ರಾಜ್ಯರಾಜ್ಯದಲ್ಲಿ 24 ಗಂಟೆಯೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಣೆ- ಸಚಿವ ಡಾ. ಕೆ. ಸುಧಾಕರ್
ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ, ನಿಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ಆರೋಗ್ಯ, ವೈದ್ಯಕೀಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.