ರಾಜ್ಯಸಿವಿಲ್ ನ್ಯಾಯಾಧೀಶರ ನೇಮಕಾತಿ ಪರೀಕ್ಷೆ: ಗರ್ಭಿಣಿ ವಕೀಲೆಗೆ ವಿಶೇಷ ಅವಕಾಶ ಕಲ್ಪಿಸಿದ ಹೈಕೋರ್ಟ್
ನ್ಯಾಯಾಧೀಶರ ಹುದ್ದೆಗೆ ನಡೆಯಲಿರುವ ಲಿಖಿತ ಪರೀಕ್ಷೆ ಬರೆಯಲು ಎಂಟೂವರೆ ತಿಂಗಳ ಗರ್ಭಿಣಿ ವಕೀಲೆಯೊಬ್ಬರಿಗೆ ಹೈಕೋರ್ಟ್ ವಿಶೇಷ ಅವಕಾಶವನ್ನು ಕಲ್ಪಿಸಿಕೊಟ್ಟಿದೆ. ಈ ರೀತಿಯ ಅವಕಾಶ ನೀಡಿರುವುದು ಇದೇ ಮೊದಲ ಬಾರಿಯಾಗಿದ್ದು, ನ್ಯಾಯಾಲಯದ ಈ ನಿರ್ಧಾರಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.