ರಾಜ್ಯಮಲ್ಟಿಪ್ಲೆಕ್ಸ್ ಗಳಲ್ಲಿ ಕನ್ನಡ ಸಿನಿಮಾಗಳಿಗೆ ಪ್ರಧಾನ ಸಮಯ ಕೊಡಿ: ಸಿಎಂಗೆ ಕೆಎಫ್ ಸಿಸಿ ಒತ್ತಾಯ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಹಲವು ಸದಸ್ಯರು, ಹಿರಿಯ ಕಲಾವಿದರು ಮತ್ತು ಚಿತ್ರ ನಿರ್ಮಾಪಕರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಮಲ್ಟಿಪ್ಲೆಕ್ಸ್ ಗಳಲ್ಲಿ ದಿನದ ಪ್ರಧಾನ ಸಮಯಗಳಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನಕ್ಕೆ ಆದೇಶ ನೀಡುವಂತೆ ಮನವಿ ಸಲ್ಲಿಸಿದರು.