Priyank Kharge

ಅದೃಷ್ಟವಿದ್ದರೆ ಸಿಎಂ ಆಗುವ ಆಸೆ ಇದೆ ಎಂದ ಪರಮೇಶ್ವರ್! ಡಿಕೆ ಸುರೇಶ್ ಹೇಳಿದ್ದು ಹೀಗೆ...
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇನ್ನೂ ಆರು ತಿಂಗಳು ಕಳೆದಿಲ್ಲ. ಆಗಲೇ ಮುಖ್ಯಮಂತ್ರಿ ಬದಲಾವಣೆ, ಆಕಾಂಕ್ಷಿಗಳು ಸುತ್ತ ನಡೆಯುತ್ತಿರುವ ಚರ್ಚೆಯಿಂದ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಜಗ ಜಾಹೀರು ಆಗುತ್ತಿದೆ.

ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್; ಹೈಕಮಾಂಡ್ ಹೇಳಿದ್ರೆ ಸಿಎಂ ಆಗೋಕೆ ನಾನು ಸಿದ್ಧ: ಪ್ರಿಯಾಂಕ್ ಖರ್ಗೆ
ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂತ ಹೇಳಿದರೆ ನಾನು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಪಿಎಸ್‌ಐ ಪರೀಕ್ಷೆ ಹಗರಣ 2-3 ವಾರಗಳಲ್ಲಿ ಅಂತಿಮ ಘಟ್ಟ ತಲುಪಲಿದೆ: ಸರ್ಕಾರ
ಆಕಾಂಕ್ಷಿಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿದ್ದು, ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪರೀಕ್ಷೆ ಹಗರಣ 2-3 ವಾರಗಳಲ್ಲಿ ಅಂತಿಮ ಘಟ್ಟ ತಲುಪಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಹೇಳಿದರು.

ಎಫ್‌ಡಿಎ ಪರೀಕ್ಷೆ ಹಗರಣ: ಪ್ರಿಯಾಂಕ್ ಖರ್ಗೆ ಮೂಗಿನಡಿಯಲ್ಲಿ ಅಕ್ರಮ ನಡೆದಿದೆ; ಬಿಜೆಪಿ ಆರೋಪ
ವಿವಿಧ ನಿಗಮ ಮಂಡಳಿಗಳ ಪ್ರಥಮ ದರ್ಜೆ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಈ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಿಗಳ ಜೊತೆ ಸರ್ಕಾರ ಶಾಮೀಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಆಪರೇಷನ್ ಕಮಲಕ್ಕೆ 1,000 ಕೋಟಿ ರೂ. ಬಳಕೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಆರೋಪ
ಅಪರೇಷನ್ ಕಮಲಕ್ಕೆ ಬಿಜೆಪಿ ಒಂದು ಸಾವಿರ ಕೋಟಿ ರೂ. ಬಳಕೆ ಮಾಡುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಆರೋಪಿಸಿದರು.

ಒಂದೇ ದಿನ 3 ಸ್ಪರ್ಧಾತ್ಮಕ ಪರೀಕ್ಷೆ: ದಿನಾಂಕ ಬದಲಾವಣೆಗೆ ಸಿಎಂಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ
ಲೋಕಸೇವಾ ಆಯೋಗವು 2023ರ ನವೆಂಬರ್ 5ರಂದು ಒಂದೇ ದಿನ 3 ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿಗೊಳಿಸಿರುವುದರಿಂದ ಅಭ್ಯರ್ಥಿಗಳಲ್ಲಿ ಗೊಂದಲ ಉಂಟಾಗಿದ್ದು, ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಸೂಚನೆ ನೀಡುವಂತೆ...

ಕರ್ನಾಟಕದ ಆರ್ಥಿಕ ಸುಧಾರಣೆಗೆ ಉತ್ತಮ ಸರ್ಕಾರಿ ನೀತಿ ಅವಶ್ಯಕ: ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ
ಮುಂದಿನ ದಶಕದಲ್ಲಿ ಕರ್ನಾಟಕವು ಒಂದು ಟ್ರಿಲಿಯನ್ ಆರ್ಥಿಕತೆ ಸಾಧಿಸುವ ಗುರಿಯನ್ನು ಹೊಂದಿದ್ದು, ಉದ್ಯಮಿಗಳ ವ್ಯವಹಾರವನ್ನು ಸುಲಭಗೊಳಿಸಲು ಉತ್ತಮ ಸರ್ಕಾರಿ ನೀತಿಗಳನ್ನು ಹೊರಡಿಸುವ ಅಗತ್ಯವನ್ನು ವಿದ್ಯುನ್ಮಾನ, ಐಟಿ/ಬಿಟಿ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಅಮೆರಿಕ ಕಂಪನಿಗಳಿಂದ ರಾಜ್ಯದಲ್ಲಿ 25,000 ಕೋಟಿ ರೂ. ಹೂಡಿಕೆಗೆ ಆಸಕ್ತಿ!
ಅಮೆರಿಕ ಪ್ರವಾಸದ ವೇಳೆ ವಿವಿಧ ಕಂಪನಿಗಳ ಜೊತೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅಲ್ಲಿನ ಕಂಪನಿಗಳಿಂದ ರಾಜ್ಯದಲ್ಲಿ ಸುಮಾರು 25,000 ಕೋಟಿ ರೂಪಾಯಿ (3 ಶತಕೋಟಿ ಡಾಲರ್) ಹೂಡಿಕೆ ಮಾಡುವ ಆಸಕ್ತಿ ವ್ಯಕ್ತಪಡಿಸಿವೆ.

ಉದ್ದೇಶಿತ ಸತ್ಯ-ಪರಿಶೀಲನಾ ಘಟಕ ಸ್ಥಾಪನೆಗೆ ರಾಜ್ಯ ಸರ್ಕಾರ ಬುನಾದಿ
ಸಾಮಾಜಿಕ ಮಾಧ್ಯಮ ಮತ್ತು ಇತರ ವೇದಿಕೆಗಳಲ್ಲಿ ನಕಲಿ ಅಥವಾ ಸುಳ್ಳುಸುದ್ದಿ ಮತ್ತು ತಪ್ಪು ಮಾಹಿತಿಗಳನ್ನು ತಡೆಗಟ್ಟಲು, ಕರ್ನಾಟಕ ಸರ್ಕಾರವು ಗುರುವಾರ ತನ್ನ ಉದ್ದೇಶಿತ ಸತ್ಯ-ಪರಿಶೀಲನಾ ಮಂಡಳಿಯ ಚೌಕಟ್ಟನ್ನು ಹೊರತಂದಿದೆ.

