ರಾಜ್ಯಪ್ರಾಥಮಿಕ ಶಾಲಾ ಮಕ್ಕಳಿಗೆ ಆನ್ ಲೈನ್ ತರಗತಿ ಬೇಕು: ಅಭಿಯಾನಕ್ಕೆ 17 ಸಾವಿರ ಪೋಷಕರ ಬೆಂಬಲ
ಒಂದನೇ ತರಗತಿಯಿಂದ 5 ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ರದ್ದುಪಡಿಸುವುದಾಗಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ ಬೆನ್ನಲ್ಲೇ, ಆನ್ ಲೈನ್ ತರಗತಿಗೆ ಬೆಂಬಲ ವ್ಯಕ್ತಪಡಿಸಿ ಆರಂಭಿಸಿರುವ ಅಭಿಯಾನಕ್ಕೆ ಈಗಾಗಲೇ 17 ಸಾವಿರ ಪ್ರಾಥಮಿಕ ಪೂರ್ವ ಹಾಗೂ ಪ್ರಾಥಮಿಕ ಶಾಲಾ ಮಕ್ಕಳ ಪೋಷಕರು ಸಹಿ ಹಾಕಿದ್ದಾರೆ.