Prime Minister

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ತಲೆ ಬೋಳಿಸಿಕೊಳ್ಳುತ್ತೇನೆ: ಎಎಪಿಯ ಸೋಮನಾಥ ಭಾರ್ತಿ
ಲೋಕಸಭೆ ಚುನಾವಣೆಗೆ ನಡೆದ ಮತದಾನ ನೆನ್ನೆಗೆ ಮುಕ್ತಾಯಗೊಂಡಿದ್ದು, ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಮತ್ತು ಎನ್‌ಡಿಎಗೆ ಸ್ಪಷ್ಟವಾದ ಬಹುಮತ ಸಿಗಲಿದೆ ಎಂದು ಭವಿಷ್ಯ ನುಡಿದಿವೆ. ಎಎಪಿಯ ಸೋಮನಾಥ್ ಭಾರ್ತಿ ಸಮೀಕ್ಷೆಗಳನ್ನು ಅಲ್ಲಗಳೆದಿದ್ದು, ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗುವುದಿಲ್ಲ ಎಂದಿದ್ದಾರೆ.

ಇಂಡಿಯಾ ಬಣದ ಪ್ರಧಾನಿ ಅಭ್ಯರ್ಥಿ ಯಾರು?; ಇದು 'ಕೌನ್ ಬನೇಗಾ ಕರೋಡ್‌ಪತಿ' ಎಂದು ಕೇಳುವಂತಿದೆ' ಎಂದ ಖರ್ಗೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೊಮ್ಮೆ ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಹಾಸ್ಯಮಯ ಪ್ರತಿಕ್ರಿಯೆಯನ್ನು ನೀಡಿದ್ದಾರೆ. 'ಇದು 'ಕೌನ್ ಬನೇಗಾ ಕರೋಡ್‌ಪತಿ' ಎಂದು ಕೇಳುವಂತಿದೆ' ಎಂದು ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ನಡೆಸಿಕೊಡುವ ಜನಪ್ರಿಯ ಟಿವಿ ಕಾರ್ಯಕ್ರಮವನ್ನು ಉಲ್ಲೇಖಿಸಿ ಹೇಳಿದ್ದಾರೆ.

ರಾಜ್ಯದ ಯಾವೊಬ್ಬ ನಾಯಕನೂ ಪ್ರಧಾನಿಯಾಗುವ ಸಾಮರ್ಥ್ಯ ಹೊಂದಿಲ್ಲ ಎಂದು ಹೇಳಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಪ್ರಧಾನ ಮಂತ್ರಿ ಅಭ್ಯರ್ಥಿ ರೇಸ್‌ನಲ್ಲಿ ಕರ್ನಾಟಕದಿಂದ ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.

ಬಹುಮತ ಪಡೆದರೆ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ಯಾರಾಗುತ್ತಾರೆ: ಅಮಿತ್ ಶಾ ಪ್ರಶ್ನೆ
'ಒಂದು ವೇಳೆ ಬಹುಮತದ ಗಡಿ ದಾಟಿದರೆ ಅವರ (ಇಂಡಿಯಾ ಮೈತ್ರಿಕೂಟ) ಪ್ರಧಾನಿ ಯಾರು? ಅದು ಶರದ್ ಪವಾರ್, ಮಮತಾ ಬ್ಯಾನರ್ಜಿ, ಸ್ಟಾಲಿನ್, ಅರವಿಂದ ಕೇಜ್ರಿವಾಲ್, ಉದ್ಧವ್ ಠಾಕ್ರೆ? ಅಥವಾ ರಾಹುಲ್ ಗಾಂಧಿಯೇ? ಈ ಜನರಿಗೆ ನಾಯಕರೂ ಇಲ್ಲ, ನೀತಿಗಳೂ ಇಲ್ಲ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿ ಸತ್ತರೆ ಮುಂದೆ ಯಾರೂ ಪ್ರಧಾನಿ ಆಗೋಲ್ವಾ? ಮೋದಿನ ತೆಗೆದುಕೊಂಡು ನೆಕ್ಕುತ್ತೀರಾ?
ಪ್ರಧಾನಿ ನರೇಂದ್ರ ಮೋದಿ ಸತ್ತರೆ, ಈ ದೇಶದಲ್ಲಿ ಮುಂದೆ ಯಾರೂ ಪಿಎಂ ಆಗುವುದಿಲ್ಲವೇ? ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ?

ರಾಹುಲ್ ಗಾಂಧಿ ದೇಶ ಮುನ್ನಡೆಸಬೇಕು ಎಂಬುದು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನ ಆಶಯ: ಸುರ್ಜೇವಾಲಾ
ಜನರ ಬಗ್ಗೆ ಸಹಾನುಭೂತಿ, ಜನರೊಂದಿಗೆ ಸಂಪರ್ಕ, ಅವರ ಸಿದ್ಧಾಂತ ಹಾಗೂ ಜನರ ಸಾಮಾನ್ಯರ ಒಳಿತಿಗಾಗಿ ಅವರಲ್ಲಿರುವ ಬದ್ಧತೆ ನೋಡಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ದೇಶವನ್ನು ಮುನ್ನಡೆಸಬೇಕೆಂದು ಬಯಸುತ್ತಾರೆ.

ಮುಂದಿನ 10 ವರ್ಷವೂ ಮೋದಿಯೇ ದೇಶದ ಪ್ರಧಾನಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಮುಂದಿನ 10 ವರ್ಷವೂ ನರೇಂದ್ರ ಮೋದಿಯವರೇ ದೇಶದ ಪ್ರಧಾನಮಂತ್ರಿಗಳಾಗಲಿದ್ದು, ದೇಶದಲ್ಲಿರುವ ಬಡತನವನ್ನು ಸಂಪೂರ್ಣವಾಗಿ ನಿರ್ಮೂಲಕ ಮಾಡಿ, ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲಿದ್ದಾರೆಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರು ಬುಧವಾರ ಹೇಳಿದರು.

ಪ್ರಧಾನಿಯಾಗಲು ರಾಹುಲ್ ಸೂರ್ಯ, ಚಂದ್ರನ ಅಂಗಳಕ್ಕೆ ಪ್ರಯಾಣಿಸಬೇಕು: ಅಸ್ಸಾಂ ಸಿಎಂ ವ್ಯಂಗ್ಯ
ಪ್ರಧಾನಮಂತ್ರಿಯಾಗಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸೂರ್ಯ, ಚಂದ್ರನ ಅಂಗಳಕ್ಕೆ ಪ್ರಯಾಣಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ವ್ಯಂಗ್ಯವಾಡಿದ್ದಾರೆ.

ನೆಹರೂ ಬದಲಿಗೆ ಬೋಸ್ ರನ್ನು ಮೊದಲ ಪ್ರಧಾನಿ ಎಂದು ಘೋಷಿಸಿ: ಪ್ರಧಾನಿ ಮೋದಿಗೆ ಸ್ವಾಮಿ ಆಗ್ರಹ
ಪ್ರಧಾನಿ ಮೋದಿಯವರು ಮರುನಾಮಕರಣ ಮಾಡುವ ಹುನ್ನಾರದಲ್ಲಿದ್ದಾರೆ. ಹೀಗಾಗಿ ಜವಾಹರ್ ಲಾಲ್ ನೆಹರೂ ಅವರ ಬದಲಿಗೆ ಸ್ವತಂತ್ರ್ಯ ಸೇನಾನಿ ಸುಭಾಶ್ ಚಂದ್ರ ಬೋಸ್ ರನ್ನು ಮೊದಲ ಪ್ರಧಾನಿ ಎಂದು ಘೋಷಣೆ ಮಾಡಿ ಎಂದು ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.

