Priyank Kharge

ನ. 29ರಿಂದ ‘ಬೆಂಗಳೂರು ಟೆಕ್ ಸಮ್ಮಿಟ್’ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ
26ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆ ನವೆಂಬರ್ 29 ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ; ಜೀವಕ್ಕೆ ಹಾನಿಯಾದರೆ ಪ್ರಿಯಾಂಕ್ ಖರ್ಗೆ ನೇರ ಹೊಣೆ: ಬಿಜೆಪಿ
ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಶಹಬಾದ್ ಬಳಿ ಅವರ ವಾಹನ ತಡೆದ ಅಪರಿಚಿತರು ಬಿಯರ್ ಬಾಟಲಿಗಳಿಂದ ತಲೆಗೆ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ತಂತ್ರಜ್ಞಾನದಲ್ಲಿ ತೆಲಂಗಾಣಕ್ಕಿಂತ ಕರ್ನಾಟಕ ಮುಂದಿದೆ: ಸಚಿವ ಪ್ರಿಯಾಂಕ್ ಖರ್ಗೆ
ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರಗಳಲ್ಲಿ ಕರ್ನಾಟಕ ರಾಜ್ಯ ತೆಲಂಗಾಣಕ್ಕಿಂತ ಮುಂದಿದೆ ಎಂದು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಹೇಳಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಕಿಯೋನಿಕ್ಸ್ನಲ್ಲಿ 500 ಕೋಟಿ ರೂ. ಅವ್ಯವಹಾರ; ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖೆ: ಪ್ರಿಯಾಂಕ್ ಖರ್ಗೆ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ(ಕಿಯೊನಿಕ್ಸ್) ಸುಮಾರು 500 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗುರುವಾರ ಆರೋಪಿಸಿದ್ದಾರೆ.

ಕೆಇಎ ಪರೀಕ್ಷಾ ಅಕ್ರಮ: ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
ಕೆಇಎ ಪರೀಕ್ಷಾ ವ್ಯಾಪಕ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆಯವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಮಂಗಳವಾರ ಆಗ್ರಹಿಸಿದೆ.

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ರಾಜಕೀಯ ಇತಿಹಾಸವನ್ನು ಓದಲಿ: ಸಚಿವ ಪ್ರಿಯಾಂಕ್ ಖರ್ಗೆ
ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ರಾಜಕೀಯ ಇತಿಹಾಸವನ್ನು ಓದಬೇಕು ಎಂದು ಸಲಹೆ ನೀಡಿದ್ದಾರೆ.

ರಾಜ್ಯ ಪ್ರವಾಸದ ಅಗತ್ಯವಿಲ್ಲ, ದೆಹಲಿಯಿಂದ ಬರ ಪರಿಹಾರ ತನ್ನಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಬರ ಅಧ್ಯಯನ ಮುಗಿದಿದೆ. ಕೇಂದ್ರದ ತಂಡವೇ ಬರ ಪರಿಶೀಲನೆ ಮಾಡಿ ವರದಿ ಕೂಡ ಕೊಟ್ಟಿದೆ. ಹೀಗಿರುವಾಗ ಬಿಜೆಪಿಯ 17 ತಂಡಗಳ ಬರ ಅಧ್ಯಯನ ಪ್ರವಾಸ ಅಗತ್ಯವೇನಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಪ್ರಶ್ನಿಸಿದ್ದಾರೆ.

ಸೈಬರ್ ಸುರಕ್ಷತೆಯಲ್ಲಿ ಮೆಟಾದೊಂದಿಗೆ ಸಹಭಾಗಿತ್ವದ ಕುರಿತು ಪರಿಶೀಲನೆ: ಪ್ರಿಯಾಂಕ್ ಖರ್ಗೆ
ಸೈಬರ್ ಸುರಕ್ಷತೆ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮ ದೈತ್ಯ ಮೆಟಾದೊಂದಿಗೆ ಸಹಭಾಗಿತ್ವದ ಕುರಿತು ರಾಜ್ಯ ಸರ್ಕಾರ ಪರಿಶೀಲನೆ ನಡೆಸಲಿದೆ ಎಂದು ಐಟಿ ಸಚಿವ ಪ್ರಿಯಾಂಕ್ ಖರ್ಗೆ...

ನಾಳೆ ಹೈಕಮಾಂಡ್ ನೀವೇ ಮುಖ್ಯಮಂತ್ರಿ ಅಂದ್ರೆ ನಾನು ಯೆಸ್ ಅಂತೀನಿ: ಟ್ವೀಟ್ ಮಾಡಿ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸುವಾಗ ನಾನು ನೀಡಿರುವ ಹೇಳಿಕೆಯು ತಪ್ಪಾಗಿ ಅರ್ಥೈಸಿ ವರದಿಯಾಗುತ್ತಿರುವುದು ಈಗಷ್ಟೇ ನನ್ನ ಗಮನಕ್ಕೆ ಬಂದಿರುವ ಕಾರಣ ಗೊಂದಲ ನಿವಾರಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ.

