private hospitals

ಹಾಸಿಗೆ ಬಿಟ್ಟು ಕೊಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ಗೌರವ್ ಗುಪ್ತ
ಬಿಬಿಎಂಪಿಯ ಪ್ರತಿ ವಲದಲ್ಲಿರುವ ಸಣ್ಣ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಯಿಂದಾಗಿ ಕೋವಿಡ್ ರೋಗಿಗಳ ಚಿಕಿತ್ಸೆ ಮೇಲೆ ಪರಿಣಾಮ!
ನಗರದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೊರೋನಾ ಸೋಂಕಿತರ ಚಿಕಿತ್ಸೆಗೆ 14 ಔಷಧಿಗಳು ಪ್ರಮುಖವಾಗಿದ್ದು, ಈಗಾಗಲೇ ಆಸ್ಪತ್ರೆಗಳಲ್ಲಿ ಈ ಔಷಧಿಗಳ ಕೊರತೆ ಶುರುವಾಗಿದೆ ಎಂದು ತಿಳಿದುಬಂದಿದೆ.

ಉಲ್ಲೇಖಿತ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆಯ ದರ ಪರಿಷ್ಕರಿಸಿದ ರಾಜ್ಯ ಸರ್ಕಾರ, ವಿವರ ಹೀಗಿದೆ...
ಕೊರೋನಾ ಎರಡನೇ ಅಲೆ ತಾಂಡವವಾಡಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದಷ್ಟು ಸಮಸ್ಯೆ ಉಂಟಾಗಿದೆ. ಖಾಸಗಿ ಆಸ್ಪತ್ರೆಗಳು ಪರಿಸ್ಥಿತಿಯ ಲಾಭ ಮಾಡಿಕೊಂಡು ರೋಗಿಗಳ ಕುಟುಂಬಗಳಿಂದ ಹಣ ಪೀಕುತ್ತಿವೆ ಎಂಬ ದೂರುಗಳು ಕೇಳಿಬರುತ್ತಿವೆ.

ವೆಬ್ ಸೈಟ್ ಮೂಲಕ ಸರಕಾರಿ-ಖಾಸಗಿ ಆಸ್ಪತ್ರೆಗಳ ಬೆಡ್ ಮಾಹಿತಿ ಒದಗಿಸಲು ಕಾರಜೋಳ ಸೂಚನೆ
ಬೆಳಗಾವಿ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಬೆಡ್ ಗಳ ಮಾಹಿತಿಯನ್ನು ಪ್ರತಿದಿನ ವೆಬ್‌ಸೈಟ್ ಮೂಲಕ ಜನರಿಗೆ ನೀಡಬೇಕು ಎಂದು ಉಪಮುಖ್ಯಮಂತ್ರಿ ಮಂತ್ರಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೋವಿಡ್-19: ಖಾಸಗಿ ಆಸ್ಪತ್ರೆಗಳ ಹಾಸಿಗೆ ಲಭ್ಯತೆ ಕುರಿತು ವೆಬ್'ಸೈಟ್ ಪ್ರಾರಂಭಿಸಲು 'ಫನಾ' ಮುಂದು
ಖಾಸಗಿ ಆಸ್ಪತ್ರೆಗಳ ಹಾಸಿಗೆ ಲಭ್ಯತೆ ಕುರಿತು ಮಾಹಿತಿ ನೀಡಲು ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಂ ಅಸೋಸಿಯೇಷನ್ (ಫನಾ) ತನ್ನದೇ ಆದ ವೆಬ್'ಸೈಟ್ ವೊಂದನ್ನು ಪ್ರಾರಂಭಿಸಲು ಮುಂದಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಅಪಾಯಿಂಟ್ಮೆಂಟ್ ವೇಳೆ ಫಲಾನುಭವಿಗಳಿಗೆ ಕೋವಿಡ್ ಲಸಿಕೆ ಪ್ರಕಾರ, ಬೆಲೆ ಲಭ್ಯ
ಮೇ 1 ರಿಂದ ಎಲ್ಲಾ ವಯಸ್ಕರಿಗೂ ವ್ಯಾಕ್ಸಿನೇಷನ್ ಡ್ರೈವ್ ಆರಂಭವಾಗುತ್ತಿದ್ದು, ಈ ಬಾರಿ ಫಲಾನುಭವಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಲಸಿಕೆಗಳ ಪ್ರಕಾರ...

ಖಾಸಗಿ ಆಸ್ಪತ್ರೆಗಳಲ್ಲಿನ ಶೇ.50 ರಷ್ಟು ಹಾಸಿಗೆ ಸ್ವಾಧೀನಕ್ಕೆ ಜಂಟಿ ಕಾರ್ಯಾಚರಣೆ: ಬಸವರಾಜ ಬೊಮ್ಮಾಯಿ
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ಶೇ.50ರಷ್ಟು ಹಾಸಿಗೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಜಂಟಿ ಕಾರ್ಯಾಚರಣೆ ಮಾಡುವಂತೆ ಸಚಿವರಾದ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮೇ 1ರಿಂದ ಖಾಸಗಿ ಆಸ್ಪತ್ರೆಗಳು ಲಸಿಕೆ ತಯಾರಕರಿಂದ ನೇರವಾಗಿ ಖರೀದಿಸಲು ಅವಕಾಶ: ಕೇಂದ್ರ ಸರ್ಕಾರ
ಖಾಸಗಿ ಕೋವಿಡ್-19 ಲಸಿಕಾ ಕೇಂದ್ರಗಳು ಪ್ರಸ್ತುತ ಸರ್ಕಾರದಿಂದ ಕೋವಿಡ್ ಲಸಿಕೆ ಪಡೆದು ಪ್ರತಿ ಡೋಸ್ ಗೆ 250 ರೂಪಾಯಿಯಂತೆ ದರ ನಿಗದಿಪಡಿಸುತ್ತಿದೆ. ಆದರೆ ಮೇ 1ರಿಂದ ಖಾಸಗಿ ಕೋವಿಡ್-19 ಕೇಂದ್ರಗಳು ಲಸಿಕೆ ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಪಡೆಯಬಹುದಾಗಿದೆ.

ಬೆಡ್ ನೀಡದ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗುವುದು: ಸಚಿವ ಸುಧಾಕರ್
ಬೆಡ್ ನೀಡದ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ವಶಕ್ಕೆ ಪಡೆಯಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಎಚ್ಚರಿಸಿದ್ದಾರೆ.

