ದೇಶಭಾರತದಲ್ಲಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಮೂರನೇ ಪ್ರಧಾನಿ ನರೇಂದ್ರ ಮೋದಿ; ಪಟ್ಟಿಯಲ್ಲಿ ಯಾರೆಲ್ಲಾ ಇದ್ದಾರೆ?
2024ರ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಈ ಬಾರಿಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಬಹುಮತ ಪಡೆಯಲಿದೆ ಎಂದು ಭವಿಷ್ಯ ನುಡಿದಿದ್ದರೂ, ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಅಧಿಕಾರಕ್ಕೆ ಮರಳುವ ಭರವಸೆಯಲ್ಲಿದೆ. ಒಂದು ವೇಳೆ ಈ ಬಾರಿಯೂ ಎನ್ಡಿಎ ಗೆಲುವು ಸಾಧಿಸಿದ್ದೇ ಆದರೆ ಪ್ರಧಾನಿಯಾಗಿ 10 ವರ್ಷಗಳಿಗೂ ಅಧಿಕ ಕಾಲ ದೇಶಕ್ಕೆ ಸೇವೆ ಸಲ್ಲಿಸಿದ ಪ್ರಧಾನ ಮಂತ್ರಿಗಳ ಪಟ್ಟಿಯಲ್ಲಿ ನರೇಂದ್ರ ಮೋದಿ ಸ್ಥಾನ ಪಡೆಯಲಿದ್ದಾರೆ.