Prajwal Revanna

ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್ ಕೋರ್ ಕಮಿಟಿ ಸಭೆ ನಂತರ ಪ್ರಜ್ವಲ್ ರೇವಣ್ಣ ಉಚ್ಛಾಟನೆ ಸಾಧ್ಯತೆ!
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡುವ ಸಾಧ್ಯತೆಯಿದೆ.

Prajwal Revanna Case: ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು HD ಕುಮಾರಸ್ವಾಮಿ ಸೇರಿದಂತೆ ವಿವಿಧ ನಾಯಕರ ಪ್ರತಿಕ್ರಿಯೆ...

ನಾನೆಲ್ಲೂ ಓಡಿ ಹೋಗಿಲ್ಲ, ನನ್ನ ಹಾಗೂ ಪುತ್ರನ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ರಾಜಕೀಯ ಪ್ರೇರಿತ: ಎಚ್ ಡಿ ರೇವಣ್ಣ
ತಮ್ಮ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಾಯಕ, ಶಾಸಕ ಎಚ್.ಡಿ. ರೇವಣ್ಣ ಅವರು ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣ: ಅಶೋಕಣ್ಣ, ವಿಜಯೇಂದ್ರ ತಮ್ಮ ನಿಲುವು ಸ್ಪಷ್ಟಪಡಿಸಲಿ; ಲಕ್ಷ್ಮಿ ಹೆಬ್ಬಾಳ್ಕರ್
16ರಿಂದ 50 ವರ್ಷ ವಯಸ್ಸಿನ 300ಕ್ಕೂ ಅಧಿಕ ಮಹಿಳೆಯರ ಮೇಲೆ ನಡೆದ ನೀಚ ಕೃತ್ಯವನ್ನು ಬಿಜೆಪಿಗರು ಖಂಡಿಸುತ್ತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

ಜೆಡಿಎಸ್ ಶಾಸಕರ ಭವಿಷ್ಯ ಬೇಕೋ? ಕುಟುಂಬದ ರೇವಣ್ಣ -ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ: ಸಮೃದ್ಧಿ ಮಂಜುನಾಥ್
ಜೆಡಿಎಸ್ ನ 19 ಶಾಸಕರ ಭವಿಷ್ಯ ಬೇಕೋ? ತಮ್ಮ ಕುಟುಂಬದ ರೇವಣ್ಣ ಹಾಗೂ ಪ್ರಜ್ವಲ್ ಮುಖ್ಯವೋ ತೀರ್ಮಾನಿಸಿ ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಆಗ್ರಹಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ಜೆಡಿಎಸ್ ಕ್ರಮ ಕೈಗೊಳ್ಳಲಿದೆ: ಹೆಚ್.ಡಿ.ಕುಮಾರಸ್ವಾಮಿ
ಹಾಸನ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಜೆಡಿಎಸ್ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣ: ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಪ್ರಧಾನಿ ಇನ್ನೂ ಮೌನವೇಕೆ- ಪ್ರಿಯಾಂಕಾ ಗಾಂಧಿ
ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡರ ಮೊಮ್ಮಗ ಮತ್ತು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಶಾಮೀಲಾಗಿರುವ ಲೈಂಗಿಕ ಹಗರಣದ ಕುರಿತು ಕಾಂಗ್ರೆಸ್ ಸೋಮವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಈ ವಿಚಾರದ ಬಗ್ಗೆ ಮೌನ ವಹಿಸಿರುವುದೇಕೆ ಎಂದು ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನಿಸಿದ್ದಾರೆ.

ತಾಳಿ ಬಗ್ಗೆ ಮಾತಾಡುವ ಮೋದಿಯವರೇ, ನಿಮ್ಮ ಅಭ್ಯರ್ಥಿ ಪ್ರಜ್ವಲ್ ಅದೆಷ್ಟು ಮಹಿಳೆಯರ ಮಾಂಗಲ್ಯಕ್ಕೆ ಕುತ್ತು ತಂದಿದ್ದಾರೆಂಬ ಲೆಕ್ಕ ಇದೆಯೇ?: ಕಾಂಗ್ರೆಸ್
ತಾಳಿ ಬಗ್ಗೆ ಮಾತಾಡುವ ಮೋದಿಯವರೇ ನಿಮ್ಮ ಅಭ್ಯರ್ಥಿ ಪ್ರಜ್ವಲ್ ಅದೆಷ್ಟು ಮಹಿಳೆಯರ ಮಾಂಗಲ್ಯಕ್ಕೆ ಕುತ್ತು ತಂದಿದ್ದಾರೆಂಬ ಲೆಕ್ಕ ಇದೆಯೇ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಲೈಂಗಿಕ ಹಗರಣ ಪ್ರಕರಣ: ಪ್ರಜ್ವಲ್ ರೇವಣ್ಣ ದೇಶ ತೊರೆಯಲು ಬಿಜೆಪಿ ಸಹಾಯ ಮಾಡಿದೆ; ಪ್ರಿಯಾಂಕ್ ಖರ್ಗೆ
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ದೇಶ ತೊರೆದಿದ್ದಾರೆ ಎಂಬ ವರದಿಗಳ ನಡುವೆ, ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಆಪಾದಿತ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರನ್ನು ರಕ್ಷಿಸಿ ಬಿಜೆಪಿಯೇ ವಿದೇಶಕ್ಕೆ ಕಳಿಸಿದೆ ಎನ್ನಲಾಗುತ್ತಿದೆ. ಆರೋಪಿಯನ್ನು ರಕ್ಷಿಸುವುದು ಯಾವ ನ್ಯಾಯ ಎಂದು ಸೋಮವಾರ ಹೇಳಿದ್ದಾರೆ.

