Prajwal Revanna

ಪ್ರಜ್ವಲ್ ರೇವಣ್ಣ ಬ್ಯಾರಕ್ ನಲ್ಲಿ ಮೊಬೈಲ್ ಪತ್ತೆ: ಇನ್ನಿಬ್ಬರು ಜೈಲು ಅಧಿಕಾರಿಗಳು ಅಮಾನತು
ಆಗಸ್ಟ್ 11ರಂದು ಕೇಂದ್ರ ಅಪರಾಧ ವಿಭಾಗ (CCB) ನಡೆಸಿದ ದಾಳಿಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಅವರ ಬಳಿ ಮೊಬೈಲ್ ಫೋನ್ ಪತ್ತೆಯಾಗಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಈ ದಾಳಿ ನಡೆದಿತ್ತು.

ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಕಾರಾಗೃಹದಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ
ಆಗಸ್ಟ್ 11ರಂದು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಅಧಿಕಾರಿಗಳು ನಡೆಸಿದ ದಿಢೀರ್ ತಪಾಸಣೆಯ ವೇಳೆ ಪ್ರಜ್ವಲ್ ಅವರಿಂದ ಸಿಮ್ ಕಾರ್ಡ್ ಹೊಂದಿದ್ದ ಸ್ಮಾರ್ಟ್‌ಫೋನ್, ಮೊಬೈಲ್ ಚಾರ್ಜರ್, ಡೈರಿ ಹಾಗೂ ಕಪ್ಪು ಬಣ್ಣದ ಪೆನ್‌ಡ್ರೈವ್ ಪತ್ತೆಯಾಗಿದೆ.

25 ಜನರಿರೋ ಸೆಲ್ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: 'ಭಯ ಆಗುತ್ತಿದೆ, ನನಗೂ ಸೋಂಕು ಹರಡಬಹುದು'; ಜೈಲಿನಲ್ಲಿ ಮಾಜಿ ಸಂಸದನ ರಂಪಾಟ!
ಪ್ರಜ್ವಲ್ ಮನವಿಗೆ ತಕ್ಷಣವೇ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದಿರುವ ಜೈಲು ಅಧಿಕಾರಿಗಳು, ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'
ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸ್ ತಂಡ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಹಠಾತ್ ದಾಳಿ ನಡೆಸಿದ ವೇಳೆ ಪ್ರಜ್ವಲ್ ರೇವಣ್ಣ ಮತ್ತು ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿ ಮೊಬೈಲ್ ಫೋನ್ ಹಾಗೂ ಪೆನ್ ಡ್ರೈವ್ ಪತ್ತೆಯಾಗಿತ್ತು.

Watch | ಪ್ರಜ್ವಲ್ ಮೊಬೈಲ್ ನಲ್ಲಿ ಅಶ್ಲೀಲ ಫೋಟೋ, ವಿಡಿಯೋ ಇತ್ತಾ?

ಪ್ರಜ್ವಲ್ ಮೊಬೈಲ್ ಸೀಲ್ ಮಾಡಲಾಗಿದೆ, ಹೀಗಾಗಿ ಅಶ್ಲೀಲ ಫೋಟೋ, ವಿಡಿಯೋ ಬಗ್ಗೆ ಏನು ಹೇಳಲು ಸಾಧ್ಯವಿಲ್ಲ: DCP ನಾರಾಯಣ; Video
ಬೆಂಗಳೂರು ಕೇಂದ್ರ ಕಾರಾಗೃಹದೊಳಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿಯಿಂದ ವಶಪಡಿಸಿಕೊಳ್ಳಲಾಗಿರುವ ಮೊಬೈಲ್ ನಲ್ಲಿ ಅಶ್ಲೀಲ ಫೋಟೋ, ವೀಡಿಯೊಗಳು ಕಂಡುಬಂದಿವೆ ಎಂಬ ಆರೋಪವನ್ನು ಪೊಲೀಸರು ತಳ್ಳಿಹಾಕಿದ್ದಾರೆ.

ಪ್ರಜ್ವಲ್ ಗೆ ಮೊದಲೇ ವಾರ್ನ್ ಮಾಡಿದ್ದೆ, ದರ್ಶನ್ ಸೆಲ್ ನಲ್ಲಿ ಏನೂ ಸಿಕ್ಕಿಲ್ಲ- ಅಲೋಕ್ ಕುಮಾರ್; ಸರ್ಕಾರ ತನಿಖೆ ಮಾಡಲಿ- HD ರೇವಣ್ಣ; Video
ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್ನಲ್ಲಿ ಮೊಬೈಲ್ ಹೇಗೆ ಬಂತು ಎಂಬ ಬಗ್ಗೆ ಎಲ್ಲಾ ಆಯಾಮದಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೊ ಸ್ವಲ್ಪ ಹಳೆಯದು, ನಾನು ಅಧಿಕಾರ ವಹಿಸಿಕೊಳ್ಳುವ ಮೊದಲಿನದ್ದು: ಪ್ರಿಯಾಂಕ್ ಖರ್ಗೆ; Video
ಜೈಲಿನೊಳಗೆ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆಯಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಜೈಲು ಭದ್ರತೆ ಕುರಿತು ಕಳವಳ ಹೆಚ್ಚಾಗಿರುವ ಸಂದರ್ಭದಲ್ಲಿ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಸಜಾ ಕೈದಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ: ಜನರಲ್ ಸೆಲ್ ಗೆ ಶಿಫ್ಟ್; ಲೈಬ್ರರಿ ಕೆಲಸ ಮಾಡುವಂತೆ ತಾಕೀತು
ಪ್ರಜ್ವಲ್ ರೇವಣ್ಣ ಸೆಲ್ ನಲ್ಲಿ ನೀಲಿ ಬಣ್ಣದ ರೆಡ್ ಮಿ 5ಜಿ ಮೊಬೈಲ್ ಫೋನ್ , ಒಂದು ಚಾರ್ಜರ್ , ಒಂದು ನೀಲಿ ಪಾಕೆಟ್ ನೋಟ್‌ಬುಕ್ ಹಾಗೂ ಒಂದು ಕಪ್ಪು ಬಣ್ಣದ ಸ್ಯಾಂಡಿಸ್ಕ್ ಪೆನ್‌ಡ್ರೈವ್ ಸಿಕ್ಕಿದೆ.

