President Droupadi Murmu

ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ: ಪ್ರತಿಪಕ್ಷಗಳಿಂದ ನಾಳೆ ರಾಷ್ಟ್ರಪತಿ ಭೇಟಿ
ಲೋಕಸಭೆ ಕಲಾಪದ ವೇಳೆ ಭಾರೀ ಭದ್ರತಾ ಲೋಪವಾಗಿದ್ದು, ಈ ಸಂಬಂಧ ಪ್ರತಿಪಕ್ಷಗಳ ನಾಯಕರ ನಿಯೋಗ ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದೆ.

ದೆಹಲಿ ವಿಳಾಸವುಳ್ಳ ಹೊಸ ಮತದಾರರ ಗುರುತಿನ ಚೀಟಿ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ರಾಷ್ಟ್ರಭತಿ ಭವನದಲ್ಲಿ ದೆಹಲಿ ಮುಖ್ಯ ಚುನಾವಣಾಧಿಕಾರಿ ಪಿ ಕೃಷ್ಣಮೂರ್ತಿ ಅವರಿಂದ ಬದಲಾದ ವಿಳಾಸದೊಂದಿಗೆ ಹೊಸ ಮತದಾರರ ಚೀಟಿಯನ್ನು ಸ್ವೀಕರಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಕೇಂದ್ರ ಸರ್ಕಾರ ತನ್ನ ಪ್ರಚಾರಕ್ಕಾಗಿ ಸೇನೆಯನ್ನು ಬಳಸಿಕೊಳ್ಳುವ ಕೀಳುಮಟ್ಟದ ಪ್ರಯತ್ನ ಮಾಡುತ್ತಿದೆ: ಕಾಂಗ್ರೆಸ್
ತನ್ನ ರಾಜಕೀಯ ಪ್ರಚಾರಕ್ಕಾಗಿ ಸೇನೆಯನ್ನು ಬಳಸಿಕೊಳ್ಳಲು ಸರ್ಕಾರವು 'ಕೀಳುಮಟ್ಟದ ಪ್ರಯತ್ನ' ಮಾಡುತ್ತಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದೆ ಮತ್ತು ಈ ವಿಷಯದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಕೋರಿದೆ.

‘ಹೊಸ ಸಂಸತ್ತಿನಲ್ಲಿ ರಾಷ್ಟ್ರಪತಿಗಳನ್ನು ನೋಡಲು ಬಯಸಿದ್ದೆ, ಏಕೆ ಆಹ್ವಾನಿಸಲಿಲ್ಲ’: ರಾಹುಲ್ ಗಾಂಧಿ
ಮಹಿಳೆ ಮತ್ತು ಉನ್ನತ ಹುದ್ದೆ ಅಲಂಕರಿಸಿದ ಬುಡಕಟ್ಟು ಸಮುದಾಯದ ಮೊದಲ ವ್ಯಕ್ತಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಭವನದ ಉದ್ಘಾಟನೆಗೆ ಏಕೆ ಆಹ್ವಾನಿಸಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪ್ರಶ್ನಿಸಿದ್ದಾರೆ.

ಜಿ-20 ಶೃಂಗಸಭೆ ಔತಣಕೂಟದಲ್ಲಿ ಪಾಲ್ಗೊಳ್ಳುತ್ತಿಲ್ಲ: ಹೆಚ್.ಡಿ. ದೇವೇಗೌಡ
ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ಆಯೋಜಿಸಿರುವ ಜಿ-20 ಶೃಂಗಸಭೆಯ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಹಾಗೂ ಹೆಚ್. ಡಿ. ದೇವೇಗೌಡ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಆರೋಗ್ಯದ ಕಾರಣದಿಂದ ಜಿ20 ಔತಣಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಶುಕ್ರವಾರ ಹೇಳಿದ್ದಾರೆ.

ಮರಣೋತ್ತರವಾಗಿ 4 ಕೀರ್ತಿ ಚಕ್ರ, 11 ಶೌರ್ಯ ಚಕ್ರ ಸೇರಿದಂತೆ 76 ಶೌರ್ಯ ಪ್ರಶಸ್ತಿ ನೀಡಲು ರಾಷ್ಟ್ರಪತಿ ಒಪ್ಪಿಗೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 77ನೇ ಸ್ವಾತಂತ್ರ್ಯದಿನಾಚರಣೆಯ ಅಂಗವಾಗಿ ಸೇನಾಪಡೆಗಳ ಸೈನಿಕರು ಮತ್ತಿತರರಿಗೆ ಶೌರ್ಯ ಹಾಗೂ ಇತರ ರಕ್ಷಣಾ ಪ್ರಶಸ್ತಿಗಳನ್ನು ನೀಡಲು ಸೋಮವಾರ ಒಪ್ಪಿಗೆ ಸೂಚಿಸಿದ್ದಾರೆ.

ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ, ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುವಂತೆ ನಾಗರಿಕರಿಗೆ ಕರೆ!
77 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಕ್ಷುಬ್ಧ ಸಮಯದಲ್ಲಿ ದೇಶದ ಸ್ಥಿತಿಸ್ಥಾಪಕತ್ವವನ್ನು ಶ್ಲಾಘಿಸಿದರು ಮತ್ತು ಇದು ಇತರರಿಗೆ ಭರವಸೆಯ ದಾರಿದೀಪವಾಗಿದೆ ಎಂದು ಹೇಳಿದರು.

77ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 77ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ಆಗಸ್ಟ್ 14 ರಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಭಾನುವಾರ ತಿಳಿಸಿದೆ.

ಮಣಿಪುರ ಸಮಸ್ಯೆ: ನಾಳೆ ವಿಪಕ್ಷ ನಾಯಕರಿಂದ ರಾಷ್ಟ್ರಪತಿ ಮುರ್ಮು ಭೇಟಿ
ಮಣಿಪುರ ಹಿಂಸಾಚಾರ ಕುರಿತು ಸಮಗ್ರ ಚರ್ಚೆ ಹಾಗೂ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕೆಂಬ ಬೇಡಿಕೆ ಈಡೇರದ ನಂತರ ಪ್ರತಿಪಕ್ಷ ನಾಯಕರು ಬುಧವಾರ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದು, ಮಣಿಪುರ ವಿಷಯವನ್ನು ಪ್ರಸ್ತಾಪಿಸಲಿದ್ದಾರೆ.

