ದೇಶರಾಜ್ಯಪಾಲರು ಮಸೂದೆಗಳನ್ನು ಅನಿರ್ದಿಷ್ಟವಾಗಿ ವಿಳಂಬ ಮಾಡಲು ಸಾಧ್ಯವಿಲ್ಲ; ಹಾಗೆಂದು ಅನುಮೋದನೆಗೆ ನಾವು ಕಾಲಮಿತಿ ನಿಗದಿಪಡಿಸಲಾಗದು: ಸುಪ್ರೀಂ ಕೋರ್ಟ್
ಭಾರತದ ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿ, ಮಸೂದೆಯ ಕುರಿತು ಸದನದೊಂದಿಗಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ರಾಜ್ಯಪಾಲರು ಸಂವಾದ ಪ್ರಕ್ರಿಯೆಯನ್ನು ಅಳವಡಿಸಿಕೊಳ್ಳಬೇಕೆ ಹೊರತು ಅದಕ್ಕೆ ಅಡ್ಡಿಪಡಿಸಬಾರದು ಎಂದು ಸಂವಿಧಾನ ಪೀಠ ಹೇಳಿದೆ.