President

ಕೆಪಿಸಿಸಿ ಅಧ್ಯಕ್ಷಗಿರಿಗೆ ಎಂ.ಬಿ ಪಾಟೀಲ್ ಪರ ಸಿದ್ದರಾಮಯ್ಯ ಬ್ಯಾಟಿಂಗ್: ಹಿರಿಯ ನಾಯಕರ ವಿರೋಧ
ರಾಜ್ಯ ಕಾಂಗ್ರೆಸ್ ನಾಯಕತ್ವದ ಗೊಂದಲ ಅಂತಿಮ ಹಂತಕ್ಕೆ ತಲುಪಿದ್ದು, ಹೈಕಮಾಂಡ್ ಸಾಮಾಜಿಕ ನ್ಯಾಯದ ಲೆಕ್ಕಾಚಾರದಲ್ಲಿ, ಜಾತಿ ಮತ್ತು ಪ್ರಾದೇಶಿಕತೆ ಆಧಾರದಲ್ಲಿ ಕೆಪಿಸಿಸಿ ಅಧ್ಯಕ್ಷ, ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕನ ಹುದ್ದೆಗಳಿಗೆ ವಾರಾಂತ್ಯದೊಳಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ: ರಾಷ್ಟ್ರಪತಿ, ಪ್ರಧಾನಿ ಭಾಗಿ
ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ದೆಹಲಿಯ ರಾಜ್ ಘಾಟ್ ನಲ್ಲಿರುವ ಸದೈವ ಅಟಲ್ ಸ್ಮಾರಕದಲ್ಲಿ ಪ್ರಥಮ ಸಭೆ ಏರ್ಪಡಿಸಿದೆ.

ಕೆಪಿಸಿಸಿ ಸಾರಥ್ಯಕ್ಕೆ ಶಿವಕುಮಾರ್, ಹರಿಪ್ರಸಾದ್, ಕೆ.ಎಚ್. ಮುನಿಯಪ್ಪ ಹೆಸರು ಶಿಫಾರಸ್ಸು
ಎಐಸಿಸಿ ವರಿಷ್ಠ ಮಧುಸೂಧನ್ ಮಿಸ್ತ್ರಿ ನೇತೃತ್ವದ ವೀಕ್ಷಕರ ತಂಡ ಕೆಪಿಸಿಸಿ ಸಾರಥ್ಯ ವಹಿಸಿಕೊಳ್ಳಲು ಮಾಜಿ ಸಚಿವ ಡಿ.ಕೆ ಶಿವಕುಮಾರ್, ರಾಜ್ಯಸಭಾ ಸದಸ್ಯ ಬಿ.ಕೆ ಹರಿಪ್ರಸಾದ್, ಮಾಜಿ ಸಂಸದ ಕೆ.ಹೆಚ್. ಮುನಿಯಪ್ಪ ಅರ್ಹರಾಗಿದ್ದು, ಇವರ ಪೈಕಿ ಒಬ್ಬರನ್ನು ಪರಿಗಣಿಸಬಹುದು ಎಂದು ಹೈಕಮಾಂಡ್‌ಗೆ ಶಿಫಾರಸು ಮಾಡಿದೆ.

ರಾಹುಲ್ ಗಾಂಧಿಯನ್ನು ಮತ್ತೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲು ಕಾರ್ಯತಂತ್ರ
ಲೋಕಸಭಾ ಚುನಾವಣೆ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಹುಲ್ ಗಾಂಧಿಯನ್ನು ಆರು ತಿಂಗಳ ಬಳಿಕ ಮತ್ತೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲಾಗುತ್ತಿದೆ.

ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ; ಕಾಯ್ದೆಯಾಗಿ ಜಾರಿ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪೌರತ್ವ ತಿದ್ದುಪಡಿ ಮಸೂದೆ-2019ಕ್ಕೆ ಒಪ್ಪಿಗೆ ನೀಡಿದ್ದು, ಅದು ಕಾಯ್ದೆಯಾಗಿ ಜಾರಿಗೆ ಬರಲಿದೆ.

'ಎಸ್ .ಎಂ ಕೃಷ್ಣ ಅವಧಿ ಮುಗಿದ ಮೇಲೆ ಗುಂಪುಗಾರಿಕೆ ಮಾಡಬಹುದಿತ್ತು, ನನಗೆ ಅವಶ್ಯಕತೆಯಿಲ್ಲ'
ಪಕ್ಷದಲ್ಲಿ ತಾವು ಇದುವರೆಗೆ ಯಾವುದೇ ಗುಂಪುಗಾರಿಕೆ ಮಾಡಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾವುದೇ ಲಾಬಿ ನಡೆಸಿಲ್ಲ. ಲಾಬಿ ಮಾಡುವ ಅವಶ್ಯಕತೆಯೂ ತಮಗಿಲ್ಲ ಇಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

85ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಎಚ್ ಎಸ್ ವೆಂಕಟೇಶಮೂರ್ತಿ ಆಯ್ಕೆ
ಕಲಬುರಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಎಚ್.ಎಚ್. ವೆಂಕಟೇಶಮೂರ್ತಿ ಅವರು ಆಯ್ಕೆಯಾಗಿದ್ದಾರೆ.

ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಶೇನ್ ವ್ಯಾಟ್ಸನ್ ನೇಮಕ
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಆಲ್‍ರೌಂಡರ್ ಶೇನ್ ವ್ಯಾಟ್ಸನ್ ಅವರು "ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್" (ಎಸಿಎ) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಅರವಿಂದ್ ಸಾವಂತ್ ರಾಜೀನಾಮೆ ಅಂಗೀಕಾರ: ಹೆಚ್ಚುವರಿ ಬೃಹತ್ ಕೈಗಾರಿಕೆ ಸಚಿವರಾಗಿ ಜವಡೇಕರ್ ನೇಮಕ
ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಸಚಿವ ಸ್ಥಾನಕ್ಕೆ ಅವರಿಂದ್ ಸಾವಂತ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ಅಂಗೀಕರಿಸಿದ್ದಾರೆ.

