Pratap Simha

ಅಕ್ರಮವಾಗಿ ಮರ ಕಡಿತ ಪ್ರಕರಣ: ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹಗೆ ಜಾಮೀನು ಮಂಜೂರು!
ಅಕ್ರಮವಾಗಿ ಮರ ಕಡಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹಗೆ ಜಾಮೀನು ಮಂಜೂರಾಗಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್
ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504 , 153ರ ಅಡಿಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಸಂಸತ್ ಭದ್ರತಾ ವೈಫಲ್ಯ: ದೇಶಪ್ರೇಮಿನಾ, ದೇಶದ್ರೋಹಿನಾ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆ; ಕೊನೆಗೂ ಮೌನ ಮುರಿದ ಪ್ರತಾಪ್ ಸಿಂಹ
ಸಂಸತ್ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಕೊನೆಗೂ ಮೌನ ಮುರಿದಿದ್ದು, ನಾನು ದೇಶಪ್ರೇಮಿನಾ, ದೇಶದ್ರೋಹಿನಾ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆಂದು ಭಾನುವಾರ ಹೇಳಿದ್ದಾರೆ.

ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಮರಗಳ್ಳತನದಲ್ಲಿ ತೊಡಗಿದ್ದಾನೆ: ಕಾಂಗ್ರೆಸ್ ಆರೋಪ
ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಮರಗಳ್ಳತನದಲ್ಲಿ ತೊಡಗಿದ್ದಾನೆಂದು ಕಾಂಗ್ರೆಸ್ ಭಾನುವಾರ ಆರೋಪಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಮಗನನ್ನು ಗೆಲ್ಲಿಸಲು ಪ್ರತಾಪ್ ಸಿಂಹ ವಿರುದ್ಧ ಸಿಎಂ ಸಿದ್ದರಾಮಯ್ಯ ಷಡ್ಯಂತ್ರ: ಲೆಹರ್ ಸಿಂಗ್
ಲೋಕಸಭೆಯೊಳಗೆ ನುಗ್ಗಿ ಭದ್ರತೆ ಉಲ್ಲಂಘನೆ ಮಾಡಿರುವ ಆರೋಪಿಗಳಲ್ಲಿ ಒಬ್ಬನಾದ ಮನೋರಂಜನ್ ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರ ಹೆಸರಲ್ಲಿ ಸಂಸತ್ತು ಪ್ರವೇಶಿಸಲು ಪಾಸ್ ತೆಗೆದುಕೊಂಡಿದ್ದು, ಕಾಂಗ್ರೆಸ್ ನಾಯಕರು ಸಂಸದರ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿದ್ದಾರೆ.

ಸಂಸತ್ ಭದ್ರತಾ ಲೋಪ: ಪ್ರತಾಪ್ ಸಿಂಹ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರ ತೀವ್ರ ಪ್ರತಿಭಟನೆ, ಸಂಸದರ ಪದಚ್ಯುತಿಗೆ ಆಗ್ರಹ
ಸಂಸತ್ ಭವನದಲ್ಲಿ ನಡೆದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಂತುಕರಿಗೆ ಪಾಸ್ ನೀಡಿದ ಆರೋಪದ ಮೇರೆಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದು, ಸಂಸದರ ಪದಚ್ಯುತಿಗೆ ಆಗ್ರಹಿಸಿದರು.

ಸಂಸತ್ ಭದ್ರತಾ ಲೋಪ: ಆರು ಆರೋಪಿಗಳ ಬಂಧಿಸಿದ ಪೊಲೀಸರು, 3 ತಿಂಗಳ ತಯಾರಿ!
ಸಂಸತ್ ದಾಳಿಯ 22ನೇ ವಾರ್ಷಿಕೋತ್ಸವದಂದೆ ಲೋಕಸಭೆಯಲ್ಲಿ ಪ್ರಮುಖ ಭದ್ರತಾ ಲೋಪ ನಡೆದ ಪ್ರಕರಣಕ್ಕೆ ಒಟ್ಟು ಆರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಸಂಸತ್ ಭದ್ರತಾ ಲೋಪ: ನನ್ನ ಮಗ ಪ್ರಾಮಾಣಿಕ, ವಿವೇಕಾನಂದರ ಅನುಯಾಯಿ; ದುಷ್ಕರ್ಮಿ ಮನೋರಂಜನ್ ತಂದೆ
ಸಂಸತ್ ದಾಳಿಯ 22ನೇ ವಾರ್ಷಿಕೋತ್ಸವದಂದೆ ಲೋಕಸಭೆಯಲ್ಲಿ ಪ್ರಮುಖ ಭದ್ರತಾ ಲೋಪ ನಡೆದಿದ್ದು ಇಬ್ಬರು ದುಷ್ಕರ್ಮಿಗಳು ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಹಳದಿ ಬಣ್ಣದ ಸ್ಪೈಯನ್ನು ಸಿಂಪಡಿಸಿದ್ದು ಇದು ತೀವ್ರ ಆತಂಕಕ್ಕೆ ಕಾರಣವಾಗಿತ್ತು.

ಸಂಸತ್ ಭದ್ರತಾ ಲೋಪ: ಮೈಸೂರಿನ ಮನೋರಂಜನ್, ಸಾಗರ್ ಶರ್ಮಾಗೆ ಎಂಪಿ ಪ್ರತಾಪ್ ಸಿಂಹ ಹೆಸರಲ್ಲಿ ಪಾಸ್ ಸಿಕ್ಕಿತ್ತೇ?
ಸಂಸತ್ ಕಲಾಪದ ಒಳಗೆ ಪ್ರವೇಶಿಸಿದ ಇಬ್ಬರಲ್ಲಿ ಒಬ್ಬನ ಹೆಸರು ಸಾಗರ್ ಶರ್ಮಾ ಮತ್ತೊಬ್ಬನ ಹೆಸರು ಮೈಸೂರಿನ ವಿದ್ಯಾರ್ಥಿ ಮನೋರಂಜನ್ ಎಂದು ತಿಳಿದುಬಂದಿದೆ.

