Prajwal Revanna

ವಿದೇಶದಿಂದ ಪ್ರಜ್ವಲ್ ರೇವಣ್ಣನನ್ನು ವಾಪಸ್ ಕರೆಸಿಕೊಳ್ಳುತ್ತೇವೆ, ವಿಡಿಯೋ ಪರೀಕ್ಷೆಗೆ FSLಗೆ ರವಾನೆ: ಡಾ ಪರಮೇಶ್ವರ್
ಹೆಚ್ ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ದೂರು ದಾಖಲಾಗಿದ್ದು, ದೂರುದಾರರು ಯಾರ ಹೆಸರು ಉಲ್ಲೇಖಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಂತ್ರಸ್ತರಿಗೆ ಭಯ ಹುಟ್ಟಿಸಿದರೆ ಅವರಿಗೆ ನಾವು ಸರ್ಕಾರ ವತಿಯಿಂದ ಭದ್ರತೆ ನೀಡುತ್ತೇವೆ ಎಂದು ಡಾ ಜಿ ಪರಮೇಶ್ವರ್ ಹೇಳಿದರು.

ರಾಜ್ಯದಲ್ಲಿ ಮತ್ತೆ ಮೋದಿ ಪ್ರಚಾರ, ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣ, SIT ತನಿಖೆಗೆ ಆದೇಶ-ಈ ದಿನದ ಸುದ್ದಿ ಮುಖ್ಯಾಂಶಗಳು-28-04-2024

Prajwal Revanna: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಸರ್ಕಾರದ SIT ತನಿಖೆಗೆ JDS ಸ್ವಾಗತ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ಕರ್ನಾಟಕ ಸರ್ಕಾರದ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆಯನ್ನು ಜನತಾ ದಳ (ಜಾತ್ಯತೀತ) ಸ್ವಾಗತಿಸಿದೆ.

ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣ, ಪ್ರಜ್ವಲ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲು
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.

ಪ್ರಜ್ವಲ್ ರೇವಣ್ಣ ವಿಡಿಯೋ ಬಗ್ಗೆ ಪ್ರಧಾನಿ ಮೋದಿ, ಎನ್‌ಡಿಎ ನಾಯಕರು ಪ್ರತಿಕ್ರಿಯೆ ನೀಡಬೇಕು: ಡಿಕೆ.ಶಿವಕುಮಾರ್
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಾಸನದ ಪ್ರಭಾವಿ ನಾಯಕರೊಬ್ಬರ ವಿಡಿಯೋ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಉತ್ತರ ನೀಡಬೇಕು ಎಂದು ಡಿಸಿಎಂ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಹಾಸನದಲ್ಲಿ NDA ಅಭ್ಯರ್ಥಿ ಪರ ಪ್ರೀತಂ ಗೌಡ ಪ್ರಚಾರ; ಪ್ರಜ್ವಲ್ ರೇವಣ್ಣ ಹೆಸರೇಳದೆಯೇ ಮತಯಾಚನೆ!
ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಬುಧವಾರ ಹಾಸನದಲ್ಲಿ ಎನ್‌ಡಿಎ ಅಭ್ಯರ್ಥಿ ಪರವಾಗಿ ಪ್ರಚಾರ ಆರಂಭಿಸಿದ್ದಾರೆ. ಆದರೆ, ಅವರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಹೆಸರೇಳದೆಯೇ ಮೋದಿ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸುವ ಮೂಲಕ ಮತಯಾಚಿಸಿದ್ದಾರೆ.

ಹಾಸನ: ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ರನ್ನು ಭೇಟಿ ಮಾಡಿ ಜೆಡಿಎಸ್ ಗೆ ಶಾಕ್ ಕೊಟ್ಟ ಪ್ರೀತಂ ಗೌಡ ಬೆಂಬಲಿಗರು!
ಹಾಸನ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣಗೆ ಅನಿರೀಕ್ಷಿತ ಆಘಾತ ಎದುರಾಗಿದೆ. ಹಾಸನದಲ್ಲಿ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮಾಜಿ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಅವರ ಆಪ್ತ ಉದ್ದೂರ್ ಪುರುಷೋತ್ತಮ್ ನೇತೃತ್ವದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ಮಾಡಲು ನಿರ್ಧರಿಸಿದ್ದಾರೆ.

ಲೋಕಸಭೆ ಚುನಾವಣೆ 2024: RSS ಕ್ಷಮೆಯಾಚಿಸಿದ ಹಾಸನ JDS ಅಭ್ಯರ್ಥಿ ಪ್ರಜ್ವಲ್ ರೇವಣ್ಣ
ಹಾಸನ ಮತ್ತು ಸಕಲೇಶಪುರದಲ್ಲಿ ನಡೆದ ಜಂಟಿ ಪ್ರಚಾರ ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ವಿರುದ್ಧದ ಹೇಳಿಕೆಗಾಗಿ ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಭಾನುವಾರ ಕ್ಷಮೆಯಾಚಿಸಿದ್ದಾರೆ.

ಪ್ರಜ್ವಲ್ ರೇವಣ್ಣ, ಪ್ರೀತಂ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ರಾಧಾ ಮೋಹನ್ ದಾಸ್ ಅಗರ್ವಾಲ್ ಮುಂದು!
ಹಾಸನ ಬಿಜೆಪಿ ಮಾಜಿ ಶಾಸಕ ಪ್ರೀತಂ ಜೆ ಗೌಡ ವಿರುದ್ಧ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಶನಿವಾರ ದೂರು ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಅವರು ಬಿಜೆಪಿ ಮತ್ತು ಜೆಡಿಎಸ್‌ನ ತುರ್ತು ಸಮನ್ವಯ ಸಭೆ ನಡೆಸಿದರು.

