Prajwal Revanna

ಯಾವುದೇ ಕ್ಷಣದಲ್ಲಿ ದುಬೈನಿಂದ ಪ್ರಜ್ವಲ್ ಆಗಮನ ಸಾಧ್ಯತೆ: ವಿಮಾನ ನಿಲ್ದಾಣದಲ್ಲಿಯೇ ಅಧಿಕಾರಿಗಳು ಠಿಕಾಣಿ!
ಮಹಿಳೆ ಅಪಹರಣ ಪ್ರಕರಣದಲ್ಲಿ ತಂದೆ ಹೆಚ್"ಡಿ.ರೇವಣ್ಣ ಅವರು ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಯಾವುದೇ ಸಮಯದಲ್ಲಿ ದುಬೈನಿಂದ ರಾಜ್ಯಕ್ಕೆ ವಾಪಸ್ ಆಗುವ ಸಾಧ್ಯತೆಗಳಿದ್ದು, ಪ್ರಜ್ವಲ್ ರಾಜ್ಯಕ್ಕೆ ಕಾಲಿಡುತ್ತಿದ್ದಂತೆಯೇ ಅವರ ಬಂಧನಕ್ಕೆ ಎಸ್‌ಐಟಿ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಇದರಂತೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಠಿಕಾಣಿ ಹೂಡಿದೆ.

Prajwal Revanna sex Scandal: ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ: ಗೃಹ ಸಚಿವ ಪರಮೇಶ್ವರ್
ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮನವಿ ಬೆನ್ನಲ್ಲೇ ಸಿಬಿಐ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರಿಗೆ ಕರ್ನಾಟಕ ಸರ್ಕಾರದಿಂದ ಆರ್ಥಿಕ ನೆರವು!
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದವರಿಗೆ ಕಾಂಗ್ರೆಸ್ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ರಾಷ್ಟ್ರೀಯ ಪಕ್ಷ ಭಾನುವಾರ ತಿಳಿಸಿದೆ. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲಾ ಇದನ್ನು ಪ್ರಕಟಿಸಿದರು.

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಪ್ರಕರಣ: ಎಸ್‌ಐಟಿ ಮೊರೆ ಹೋದ ಇನ್ನೂ ಮೂವರು ಸಂತ್ರಸ್ತರು
ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ದೇಶದಿಂದ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗಾಗಿ ಎಸ್‌ಐಟಿ ವಿದೇಶದಲ್ಲಿ ಹುಡುಕಾಟವನ್ನು ತೀವ್ರಗೊಳಿಸಿದ್ದು, ಪ್ರಕರಣದ ಇನ್ನೂ ಮೂವರು ಸಂತ್ರಸ್ತೆಯರು ಎಸ್‌ಐಟಿಯನ್ನು ಸಂಪರ್ಕಿಸಿದ್ದಾರೆ ಎಂದು ಮೂಲಗಳು ಭಾನುವಾರ ತಿಳಿಸಿವೆ.

ರೇವಣ್ಣನನ್ನು ಬಂಧಿಸಿದ್ದೇವೆ; ಬ್ರಿಜ್ ಭೂಷಣ್, ಉನ್ನಾವೋ, ಹತ್ರಾಸ್ ಅತ್ಯಾಚಾರಿಗಳ ಬಂಧಿಸುವ ಧಮ್ಮು, ತಾಕತ್ತು ನಿಮಗಿದೆಯೇ?: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ
ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಆರೋಪಯಾಗಿದ್ದ ರೇವಣ್ಣನನ್ನು ನಾವು ಬಂಧಿಸಿದ್ದೇವೆ. ಬ್ರಿಜ್ ಭೂಷಣ್, ಉನ್ನಾವೋ, ಹತ್ರಾಸ್ ಅತ್ಯಾಚಾರಿಗಳನ್ನು ಬಂಧಿಸುವ ಧಮ್ಮು, ತಾಕತ್ತು ನಿಮಗಿದೆಯೇ? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಶ್ನಿಸಿದ್ದಾರೆ.

ಎಚ್‌ಡಿ ಕುಮಾರಸ್ವಾಮಿ, ರೇವಣ್ಣ ಕುಟುಂಬಗಳ ವೈಷಮ್ಯದಿಂದ ಲೈಂಗಿಕ ಹಗರಣ ಹೊರಬಿದ್ದಿದೆ: ಡಿಕೆ ಶಿವಕುಮಾರ್
ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಮತ್ತು ಅವರ ಸಹೋದರ ಹಾಗೂ ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರ ಕುಟುಂಬಗಳ ನಡುವಿನ ವೈಷಮ್ಯದಿಂದಾಗಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣ ಪ್ರಕರಣ ಬಹಿರಂಗವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ 'ಲೈಂಗಿಕ ಹಗರಣ' ಕಾಂಗ್ರೆಸ್'ಗೆ ತಿರುಗುಬಾಣವಾಗಲಿದೆ: ಹೆಚ್‌ಡಿ ಕುಮಾರಸ್ವಾಮಿ (ಸಂದರ್ಶನ)

ಪ್ರಜ್ವಲ್ ರೇವಣ್ಣ ಶೀಘ್ರವೇ ಶರಣಾಗುತ್ತಾರೆ- ಸಿಎಸ್ ಪುಟ್ಟರಾಜು: ಮಂಗಳೂರಿನಲ್ಲಿ ಇಂದು ಸಂಸದ ಅರೆಸ್ಟ್?
ಸರಣಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎಂದು ಜೆಡಿಎಸ್‌ನ ಹಿರಿಯ ನಾಯಕ ಸಿ ಎಸ್ ಪುಟ್ಟರಾಜು ಶನಿವಾರ ಹೇಳಿದ್ದಾರೆ.

