮತ್ತೊಮ್ಮೆ ಮನವಿ
ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಪಕ್ಷ ಮತ್ತು ಮಿತ್ರ ಪಕ್ಷ ಬಿಜೆಪಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೇಳಿದ್ದಾರೆ.

DCM ಬಳಿ ಇರುವವರೆಲ್ಲಾ ಭಯೋತ್ಪಾದಕರು; 1980 ರಲ್ಲೇ ಮಹಾನುಭಾವರಿಂದ CD ಫ್ಯಾಕ್ಟರಿ ಓಪನ್: HDK
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬಳಿ ಇರುವವರೆಲ್ಲ ಭಯೋತ್ಪಾದಕರು, ನನಗೆ ಡಿಕೆ ಶಿವಕುಮಾರ್ ಕಂಡರೆ ಅಸೂಯೆ ಎಂದು ಹೇಳಿದ್ದಾರೆ

ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ: ಅನಗತ್ಯ ಹೇಳಿಕೆ ನೀಡದಂತೆ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಗತ್ಯ ಹೇಳಿಕೆ ನೀಡದಂತೆ ಸಿಎಂ ಸಿದ್ದರಾಮಯ್ಯ ಅವರು ಸಚಿವರಿಗೆ ಸೂಚನೆ ನೀಡಿದ್ದಾರೆ.

