President Droupadi Murmu

ಮಣಿಪುರ ಹಿಂಸಾಚಾರ: ರಾಷ್ಟ್ರಪತಿಗೆ ಮಧ್ಯಂತರ ಶಿಫಾರಸು ಕಳುಹಿಸಿದ ದೆಹಲಿ ಮಹಿಳಾ ಆಯೋಗ
ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘರ್ಷಣೆಗೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಧ್ಯಂತರ ಶಿಫಾರಸುಗಳನ್ನು ಕಳುಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಮಣಿಪುರ ಹಿಂಸಾಚಾರ; ವಿಪಕ್ಷಗಳ ಪರವಾಗಿ ರಾಷ್ಟ್ರಪತಿಗಳ ಭೇಟಿಗೆ ಸಮಯ ಕೋರಿದ ಮಲ್ಲಿಕಾರ್ಜುನ ಖರ್ಗೆ
ಮಣಿಪುರ ಸಮಸ್ಯೆ ಕುರಿತು ಚರ್ಚಿಸಲು ವಿರೋಧ ಪಕ್ಷಗಳ ಪರವಾಗಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ನಾಗರಿಕ ಸೇವೆ ಪರೀಕ್ಷೆಯಲ್ಲಿ ಮಹಿಳೆಯರಿಗೆ ಮೊದಲ 4 ರ್ಯಾಂಕ್; 'ಇದು ಕೇವಲ ಆರಂಭವಷ್ಟೇ': ರಾಷ್ಟ್ರಪತಿ ದ್ರೌಪದಿ ಮುರ್ಮು
ನಾಗರಿಕ ಸೇವೆ ಪರೀಕ್ಷೆಯಲ್ಲಿ ಮೊದಲ 4 ರ್ಯಾಂಕ್ ಮಹಿಳೆಯರ ಪಾಲಾಗಿದ್ದು, ಈ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಇದೇ ಕೇವಲ ಆರಂಭವಷ್ಟೇ.. ಭವಿಷ್ಯದಲ್ಲಿ ಮಹಿಳೆಯರು ಇಂತಹ ಸಾಕಷ್ಟು ಸಾಧನೆಗಳನ್ನು ಮಾಡಲಿದ್ದಾರೆ ಎಂದು ಹೇಳಿದ್ದಾರೆ.

'ಒಂದೇ ಒಂದು ಶೌಚಾಲಯವೂ ಸಿಗಲಿಲ್ಲ': ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಕರ್ನಾಟಕದ ಮಹಿಳೆ ಕನ್ನಡದಲ್ಲಿ ಪತ್ರ!
ಚಿಕ್ಕಮಗಳೂರು ಜಿಲ್ಲೆಯ ಯಾತ್ರಾ ಕೇಂದ್ರದಲ್ಲಿ ಸಾರ್ವಜನಿಕ ಶೌಚಾಲಯಗಳಿಲ್ಲದ ಕಾರಣ ಬಯಲಿನಲ್ಲಿ ಪ್ರಕೃತಿಯ ಕರೆಗೆ ಹೋಗುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂಬ ಬಗ್ಗೆ ಕರ್ನಾಟಕ ಮಹಿಳೆಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಷ್ಟ್ರಪತಿಗಳ ಮುಂದೆ ‘ಸ್ವಚ್ಛ ಭಾರತ’ ಕುರಿತು ಭಾಷಣ ಮಾಡಿದ ಉಡುಪಿ ಬಾಲಕಿ
ಅಪರೂಪದ ಅವಕಾಶದಲ್ಲಿ, ಉಡುಪಿಯ ಪಾಜಕದ ಆನಂದತೀರ್ಥ ವಿದ್ಯಾಲಯದ 9ನೇ ತರಗತಿಯ ವಿದ್ಯಾರ್ಥಿನಿ ಅವಂತಿಕಾ ವಿ ರಾವ್ ಅವರು ಈ ವಾರದ ಆರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮುಂದೆ ಭಾಷಣ ಮಾಡಿದ್ದಾರೆ.

ಹಿರಿಯ ಅಧಿಕಾರಿಯಿಂದ ಕಿರುಕುಳ ಆರೋಪ; ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದ ಬೆಂಗಳೂರು ಪೊಲೀಸರು
ಬೆಂಗಳೂರಿನ ಪೊಲೀಸ್ ಠಾಣೆಯೊಂದರ ಸಿಬ್ಬಂದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದಿರುವ ಪತ್ರ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕರ್ನಾಟಕ ಪೊಲೀಸರಿಗೆ ತೀವ್ರ ಮುಜುಗರ ಉಂಟು ಮಾಡಿದೆ.

ಮಾಜಿ ಸಿಎಂ ಎಸ್ ಎಂ ಕೃಷ್ಣ, ಸುಧಾಮೂರ್ತಿ, ಎಸ್ ಎಲ್ ಬೈರಪ್ಪ, ಖಾದರ್‌ವಲ್ಲಿ ಸೇರಿ 106 ಸಾಧಕರಿಗೆ 'ಪದ್ಮ ಪ್ರಶಸ್ತಿ' ಪ್ರದಾನ
ಕರ್ನಾಟಕದ ಮಾಜಿ ಸಿಎಂ ಎಸ್ ಎಂ ಕೃಷ್ಣ, ಸುಧಾ ಮೂರ್ತಿ ಹಾಗೂ ಸಾಹಿತಿ ಎಸ್.ಎಲ್.ಭೈರಪ್ಪ ಸೇರಿದಂತೆ ಒಟ್ಟು 106 ಮಂದಿಗೆ ಪದ್ಮ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಅಮಿತ್ ಶಾ
ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು 'ರಾಷ್ಟ್ರಪತ್ನಿ' ಎಂದು ಕರೆದಿರುವ ಬೆನ್ನಲ್ಲೇ ಬಿಜೆಪಿ ಪಾಳೆಯದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಸ್ಮೃತಿ ಇರಾನಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯ ಪ್ರವಾಸ, ನಾಳೆ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ
ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯಾದ ನಂತರ ಇದೇ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿರುವ ದ್ರೌಪದಿ ಮುರ್ಮು ನಾಳೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಐತಿಹಾಸಿಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ಅಧಿಕೃತ ಹೇಳಿಕೆಯಲ್ಲಿ ಭಾನುವಾರ ತಿಳಿಸಿದೆ.

