private hospitals

ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಮೀಸಲು: ಸಚಿವ ಡಾ. ಕೆ.ಸುಧಾಕರ್
ಕಳೆದ ಬಾರಿ ಖಾಸಗಿ ಆಸ್ಪತ್ರೆಗಳಲ್ಲಿ 50% ರಷ್ಟು ಹಾಸಿಗೆ ಕೋವಿಡ್ ಗೆ ಮೀಸಲಿಡಲಾಗಿತ್ತು. ಇದೇ ರೀತಿ ಈಗ ಹಾಸಿಗೆ ಮೀಸಲಿಡಬೇಕು ಎಂದು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಶಸ್ತ್ರಚಿಕಿತ್ಸೆಗೆ ಆಯುರ್ವೇದ ವೈದ್ಯರಿಗೆ ಅನುಮತಿ: ಇಂದು ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್
ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರ ಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಅಲೋಪತಿ ವೈದ್ಯರು ಶುಕ್ರವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಒಪಿಡಿ (ಹೊರರೋಗಿ ವಿಭಾಗದ) ಸೇವೆಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಮುಂದಾಗಿವೆ.

ಖಾಸಗಿ ಆಸ್ಪತ್ರೆಗಳಿಂದ ಅತಿಯಾದ ಶುಲ್ಕ; ಆರೋಗ್ಯದ ಮೇಲಿನ ಖರ್ಚು ಕಳಪೆ: ಕೋವಿಡ್-19 ಕುರಿತು ಸಂಸತ್ ಸಮಿತಿ
ಸರ್ಕಾರಿ ಆಸ್ಪತ್ರೆಗಳಲ್ಲಿ ಅಸಮರ್ಪಕ ಹಾಸಿಗೆಗಳು, ಕೋವಿಡ್-19 ಚಿಕಿತ್ಸೆಯ ನಿರ್ದಿಷ್ಟ ಮಾರ್ಗಸೂಚಿಗಳ ಅನುಪಸ್ಥಿತಿ ಖಾಸಗಿ ಆಸ್ಪತ್ರೆಗಳು ಅತಿ ಹೆಚ್ಚಿನ ಶುಲ್ಕ ವಿಧಿಸುವುದಕ್ಕೆ ಕಾರಣವಾಗಿದ್ದು, ಸುಸ್ಥಿರ ಬೆಲೆ ಮಾದರಿಳಿಂದ ಕೋವಿಡ್-19 ನಿಂದ ಉಂಟಾಗುತ್ತಿರುವ ಅನೇಕ ಸಾವುಗಳನ್ನು ತಪ್ಪಿಸಬಹುದಿತ್ತು ಎಂದು ಸಂಸತ್ ಸಮಿತಿ ವರದಿ ನೀಡಿದೆ.

ನರೇಂದ್ರ ಮೋದಿ ಮತ್ತು ಬಿ ಎಸ್ ಯಡಿಯೂರಪ್ಪನವರು ಕೊರೋನಾಕ್ಕಿಂತಲೂ ಅಪಾಯಕಾರಿ: ಸಿದ್ದರಾಮಯ್ಯ ಆರೋಪ
ಕೊರೋನಾ ಸೋಂಕಿನಲ್ಲಿ ಭಾರತವನ್ನು ವಿಶ್ವದಲ್ಲಿಯೇ ನಂಬರ್ 1 ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉತ್ಸುಕವಾಗಿದ್ದರೆ, ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕರ್ನಾಟಕವನ್ನು ಕೊರೋನಾ ಸೋಂಕಿನಲ್ಲಿ ದೇಶದಲ್ಲಿ ನಂಬರ್ 1 ಮಾಡಲು ಹೊರಟಿದ್ದಾರೆ ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಆಕ್ಸಿಜನ್ ಪೂರೈಕೆಗೆ ಹೈದರಾಬಾದ್, ಗುಜರಾತ್ ಕಂಪನಿಗಳೊಂದಿಗೆ ಒಡಂಬಡಿಕೆ: ಸಚಿವ ಸುಧಾಕರ್
ರಾಜ್ಯದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಗೆ ಹೈದರಾಬಾದ್ ಮತ್ತು ಗುಜರಾತ್ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆಗಳಲ್ಲಿ ಇರುವ ವ್ಯವಸ್ಥೆ ಬಗ್ಗೆ ವರದಿ ಸಲ್ಲಿಸಿ:ಹೈಕೋರ್ಟ್ ಆದೇಶ
ಕೋವಿಡ್-19 ರಾಜ್ಯ ಮಟ್ಟದ ತಜ್ಞರ ಸಮಿತಿಗೆ ಆದೇಶ ನೀಡಿರುವ ಕರ್ನಾಟಕ ಹೈಕೋರ್ಟ್, ಖಾಸಗಿ ಆಸ್ಪತ್ರೆಗಳಲ್ಲಿ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಇರುವ ಕೋವಿಡ್ ರೋಗಿಗಳ ಸೌಲಭ್ಯದ ಬಗ್ಗೆ ವರದಿ ಸಲ್ಲಿಸುವಂತೆ ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ, ಒಂದು ವಾರದೊಳಗೆ ಸಮಿತಿ ವರದಿ

ಸರ್ಕಾರಿ ಕೋಟಾದಲ್ಲಿ 42, 291 ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ- ಆರೋಗ್ಯ ಇಲಾಖೆ
ಕೋವಿಡ್ ಸೋಂಕು ಆರಂಭಗೊಂಡಂದಿನಿಂದ ಇಂದಿನವರೆಗೆ ಸರ್ಕಾರದ ಪೂರ್ವಾನುಮತಿ ಪಡೆದು ಖಾಸಗಿ ಆಸ್ಪತ್ರೆಗಳಲ್ಲಿ ಆ.28ರವರೆಗೆ 42,291 ರೋಗಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಒಟ್ಟು 169.55 ಕೋಟಿ ರೂ. ವೆಚ್ಚವಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಖಾಸಗಿ ಆಸ್ಪತ್ರೆಗಳ ಅವಾಂತರ; ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಮುಂದೆ ಸದಸ್ಯರ ಆಕ್ರೋಶ
ಕೋವಿಡ್ ಚಿಕಿತ್ಸಾ ಕೇಂದ್ರಗಳಲ್ಲಿ ಅಸಮರ್ಪಕ ನಿರ್ವಹಣೆ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ನೀಡದಿರುವ ಬಗ್ಗೆ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಗೆ ದೂರು ಬಂದ ಹಿನ್ನೆಲೆಯಲ್ಲಿ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಸಮಿತಿ ಸಭೆ ನಡೆಸಿದ್ದು, ಸಭೆಯಲ್ಲಿ ಮಹತ್ತರ ವಿಚಾರಗಳ ಬಗ್ಗೆ ಚರ್ಚಿಸಲಾಯಿತು.

ಕೊರೋನಾ ಚಿಕಿತ್ಸೆ: ಸಿಎಂ, ಕೇಂದ್ರ ಸಚಿವರಿಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆಯಿಲ್ಲವೇ?
ಕೊರೋನಾ ಸೋಂಕು ದೃಢಪಟ್ಟ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹಿಡಿದು ಕೆಲ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬದಲು ಖಾಸಗಿ....

